ರಾಜಕೀಯ
UttarPradesh | ಉತ್ತರ ಪ್ರದೇಶ : ಬ್ಲಾಕ್ ನಿಂದ ರಾಜ್ಯ ಮಟ್ಟದವರೆಗಿನ ಕಾಂಗ್ರೆಸ್ ಘಟಕಗಳ ವಿಸರ್ಜನೆಗೊಳಿಸಿದ ಹೈಕಮಾಂಡ್
ನವದೆಹಲಿ: ಉತ್ತರ ಪ್ರದೇಶದ (UttarPradesh) ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. 2027ರ ವಿಧಾನಸಭೆಯ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶೀಘ್ರದಲ್ಲೇ ಪುನಾರಚಿಸಲಾಗುವುದು ಎಂದು ತಿಳಿದು ಬಂದಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಪಿಸಿಸಿಯ ಸಂಪೂರ್ಣ ರಾಜ್ಯ ಘಟಕವನ್ನು ವಿಸರ್ಜಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 2019 ಮತ್ತು 2024ರ ಲೋಕಸಭೆ ಚುನಾವಣೆ ಮತ್ತು 2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿತ್ತು. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಮತ್ತೆ ಬಲಪಡಿಸುವ ಮತ್ತು ಸಂಘಟಿಸುವ ಅನಿವಾರ್ಯತೆ ಖರ್ಗೆ ಅವರಿಗೆ ಎದುರಾಗಿದೆ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ಬಳಿಕ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.
ವಿಶೇಷವಾಗಿ ಯುವಕರಿಗೆ ಅವಕಾಶಗಳನ್ನು ಕೊಡುವ ಮೂಲಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.
403 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಅತಿ ದೊಡ್ಡ ರಾಜ್ಯ ಉತ್ತರಪ್ರದೇಶ ಯಾವುದೇ ಪಕ್ಷಕ್ಕೆ ಮಹತ್ವ ಹೊಂದಿದೆ. ಹಾಗಾಗಿ ಈಗಿನಿಂದಲೇ ಪಕ್ಷ ಸಂಘಟನೆಗೆ ಎಐಸಿಸಿ ಮುಂದಾಗಿದೆ.
ಅದರ ಮೊದಲ ಹಂತವಾಗಿ ಪಕ್ಷದ ಸಮಿತಿಗಳ ವಿಸರ್ಜನೆ ಮಾಡಿ ಪುನರ್ ರಚಿಸಲಾಗುತ್ತಿದೆ. ನವೆಂಬರ್ 6ರಂದು ಮಲ್ಲಿಕಾರ್ಜುನ ಖರ್ಗೆ ಅವರು ಹಿಮಾಚಲ ಪ್ರದೇಶದ ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಎಲ್ಲಾ ಘಟಕಗಳನ್ನು ವಿಸರ್ಜಿಸಿದ್ದರು
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
ರಾಜಕೀಯ
2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.
ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ.ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ.
ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ. ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.
-
ದಕ್ಷಿಣ ಕನ್ನಡ19 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ18 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ17 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ24 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ನಿಧನ ವಾರ್ತೆ17 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ16 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್18 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















