ನಿಧನ ವಾರ್ತೆ
WhatsApp status-ಮೈದುನನ ಒಂದೇ ಒಂದು ವಾಟ್ಸಾಪ್ ಸ್ಟೇಟಸ್ ನೋಡಿ ಅತ್ತಿಗೆ ಸೂ*ಸೈಡ್ – ಅಂತಹದೇನಿತ್ತು ಅದರಲ್ಲಿ ?
ಬೆಳಗಾವಿ ಜಿಲ್ಲೆಯ ಕುಸನಾಳ ಗ್ರಾಮದ 28 ವರ್ಷದ ಮಹಿಳೆ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಅನ್ನೋರ ಜೊತೆಗೆ ವಿವಾಹ ಆಗಿತ್ತು. ಇವರಿಗೆ ಎರಡು ಮಕ್ಕಳು ಸಹ ಇತ್ತು. ಏತನ್ಮಧ್ಯೆ ಪತಿಯ ಅವಿವಾಹಿತ ಸಹೋದರ ಸಾಗರ ಕಾಂಬಳೆ ಜತೆ ಅರತಿ ಲವ್ವಿಡವ್ವಿ ಶುರು ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆ ಆಕೆ ಅಕ್ಕನ ಮನೆಗೆ ಹೋದವಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊಲೀಸರು ತನಿಖೆ ಆರಂಭಿಸಿದಾಗ ಒಂದು ವಾಟ್ಸಪ್ ಸ್ಟೇಟಸ್ನಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ.
ಅತ್ತಿಗೆ –ಮೈದುನರ ಸಂಬಂದ ತಾಯಿ ಮತ್ತು ಮಗನಷ್ಟೆ ಪವಿತ್ರವಾದದ್ದು. ಅಣ್ಣನ ಪತ್ನಿಯನ್ನು ಸಹೋದರರು ತಾಯಿಯಂತೆ ನೋಡುವುದು ಭಾರತೀಯ ಸಂಸ್ಕೃತಿ. ಆದರೇ ಇಂತಹ ಮನುಷ್ಯ ಸಂಬಂಧಗಳು ಚೌಕಟ್ಟು ಮೀರಿ ವಿಪರೀತವಾಗಿ ವರ್ತಿಸಿದಾಗ ಕುಟುಂಬದಲ್ಲಿ ಬಿರುಗಾಳಿಯೇ ಎದ್ದೇಳುತ್ತದೆ. ಭರಿಸಲಾಗದ ಅನಾಹುತಗಳು ಸಂಭವಿಸುತ್ತದೆ.
ಇಂತಹುದೆ ಒಂದು ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಮೈದುನ ಹಾಕಿದ ಸ್ಟೇಟಸ್ ನೋಡಿದ ಅತ್ತಿಗೆ ಸೀದಾ ಅಕ್ಕನ ಮನೆಗೆ ಹೋದವಳೆ ಜೀವ ಕಳೆದು ಕೊಂಡು ಬಿಟ್ಟಿದ್ದಾಳೆ . ಅಷ್ಟಕ್ಕೂ ಮೈದುನ ಹಾಕಿದ ಸ್ಟೇಟಸ್ ನಲ್ಲಿ ಅಂತಹುದು ಏನಿತ್ತು ಅಂತೀರಾ? ಈ ಸ್ಟೋರಿ ನೋಡಿಕೊಂಡು ಬನ್ನಿ
ಬೆಳಗಾವಿ ಜಿಲ್ಲೆಯ ಕುಸನಾಳ ಗ್ರಾಮದ 28 ವರ್ಷದ ಮಹಿಳೆ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಅನ್ನೋರ ಜೊತೆಗೆ ವಿವಾಹ ಆಗಿತ್ತು. ಇವರಿಗೆ ಎರಡು ಮಕ್ಕಳು ಸಹ ಇತ್ತು. ಏತನ್ಮಧ್ಯೆ ಪತಿಯ ಅವಿವಾಹಿತ ಸಹೋದರ ಸಾಗರ ಕಾಂಬಳೆ ಜತೆ ಅರತಿ ಲವ್ವಿಡವ್ವಿ ಶುರು ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಎರಡು ದಿನಗಳ ಹಿಂದೆ ಆಕೆ ಅಕ್ಕನ ಮನೆಗೆ ಹೋದವಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊಲೀಸರು ತನಿಖೆ ಆರಂಭಿಸಿದಾಗ ಒಂದು ವಾಟ್ಸಪ್ ಸ್ಟೇಟಸ್ನಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ.
ಅಂತಹುದ್ದೇನಿತ್ತು ಸ್ಟೇಟಸ್ನಲ್ಲಿ?
ಮೈದುನನ ಸ್ಟೇಟಸ್ನಲ್ಲಿ ಈ ಇಬ್ಬರ ಫೋಟೋ ಇತ್ತು ಎನ್ನಲಾಗಿದೆ. ಅಂದರೆ ಮೈದುನನೊಂದಿಗೆ ಸಂಬಂಧ ಇಟ್ಟುಕೊಂಡಿದ್ದ ಈಕೆ ಫೋಟೋಗೆ ಪೋಸ್ ನೀಡಿದ್ದಳು. ಈ ಫೋಟೋಗಳು ಹಾಗೂ ಆತನ ಫೋಟೋವನ್ನ ಒಂದೇ ಪ್ರೇಮ್ನಲ್ಲಿ ಇರಿಸಿ ಸ್ಟೇಟಸ್ ಹಾಕಿಕೊಂಡಿದ್ದಾನೆ. ಇದನ್ನು ನೋಡಿದ ಸಾಕಷ್ಟು ಜನರು ಮಹಿಳೆಯ ಗಂಡನಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇದಾದ ನಂತರ ಆತ ತನ್ನ ಹೆಂಡತಿ ಬಳಿ ಬಂದು ಜಗಳ ಆರಂಭ ಮಾಡಿದ್ದಾನೆ. ಈ ಸಮಯದಲ್ಲಿ ಹಿರಿಯರು ಸೇರಿಕೊಂಡು ಜಗಳವನ್ನು ಬಿಡಿಸಿ ಆಕೆಯನ್ನು ಸ್ವಲ್ಪ ದಿನಗಳ ಕಾಲ ಆಕೆಯ ಅಕ್ಕನ ಮನೆಯಲ್ಲಿ ಇರುವಂತೆ ಹೇಳಿದ್ದಾರೆ. ಆದರೆ ನಮ್ಮಿಬ್ಬರ ಈ ಸಂಬಂಧ ಬಯಲಾಯ್ತಲ್ಲ ಎಂದು ನೊಂದು ಅಕ್ಕನ ಮನೆಗೆ ಬಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಿಧನ ವಾರ್ತೆ
Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.
ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.
ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ನಿಧನ ವಾರ್ತೆ
Kerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕೊಟ್ಟಾಯಂ (ಕೇರಳ): ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ಮಾಲೀಕ ರಾಜೇಶ್ ಪಲ್ಲಟ್ ಅವರ ನಿವಾಸದ ಸಮೀಪದ ತಾತ್ಕಾಲಿಕ ಶೆಡ್‌ನಲ್ಲಿ ಬ್ರಹ್ಮದತ್ತನ್ ವಿಶ್ರಾಂತಿ ಪಡೆಯುತ್ತಿತ್ತು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದೆ ಎನ್ನಲಾಗಿದೆ.
ಸುಮಾರು 28 ವರ್ಷಗಳ ಹಿಂದೆ ಅರುಣಾಚಲ ಪ್ರದೇಶದ ದಟ್ಟ ಕಾಡುಗಳಲ್ಲಿ ಮರದ ಆನೆಯಾಗಿ ಕೆಲಸ ಮಾಡುತ್ತಿದ್ದ ಬ್ರಹ್ಮದತ್ತನ್‌ನ್ನು ಕೊಟ್ಟಾಯಂನ ಪುತುಪ್ಪಳ್ಳಿಯ ಪೋಥನ್ ವರ್ಗೀಸ್ ಹಾಗೂ ಚಾಕೊ ಸಹೋದರರು ಕೇರಳಕ್ಕೆ ಕರೆತಂದಿದ್ದರು. ಆರಂಭದಲ್ಲಿ ‘ಪುತುಪ್ಪಳ್ಳಿ ಬ್ರಹ್ಮದತ್ತನ್’ ಎಂದು ಕರೆಯಲಾಗುತ್ತಿದ್ದ ಆನೆಯನ್ನು 16 ವರ್ಷಗಳ ಹಿಂದೆ ಪಲ್ಲಟ್ ಕುಟುಂಬ ಖರೀದಿಸಿದ ಬಳಿಕ ‘ಪಲ್ಲಟ್ಟು ಬ್ರಹ್ಮದತ್ತನ್’ ಎಂದು ಮರುನಾಮಕರಣ ಮಾಡಲಾಗಿತ್ತು.
10 ಅಡಿ 2 ಇಂಚು ಎತ್ತರ, ಅಗಲವಾದ ಹಣೆ ಹಾಗೂ ಉದ್ದನೆಯ ದಂತಗಳನ್ನು ಹೊಂದಿದ್ದ ಬ್ರಹ್ಮದತ್ತನ್ ಮಧ್ಯ ಕೇರಳದ ಪ್ರಮುಖ ದೇವಾಲಯ ಉತ್ಸವಗಳಲ್ಲಿ ಪ್ರಸಿದ್ಧಿ ಪಡೆದಿತ್ತು. ತ್ರಿಶೂರ್ ಪೂರಂನ ಪರಮೆಕ್ಕಾವು ದೇವಸ್ಥಾನದ ‘ರಾತ್ರಿ ಪೂರಂ’ನಲ್ಲಿ ದೇವರ ವಿಗ್ರಹವನ್ನು ಹೊತ್ತು ಸಾಗುತ್ತಿದ್ದ ಇದು, ಎಟ್ಟುಮನೂರು ಎಝರಪೊನ್ನನ ಹಾಗೂ ವೈಕಥಷ್ಟಮಿ ಉತ್ಸವಗಳ ಪ್ರಮುಖ ಆಕರ್ಷಣೆಯಾಗಿತ್ತು.
ತ್ರಿಶೂರ್ ಪೂರಂ ಬಳಿಕ ಗುರುವಾಯೂರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಸೊಂಡಿಲೆತ್ತಿ ನಮಸ್ಕರಿಸುತ್ತಿದ್ದ ದೃಶ್ಯವೂ ಭಕ್ತರ ಗಮನ ಸೆಳೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲೂ ‘ಗಜಕೌಸ್ತುಭಂ ಪಲ್ಲಟ್ಟು ಬ್ರಹ್ಮದತ್ತನ್’ ಹೆಸರಿನ ಇನ್‌ಸ್ಟಾಗ್ರಾಂ ಪುಟದ ಮೂಲಕ ಆನೆಗೆ ಅಪಾರ ಅಭಿಮಾನಿಗಳಿದ್ದರು.
ಮಾವುತನೊಂದಿಗೆ ಅಪರೂಪದ ಬಾಂಧವ್ಯ
ಬ್ರಹ್ಮದತ್ತನ್ ತನ್ನ ದೀರ್ಘಕಾಲದ ಮಾವುತ ದಾಮೋದರನ್ ನಾಯರ್ ಅವರೊಂದಿಗೆ ವಿಶೇಷ ಭಾವನಾತ್ಮಕ ಬಾಂಧವ್ಯ ಹೊಂದಿತ್ತು. ಆರಂಭದಲ್ಲಿ ಮಲಯಾಳಂ ಅರ್ಥವಾಗದಿದ್ದ ಆನೆಗೆ ದಾಮೋದರನ್ ಪ್ರೀತಿಯಿಂದ ಹಿಂದಿ ಭಾಷೆಯ ಮೂಲಕ ತರಬೇತಿ ನೀಡಿದ್ದರು.
ವಡನಪ್ಪಳ್ಳಿ ಗಣೇಶಮಂಗಲಂ ಉತ್ಸವದ ವೇಳೆ ಮತ್ತೊಂದು ಆನೆ ದಾಮೋದರನ್ ನಾಯರ್ ಅವರ ಮೇಲೆ ದಾಳಿ ಮಾಡಲು ಮುಂದಾದಾಗ, ಬ್ರಹ್ಮದತ್ತನ್ ಮಧ್ಯಪ್ರವೇಶಿಸಿ ಆ ಆನೆಯನ್ನು ಓಡಿಸಿ ತನ್ನ ಮಾವುತನನ್ನು ರಕ್ಷಿಸಿತ್ತು ಎನ್ನಲಾಗಿದೆ.
2021ರ ಜೂನ್‌ನಲ್ಲಿ ದಾಮೋದರನ್ ನಾಯರ್ (74) ನಿಧನರಾದಾಗ, ಬ್ರಹ್ಮದತ್ತನ್ ಅವರ ಪಾರ್ಥಿವ ಶರೀರದ ಬಳಿ ಸೊಂಡಿಲೆತ್ತಿ ಅಂತಿಮ ನಮನ ಸಲ್ಲಿಸಿದ್ದ ದೃಶ್ಯ ಭಾರೀ ವೈರಲ್ ಆಗಿತ್ತು. ಈ ಘಟನೆ ಆನೆ ಮತ್ತು ಮಾವುತನ ನಡುವಿನ ಅಪರೂಪದ ಬಾಂಧವ್ಯಕ್ಕೆ ಸಾಕ್ಷಿಯಾಗಿತ್ತು.
ಇದೀಗ ಬ್ರಹ್ಮದತ್ತನ್ ನಿಧನದ ಸುದ್ದಿ ತಿಳಿದು ಸಾವಿರಾರು ಅಭಿಮಾನಿಗಳು ಹಾಗೂ ಸ್ಥಳೀಯರು ಮೇಲಂಪಾರಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಗಜರಾಜನ ಅಕಾಲಿಕ ನಿಧನಕ್ಕೆ ಕೇರಳದ ದೇವಸ್ವಂ ಮಂಡಳಿ ಹಾಗೂ ಉತ್ಸವ ಪ್ರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಶಾಂತ ಸ್ವಭಾವದ ಬ್ರಹ್ಮದತ್ತನ್ ಜೊತೆ ಮಾವುತರು ಸಾಮಾನ್ಯವಾಗಿ ಅಂಕುಶ ಬಳಸುತ್ತಿರಲಿಲ್ಲ. ಜಾತ್ರೆ ಹಾಗೂ ಉತ್ಸವಗಳ ಸಂದರ್ಭಗಳಲ್ಲಿ ಮಾತ್ರ ನೆಪಕ್ಕಾಗಿ ಅಂಕುಶವನ್ನು ಕೈಯಲ್ಲಿ ಹಿಡಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಗಾಂಭೀರ್ಯದ ನಡೆ ಹಾಗೂ ಸೌಮ್ಯ ಸ್ವಭಾವದಿಂದ ‘ಗಜರಾಜ’ ಎಂಬ ಹೆಸರಿಗೆ ಅನ್ವರ್ಥವಾಗಿದ್ದ ಬ್ರಹ್ಮದತ್ತನ್‌ನ ದುರಂತ ಅಂತ್ಯ ಆನೆ ಪ್ರಿಯರಲ್ಲಿ ತೀವ್ರ ನೋವು ಮೂಡಿಸಿದೆ.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















