ರಿಲಯನ್ಸ್ […]" /> ರಿಲಯನ್ಸ್ […]"> Jio-ಹೊಸ ಬಂಪರ್‌ ಆಫರ್; ಇನ್ಮುಂದೆ ಒಂದು ವರ್ಷದವರೆಗೆ ರೀಚಾರ್ಜ್ ಟೆನ್ಶನ್ ಇಲ್ಲ..! ಸಿಗಲಿದೆ 912GB ಡೇಟಾ - Nikhara News | Kannada News Website
Connect with us

ಬಿಗ್ ನ್ಯೂಸ್

Jio-ಹೊಸ ಬಂಪರ್‌ ಆಫರ್; ಇನ್ಮುಂದೆ ಒಂದು ವರ್ಷದವರೆಗೆ ರೀಚಾರ್ಜ್ ಟೆನ್ಶನ್ ಇಲ್ಲ..! ಸಿಗಲಿದೆ 912GB ಡೇಟಾ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ 84 ದಿನದಿಂದ 365 ದಿನಗಳವರೆಗಿನ ವಿವಿಧ ವ್ಯಾಲಿಡಿಟಿಯ ಪ್ಲಾನ್‌ಗಳನ್ನು ಹೊರತಂದಿದೆ. ಈ ಆಫರ್‌ಗಳಲ್ಲಿ ಕನಿಷ್ಠ 11 ತಿಂಗಳವರೆಗೆ ಯಾವುದೇ ರೀಚಾರ್ಜ್ ಟೆನ್ಶನ್ ಇಲ್ಲದೇ ನೆಟ್‌ವರ್ಕ್ ಸೇವೆಗಳನ್ನು ಜಿಯೋ ಬಳಕೆದಾರರು ಅನುಭವಿಸಬಹುದು.

Ad Widget

Ad Widget alt="Ad Widget"/>

Ad Widget

ರಿಲಯನ್ಸ್ ಜಿಯೋ ಗ್ರಾಹಕರು ಆಗಾಗ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಆಕ್ಟಿವೇಟ್ ಮಾಡಿಕೊಳ್ಳುವ ಬದಲು ದೀರ್ಘಾವಧಿಯ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ. ವರ್ಷದ ಜೊತೆ ಅದಕ್ಕಿಂತಲೂ ಕಡಿಮೆ ಪ್ಲಾನ್‌ಗಳು ಸಹ ಜಿಯೋದಲ್ಲಿ ಗ್ರಾಹಕರಿಗೆ ಸಿಗುತ್ತಿವೆ. ಗ್ರಾಹಕರಿಗೆ 36,500 ಎಸ್‌ಎಂಎಸ್ ಮತ್ತು 912GB ಡೇಟಾ ಒಂದು ವರ್ಷ ವ್ಯಾಲಿಡಿಟಿಯ ಯೋಜನೆಯಲ್ಲಿ ಸಿಗುತ್ತದೆ.

Ad Widget

Ad Widget <> Ad Widget

ರಿಲಯನ್ಸ್ ಜಿಯೋ ನೀಡುತ್ತಿರುವ ಈ ಪ್ರಿಪೇಯ್ಡ್ ಪ್ಲಾನ್ 365 ದಿನದ ವ್ಯಾಲಿಡಿಟಿಯನ್ನು ಒಳಗೊಂಡಿದೆ. 365 ದಿನಕ್ಕೆ ಒಟ್ಟಾರೆ 912GB ಡೇಟಾ ಸಿಗುತ್ತದೆ. ಅಂದ್ರೆ ಪ್ರತಿದಿನ 2.5GB ಡೇಟಾ ಬಳಸಬಹುದಾಗಿದೆ. ಎಲ್ಲಾ ನೆಟ್‌ವರ್ಕ್‌ಗೆ ಅನ್‌ಲಿಮಿಟೆಡ್ ಕರೆ ಮಾಡಬಹುದು. ಇದೆಲ್ಲದರ ಜೊತೆ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕೌಡ್ ಉಚಿತ ಆಕ್ಸೆಸ್ ಗ್ರಾಹಕರಿಗೆ ಸಿಗುತ್ತದೆ. ಪ್ರತಿದಿನ ಉಚಿತವಾಗಿ 100 ಎಸ್‌ಎಂಎಸ್ ಕಳುಹಿಸುವ ಆಯ್ಕೆಯನ್ನು ನೀಡಲಾಗಿದೆ. ಅನ್‌ಲಿಮಿಟೆಡ್ 5G ಸಹ ಸಿಗಲಿದೆ.

3999 ರೂಪಾಯಿ ರೀಚಾರ್ಜ್ ಅನ್ನು ರಿಲಯನ್ಸ್ ಜಿಯೋ ಗ್ರಾಹಕರು ಮಾಡಿಕೊಂಡರೆ 365 ದಿನ ವ್ಯಾಲಿಡಿಟಿಯ ಪ್ಯಾಕ್ ಆಕ್ಟಿವೇಟ್ ಆಗುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5GB ಡೇಟಾ ಸಿಗುತ್ತದೆ. ಪ್ರತಿದಿನ ಉಚಿತವಾಗಿ 100 ಎಸ್‌ಎಂಎಸ್ ಕಳುಹಿಸುವ ಆಯ್ಕೆಯನ್ನು ನೀಡಲಾಗಿದೆ. ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕೌಡ್ ಉಚಿತ ಆಕ್ಸೆಸ್ ಗ್ರಾಹಕರಿಗೆ ಸಿಗುತ್ತದೆ.

Ad Widget

Ad Widget

1899 ರೂಪಾಯಿ ರಿಚಾರ್ಜ್ ಅನ್ನು ಜಿಯೋ ಬಳಕೆದಾರರು ಮಾಡಿಕೊಂಡರೆ 336 ದಿನ ಅಂದ್ರೆ 11 ತಿಂಗಳ ಪ್ಲಾನ್ ಆಕ್ಟಿವೇಟ್ ಆಗುತ್ತದೆ. ಈ ಯೋಜನೆಯಡಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ, 100 ಎಸ್‌ಎಂಎಸ್ ಮತ್ತು ಯಾವುದೇ ನೆಟ್ವರ್ಕ್‌ಗೆ ಅನಿಯಮಿತವಾಗಿ ಕರೆ ಮಾಡಬಹುದು.

3 ಸಾವಿರ ರೂಪಾಯಿ ಮೊತ್ತ ಅಧಿಕವಾದ್ರೆ 11 ತಿಂಗಳ ಪ್ಲಾನ್ ಆಕ್ಟಿವೇಟ್ ಮಾಡಿಕೊಳ್ಳಬಹುದು. ಇಲ್ಲಿ ಪ್ರತಿದಿನ 0.5GB ಡೇಟಾ ಕಡಿಮೆ ಸಿಗಲಿದೆ. ಇನ್ನುಳಿದಂತೆ ಎಲ್ಲಾ ಬೆನೆಫಿಟ್‌ಗಳು ಗ್ರಾಹಕರಿಗೆ ಸಿಗುತ್ತವೆ.

Ad Widget
Click to comment

Leave a Reply

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

Adarsha-25ನೇ ವರ್ಷದ ಸಂಭ್ರಮಕ್ಕೆ ಮತ್ತೊಂದು ಗರಿ: ಸವಣೂರಿನ ಆದರ್ಶ ಸಹಕಾರ ಸಂಘಕ್ಕೆ ರಾಜ್ಯ ಸಹಕಾರ ಸಪ್ತಾಹದಲ್ಲಿ ಪ್ರಶಸ್ತಿ ಗೌರವ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ರಾಜ್ಯ ಸಹಕಾರ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಪ್ರಥಮ ಸ್ಥಾನ ಪಡೆದು ಆಯ್ಕೆಯಾಗಿದೆ.

Ad Widget

Ad Widget <> Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.20ರಂದು ನಡೆಯಲಿರುವ ರಾಜ್ಯ ಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪ್ರಸ್ತುತ ಸವಣೂರಿನಲ್ಲಿ ಸ್ವಂತ ನಿವೇಶನ ಹಾಗೂ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ಸಂಘಕ್ಕೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಘದ ಅಧ್ಯಕ್ಷರಾದ ‘ಸಹಕಾರ ರತ್ನ’ ಸವಣೂರು ಸೀತಾರಾಮ ರೈ ಕೆ. ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!