ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್‌ವೇರ್ ಆವೃತ್ತಿ) 2024 ರ ಗ್ರಾಂಡ್ ಫಿನಾಲೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ನಲ್ಲಿ 2024 ರ ಡಿಸೆಂಬರ್ 11 ಮತ್ತು 12 ರಂದು ಶಿಕ್ಷಣ ಸಚಿವಾಲಯ-ಎಐಸಿಟಿಇ, ಭಾರತ ಸರ್ಕಾರದ ಸಹಯೋಗದೊಂದಿಗೆ ನಡೆಯಲಿದೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್‌ವೇರ್ ಆವೃತ್ತಿ) 2024 ರ ಗ್ರಾಂಡ್ ಫಿನಾಲೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ನಲ್ಲಿ 2024 ರ ಡಿಸೆಂಬರ್ 11 ಮತ್ತು 12 ರಂದು ಶಿಕ್ಷಣ ಸಚಿವಾಲಯ-ಎಐಸಿಟಿಇ, ಭಾರತ ಸರ್ಕಾರದ ಸಹಯೋಗದೊಂದಿಗೆ ನಡೆಯಲಿದೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (SIH) 2017 ರಿಂದ ಶಿಕ್ಷಣ ಸಚಿವಾಲಯ ಮತ್ತು AICTE ಭಾರತ ಸರ್ಕಾರದಿಂದ ಆಯೋಜಿಸಲಾದ ವಾರ್ಷಿಕ ಕಾರ್ಯಕ್ರಮವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಪೆಟ್ಟಿಗೆಯ ಹೊರಗಿನ ಚಿಂತನೆ ಮತ್ತು ಸಮಸ್ಯೆ-ಪರಿಹರಿಸುವ ಸಾಮರ್ಥ್ಯಗಳನ್ನು ಮತ್ತು ನೈಜ-ಪ್ರಪಂಚದ ಸಾಮಾಜಿಕ ಸವಾಲುಗಳನ್ನು ಎದುರಿಸುವ ಮೂಲಕ ಭಾರತದ ಕ್ರಿಯಾತ್ಮಕ ವಿದ್ಯಾರ್ಥಿ ಸಮುದಾಯಗಳುನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ವರ್ಷ, SIH 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು, ಇದು ವಿಶ್ವದ ಅತಿದೊಡ್ಡ ಹ್ಯಾಕಥಾನ್‌ಗಳಲ್ಲಿ ಒಂದಾಗಿದೆ. ಸ್ಪರ್ಧೆಯನ್ನು ಎರಡು ವಿಭಾಗಗಳಲ್ಲಿ ನಡೆಸಲಾಗುತ್ತದೆ: ಹಾರ್ಡ್ ವೇರ್ ಮತ್ತು ಸಾಫ್ಟ್‌ವೇರ್. ಗ್ರಾಂಡ್ ಫಿನಾಲೆಯು ದೇಶದಾದ್ಯಂತ 51 ಗೊತ್ತುಪಡಿಸಿದ ಕೇಂದ್ರಗಳಲ್ಲಿ ನಡೆಯುತ್ತದೆ, ವಿದ್ಯಾರ್ಥಿಗಳು ತಮ್ಮ ಜಾಣೆ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುತ್ತದೆ.
ಇದು 11ನೇ ಡಿಸೆಂಬರ್ 2024 ರಂದು ಪ್ರಾರಂಭವಾಗಲಿರುವ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 7ನೇ ಆವೃತ್ತಿಯಾಗಿದೆ. ಶಿಕ್ಷಣ ಸಚಿವಾಲಯ ಭಾರತ ಸರ್ಕಾರದ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024 (SIH-2024) ಗ್ರಾಂಡ್ ಫಿನಾಲೆಗಾಗಿ ಭಾರತದ 51 ಕಾಲೇಜುಗಳನ್ನು ನೋಡಲ್ ಕೇಂದ್ರವಾಗಿ ಭಾರತವನ್ನು ಆಯ್ಕೆ ಮಾಡಿದೆ. ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜೆಂಟ್, ಮಂಗಳೂರು ಈ ಕಾರ್ಯಕ್ರಮದ ಗ್ರಾಂಡ್ ಫಿನಾಲೆಗೆ ಕರ್ನಾಟಕದಿಂದ ಆಯ್ಕೆಯಾದ ಒಂಬತ್ತು ನೋಡಲ್ ಕೇಂದ್ರಗಳಲ್ಲಿ ಒಂದಾಗಿದೆ ಮತ್ತು ಎರಡನೇ ಬಾರಿಗೆ SIH ಅನ್ನು ಆಯೋಜಿಸುತ್ತಿದೆ.
ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯ ಮೊದಲು ಎಲ್ಲಾ ಕೇಂದ್ರಗಳಲ್ಲಿ ವಾಸ್ತವಿಕವಾಗಿ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಹ್ಯಾಕಥಾನ್ ಅನ್ನು ಬೆಳಿಗ್ಗೆ, 8:00 ಗಂಟೆಗೆ ಉದ್ಘಾಟಿಸಲಾಗುವುದು. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎನ್.ಸುರೇಶ್, ಖ್ಯಾತ ಭಾರತೀಯ ಏರೋಸ್ಪೇಸ್ ವಿಜ್ಞಾನಿ, ಶ್ರೀ ಮಂಜುನಾಥ್ ಭಂಡಾರಿ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಅಧ್ಯಕ್ಷರು, MOE, AICTE, VTU ಬೆಳಗಾವಿ ಅಧಿಕಾರಿಗಳು ಮತ್ತು SCEM ನ ಸಂಘಟಕರು ಸೇರಿದಂತೆ ಡಾ. ಮಂಜಪ್ಪ, ಪ್ರಾಂಶುಪಾಲರು ಡಾ.ಎಸ್.ಎಸ್.ಇಂಜಗನೇರಿ, ಡಾ.ದುಡ್ಡೆಲ ಸಾಯಿ ಪ್ರಶಾಂತ್ ಇವರುಗಳು ಉಪಸ್ಥಿತರಿರುವರು.
ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (SH) ಅನ್ನು ವಾಸ್ತವಿಕವಾಗಿ ಉದ್ಘಾಟಿಸಲಿದ್ದಾರೆ. SIH ನಮ್ಮ ದೈನಂದಿನ ಜೀವನದಲ್ಲಿ ನಾವು ಎದುರಿಸುತ್ತಿರುವ ಒತ್ತುವ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾಗಿದೆ ಮತ್ತು ಹೀಗಾಗಿ ಉತ್ಪನ್ನ ನಾವೀನ್ಯತೆಯ ಸಂಸ್ಕೃತಿಯನ್ನು ಮತ್ತು ಸಮಸ್ಯೆ ಪರಿಹರಿಸುವ ಮನಸ್ಥಿತಿಯನ್ನು ಬೆಳೆಸುತ್ತದೆ. ಹಿಂದಿನ ಆವೃತ್ತಿಗಳಂತೆ, ವಿದ್ಯಾರ್ಥಿ ತಂಡಗಳು ಸಚಿವಾಲಯಗಳು/ಇಲಾಖೆಗಳು/ಕೈಗಾರಿಕೆಗಳು ನೀಡಿದ ಸಮಸ್ಯೆ ಹೇಳಿಕೆಗಳ ಮೇಲೆ ಕಾರ್ಯನಿರ್ವಹಿಸುತ್ತವೆ ಅಥವಾ 17 ಥೀಮ್ಗಳಲ್ಲಿ ಯಾವುದಾದರೂ ವಿರುದ್ಧ ವಿದ್ಯಾರ್ಥಿ ನಾವೀನ್ಯತೆ ವಿಭಾಗದಲ್ಲಿ ತಮ್ಮ ಆಲೋಚನೆಯನ್ನು ಸಲ್ಲಿಸುತ್ತವೆ. ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. : https://www.sih.gov.in
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ – SIH 2024 ಗಾಗಿ, 54 ಸಚಿವಾಲಯಗಳು, ಇಲಾಖೆಗಳು, ರಾಜ್ಯ ಸರ್ಕಾರಗಳು, PSUಗಳು ಮತ್ತು ಕೈಗಾರಿಕೆಗಳಿಂದ 250 ಕ್ಕೂ ಹೆಚ್ಚು ಸಮಸ್ಯೆ ಹೇಳಿಕೆಗಳನ್ನು ಸಲ್ಲಿಸಲಾಗಿದೆ. ಈ ವರ್ಷ, ಇನ್‌ಸ್ಟಿಟ್ಯೂಟ್ ಮಟ್ಟದಲ್ಲಿ ಆಂತರಿಕ ಹ್ಯಾಕಥಾನ್‌ಗಳಲ್ಲಿ ಪ್ರಭಾವಶಾಲಿ 240% ಹೆಚ್ಚಳವನ್ನು ದಾಖಲಿಸಲಾಗಿದೆ, SIH 2023 ರಲ್ಲಿ 900 ರಿಂದ SIH 2024 ರಲ್ಲಿ 2247 ಕ್ಕಿಂತ ಹೆಚ್ಚಿದೆ. ಇದು ಇದುವರೆಗಿನ ಅತಿದೊಡ್ಡ ಆವೃತ್ತಿಯಾಗಿದೆ. ಸಂಸ್ಥೆ ಮಟ್ಟದಲ್ಲಿ SIH 2024 ರಲ್ಲಿ 86,000 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿವೆ ಮತ್ತು ಸುಮಾರು 49,000 ವಿದ್ಯಾರ್ಥಿ ತಂಡಗಳನ್ನು (ಪ್ರತಿಯೊಂದೂ 6 ವಿದ್ಯಾರ್ಥಿಗಳು ಮತ್ತು 2 ಮಾರ್ಗದರ್ಶಕರನ್ನು ಒಳಗೊಂಡಿರುತ್ತದೆ) ರಾಷ್ಟ್ರೀಯ ಮಟ್ಟದ ಸುತ್ತಿಗೆ ಈ ಸಂಸ್ಥೆಗಳಿಂದ ಶಿಫಾರಸು ಮಾಡಲಾಗಿದೆ. SIH ಗ್ರಾಂಡ್ ಫಿನಾಲೆಯು ವಿವಿಧ ಸಚಿವಾಲಯಗಳು/ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳ ಶಿಕ್ಷಕರ ನಡುವಿನ ಮುಕ್ತ ಸಂವಾದಕ್ಕೆ ಒಂದು ಮೈದಾನವಾಗಿ ಕಾರ್ಯನಿರ್ವಹಿಸುತ್ತದೆ. ಇದು ತುಂಬಾ ವಿಶಿಷ್ಟವಾಗಿದೆ ಮತ್ತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತುಂಬಾ ಉತ್ತೇಜನಕಾರಿಯಾಗಿದೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗುರುತಿಸಲಾದ ಮತ್ತು ಪರಿಹರಿಸಲಾದ ಸವಾಲುಗಳು ರಾಷ್ಟ್ರೀಯ ಪ್ರಾಮುಖ್ಯತೆ ಮತ್ತು ರಾಷ್ಟ್ರೀಯ ಆದ್ಯತೆಗಳ ವಲಯಗಳಿಗೆ ಲಿಂಕ್ ಮಾಡಲಾದ 17 ಪ್ರಮುಖ ಕ್ಷೇತ್ರಗಳು/ವಿಷಯಗಳನ್ನು ಒಳಗೊಂಡಿದೆ. ಅವುಗಳೆಂದರೆ ಆರೋಗ್ಯ ರಕ್ಷಣೆ, ಪೂರೈಕೆ ಸರಪಳಿ ಮತ್ತು ಲಾಜಿಸ್ಟಿಕ್ಸ್, ಸ್ಮಾರ್ಟ್ ತಂತ್ರಜ್ಞಾನಗಳು, ಪರಂಪರೆ ಮತ್ತು ಸಂಸ್ಕೃತಿ, ಸುಸ್ಥಿರತೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ನೀರು, ಕೃಷಿ ಮತ್ತು ಆಹಾರ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ವಿಪತ್ತು ನಿರ್ವಹಣೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್‌ಮೆಂಟ್ ಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಬ್ಲಾಕ್‌ಚೈನ್ ಮತ್ತು ಸೈಬರ್‌ಸೆಕ್ಯುರಿಟಿ ಮತ್ತು ಸ್ಮಾರ್ಟ್ ಆಟೊಮೇಷನ್ ವಿಭಾಗಗಳ ಅಡಿಯಲ್ಲಿ ಐದು ಸಮಸ್ಯೆ ಹೇಳಿಕೆಗಳನ್ನು ನಿಯೋಜಿಸಿದೆ.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಈವೆಂಟ್ 30 ತಂಡಗಳನ್ನು ಆಯೋಜಿಸುತ್ತದೆ, ಪ್ರತಿ ತಂಡಕ್ಕೆ 6 ವಿದ್ಯಾರ್ಥಿ ಭಾಗವಹಿಸುವವರು, ಒಟ್ಟು 180 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಹೆಚ್ಚುವರಿಯಾಗಿ, 30 ಮಾರ್ಗದರ್ಶಕರು ದೇಶದ ವಿವಿಧ ಭಾಗಗಳಿಂದ ಯುವ ಮನಸ್ಸುಗಳಿಗೆ ಮಾರ್ಗದರ್ಶನ ನೀಡುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗಳಿಂದ ಚಾರಣ ಹಾಗೂ ಸ್ವಚ್ಛತಾ ಅಭಿಯಾನ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
ಪುತ್ತೂರು, ಅ.3: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
ಸಾಹಸ ಚಟುವಟಿಕೆಯೊಂದಿಗೆ ಪರಿಸರ ಜಾಗೃತಿ ಮತ್ತು ಸಮಾಜ ಸೇವೆಯನ್ನು ಸಂಯೋಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಂಗವಾಗಿ ರೋವರ್ಸ್ ಮತ್ತು ರೇಂಜರ್ಸ್ಗಳು ಚಾರಣದ ಮಾರ್ಗದುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು, ಆಹಾರದ ಪ್ಯಾಕೆಟ್‌ಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಅಲ್ಲದೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ನೈಸರ್ಗಿಕ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ದಕ್ಷಿಣ ಕನ್ನಡ19 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ18 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ17 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ23 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ನಿಧನ ವಾರ್ತೆ17 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಶಿಕ್ಷಣ16 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಬಿಗ್ ನ್ಯೂಸ್18 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















