ಕಾರ್ಯಕ್ರಮಗಳು
Elika-ಪುತೂರು: ಎಲಿಕಾದಲ್ಲಿ ಡಿ.23ರಂದು ಶ್ರೀನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಬೆದ್ರಾಳ-ಕೊರಜಿಮಜಲು ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವವು ಡಿ.23, ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ ಕೆಮ್ಮಿಂಜೆ ಶ್ರೀ ವೆಂಕಟಕೃಷ್ಣ ಕಲ್ಲೂರಾಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.
ಪುತೂರು : ಇಲ್ಲಿನ ಬೆದ್ರಾಳ-ಕೊರಜಿಮಜಲು ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವವು ಡಿ.23, ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ ಕೆಮ್ಮಿಂಜೆ ಶ್ರೀ ವೆಂಕಟಕೃಷ್ಣ ಕಲ್ಲೂರಾಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.
ವೈದಿಕ ಕಾರ್ಯಕ್ರಮಗಳ ವಿವರ:
ಡಿ. 22 ಆದಿತ್ಯವಾರದಂದು ಸಂಜೆ ಗಂಟೆ 5ಕ್ಕೆ ತಂತ್ರಿಗಳು ಆಗಮಿಸಲಿದ್ದು, ಬಳಿಕೆ ಸಂಜೆ 6 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ವಿಶ್ವಕರ್ಮ ಪ್ರಾರ್ಥನೆ, ಶಿಲ್ಪಿಗಳ ಬೀಳ್ಕೊಡುಗೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ ಬಲಿ, ದುರ್ಗಾನಮಸ್ಕಾರ ಪೂಜೆ, ನೂತನ ಬಿಂಬ ಶುದ್ದಿ, ಮೃತ್ತಿಕಾಧಿವಾಸ, ಜಲಾಧಿವಾಸ, ಧ್ಯಾನಾಧಿವಾಸ, ಮಹಾಪೂಜೆ, ಪ್ರಾರ್ಥನೆ, ಶೈಯ್ಯಾಧಿವಾಸ ಮುಂತಾದ ವೈದಿಕ ಕಾರ್ಯಕ್ರಮಗಳು ನೆರವೇರಲಿರುವುದು.
ಡಿ. 23 ಸೋಮವಾರದಂದು ಪ್ರಾತಃಕಾಲ 7ರಿಂದ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹವನ, ಪವಮಾನ ಸೂಕ್ತಾದಿ ಪ್ರಾಯಶ್ಚಿತ್ತ ಹೋಮ, ಪ್ರತಿಷ್ಠಾ ಪ್ರಧಾನ ಹೋಮ, ಬ್ರಹ್ಮಕಲಶ ಪ್ರತಿಷ್ಠೆ ನೆರವೇರಲಿರುವುದು.
ಬಳಿಕ ಬೆಳಗ್ಗೆ 9.18ರ ನಂತರ ಒದಗುವ ಮಕರ ಲಗ್ನ ಸುಮುಹೂರ್ತದಲ್ಲಿ ನಾಗ ಮತ್ತು ರಕೇಶ್ವರೀ ಸಪರಿವಾರ ಧರ್ಮದೈವಗಳ ಪುನಃಪ್ರತಿಷ್ಠೆ, ಪ್ರತಿಷ್ಠಾ ಕಲಶಾಭಿಷೇಕ, ನಿರ್ಣಯ ಪ್ರಾರ್ಥನೆ, ಪಂಚಾಮೃತಾಭಿಷೇಕ ಸರ್ವಪ್ರಾಯಶ್ಚಿತ್ತ ಆಶ್ಲೇಷ ಬಲಿ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ವಟು ಬ್ರಾಹ್ಮಣ, ಸುವಾಸಿನಿ ಆರಾಧನೆ, ಪ್ರಸಾದ ವಿತರಣೆ ನೆರವೇರಲಿರುವುದು.
ಸ್ಥಳೀಯ
Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.
ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.
ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.
ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ರಶ್ಮಿತಾ ಜೈನ್ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
-
ಸ್ಥಳೀಯ6 hours agoWedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್5 hours agoRailway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ7 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್33 minutes agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
Uncategorized6 minutes ago
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್















