Connect with us

ಕಾರ್ಯಕ್ರಮಗಳು

Akarshan-ಆಕರ್ಷಣ್ ವರುಷದ ಹರುಷ ಸಂಪನ್ನ – ಬೈಕ್ ಬಂಪರ್ ಡ್ರಾ – ಸಮಾರೋಪ ಸಮಾರಂಭ; ನೂತನ ‘ಬ್ರೀಝ್ ಬ್ಲಾಕ್’ ಲೋಕಾರ್ಪಣೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರಿನ ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆಯಾಗಿರುವ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ಇದರ ಇಪ್ಪತ್ತೊಂಬತ್ತನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ನಲುವತ್ತೊಂದು ದಿವಸಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ ಸನ್ಮಾನ ಕಾರ್ಯಕ್ರಮ ಆಕರ್ಷಣ್ ಕಚೇರಿಯಲ್ಲಿ ನಡೆಯಿತು

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಪ್ರಗತಿಪರ ಪ್ರಶಸ್ತಿ ವಿಜೇತ ಕೃಷಿಕರಾದ ಸುರೇಶ್ ಭಟ್ ಬಲ್ನಾಡ್ ಹಾಗೂ ಅಜಿತ್ ಪ್ರಸಾದ್ ರೈ ಯವರು ಆಕರ್ಷಣ್ ನ ಹೊಚ್ಚ ಹೊಸ ಉತ್ಪಾದನೆಯಾದ ಕಾಂಕ್ರೀಟ್ ಪೆಪ್ಪರ್ ಪೋಲ್ ಗಳಿಗೆ ಕರಿಮೆಣಸಿನ ಬಳ್ಳಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು

Ad Widget

Ad Widget <> Ad Widget

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷರಾದ ವಾಮನ್ ಪೈ ಯವರು ಮಾತನಾಡಿ ವ್ಯವಹಾರದ ಯಶಸ್ಸು ಗ್ರಾಹಕರ ಕೈಯಲ್ಲಿದೆ
ತನ್ನ ಲಾಭದ ಗಳಿಕೆಯ ಒಂದಂಶವನ್ನು ಪ್ರತೀ ವರ್ಷವೂ ಗ್ರಾಹಕರಿಗೆ ಸಮರ್ಪಣೆ ಮಾಡುತ್ತಿರುವ ಆಕರ್ಷಣ್ ಸಂಸ್ಥೆ ಇಂದು ಮಾದರಿಯಾಗಿ ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು
ಇದೇ ಸಂದರ್ಭದಲ್ಲಿ ಆಕರ್ಷಣ್ ನ ಹೊಸ ಉತ್ಪನ್ನವಾದ ಬ್ರೀಝ್ ಬ್ಲಾಕನ್ನು ಅವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.



Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ಎಸ್ ಆರ್ ಕೆ ಲ್ಯಾಡರ್ಸ್ ನ ಮಾಲಕರಾದ
ಕೇಶವ ಅಮೈ ಯವರು ಮಾತನಾಡುತ್ತಾ ಆಕರ್ಷಣ್ ಸಂಸ್ಥೆ ಇಂದು ಜನ ಮಾನಸದಲ್ಲಿ ಆಕರ್ಷಣೀಯವಾಗಿ ಬೆಳೆದು ಬರುತ್ತಿದೆ. ಸಂಸ್ಥೆಯ ಉತ್ಪನ್ನಗಳ ಗುಣಮಟ್ಟ,ತಂತ್ರಜ್ಞಾನ ಹಾಗೂ ಸೇವೆ ಪ್ರಶಂಸನೀಯ. ವ್ಯವಹಾರದಲ್ಲಿನ ಪಾರದರ್ಶಕತೆ ಸಂಸ್ಥೆಯನ್ನು ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಿಸಿದೆ

Ad Widget

Ad Widget

ಸಂಸ್ಥೆಯ ಮಾಲಕರಾದ ಕೆಪಿ ಸಾದಿಕ್ ರವರನ್ನು ಹಾಗೂ ಅವರ ತಂಡವಾದ ಟೀಮ್ ಆಕರ್ಷಣ್ ಅನ್ನು
ಅತೀ ಹತ್ತಿರದಿಂದ ಬಲ್ಲವನಾದ ನಾನು ಸಂಸ್ಥೆಯ ಉತ್ಪನ್ನಗಳ, ವ್ಯವಹಾರ ವಹಿವಾಟುಗಳ ಬಗ್ಗೆ ಬಹಳಷ್ಟು ಅಭಿಮಾನ ಹೊಂದಿದ್ದೇನೆ. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಆಕರ್ಷಕ ಹೀರೋ ಬೈಕ್ ಲಕ್ಕೀ ಡ್ರಾ ವನ್ನು ಶ್ರೀಯುತರು ನೆರವೇರಿಸಿದರು.

ಸಂಸ್ಥೆಯ ಇಪ್ಪತ್ತೊಂಬತ್ತನೇ ವರ್ಷದ ಸವಿ ನೆನಪಿಗಾಗಿ ಕಾಂಕ್ರೀಟ್ ಪೆಪ್ಪರ್ ಪೋಲ್ ಗಳಿಗೆ
ಕರಿಮೆಣಸಿನ ಬಳ್ಳಿಗಳನ್ನು ನೆಟ್ಟು ಮಾತನಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರಾದ
ಸುರೇಶ್ ಭಟ್ ಬಲ್ನಾಡ್ ಮಾತನಾಡುತ್ತಾ ಕೃಷಿಕರಿಗೆ ಬಹಳಷ್ಟು ಗೌರವ ನೀಡುತ್ತಾ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನ್ನಗಳನ್ನು ತಯಾರು ಮಾಡುತ್ತಿರುವ ಆಕರ್ಷಣ್ ಸಂಸ್ಥೆ ನಾಡಿನ ಕೃಷಿಕರಿಗೆ ಬಹಳಷ್ಟು ಹತ್ತಿರವಾಗುತ್ತಿದೆ. ಗುಣಮಟ್ಟದ ಉತ್ಪನ್ನಗಳಿಗೆ ಆಕರ್ಷಣ್ ಹೆಸರುವಾಸಿಯಾಗಿದೆ
ಸಂಸ್ಥೆಯ ಮಾಲಕರ ಒಡನಾಟ ಹಾಗೂ ವ್ಯವಹಾರ ಪರಿಶುದ್ಧತೆಯಿಂದ ಕೂಡಿದೆ
ಸಂಸ್ಥೆ ಇನ್ನಷ್ಟು ಅಭಿವೃದ್ಧಿಹೊಂದಲಿ ಎಂದು ಶುಭ ಹಾರೈಸಿದರು.

ಪುತ್ತೂರಿನ ಇನ್ನೋರ್ವ ಪ್ರಗತಿಪರ ಕೃಷಿಕ ಅಜಿತ್ ಪ್ರಸಾದ್ ರೈ ಯವರು ಮಾತನಾಡುತ್ತಾ
ಸಿದ್ಧಿ, ಸಾಧನೆ ಮತ್ತು ಆಕರ್ಷಣೆ ಇವೆಲ್ಲವೂ ಕೂಡಾ ಸಂಸ್ಥೆಯ ಮತ್ತು ಸಂಸ್ಥೆಯ ಮಾಲಕರ ಹೆಸರಿನಲ್ಲಿ ಅಡಗಿದೆ. ನಾಡಿನ ಕೃಷಿಕರ ಆಗತ್ಯತೆಗಳನ್ನು ಪೂರೈಸುತ್ತಾ ಕೃಷಿಕರ ಬೆನ್ನೆಲುಬಾಗಿ ಬೆಳೆಯುತ್ತಿರುವ
ಆಕರ್ಷಣ್ ಸಂಸ್ಥೆ ನಾಡಿನ ಹೆಮ್ಮೆಯ ಹಾಗೂ ಗೌರವದ ಉತ್ಪಾದನಾ ಕೇಂದ್ರವಾಗಿದೆ
ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆಕರ್ಷಣ್ ಸಂಸ್ಥೆಯ ಮಾಲಕರಾದ
ಕೆ ಪಿ ಮಹಮ್ಮದ್ ಸಾದಿಕ್ ಹಾಜಿಯವರು ಸಂಸ್ಥೆಯ ಇಪ್ಪತ್ತೊಂಬತ್ತು ವರ್ಷಗಳ ಯಶಸ್ವೀ ಪಯಣದಲ್ಲಿ ಗ್ರಾಹಕರ ಮತ್ತು ಹಿತೈಷಿಗಳ ಪಾತ್ರ ಬಹಳಷ್ಟು ಮುಖ್ಯವಾಗಿ
ಗಮಣಿಸಿದ್ದೇವೆ ಮತ್ತು ಪರಿಗಣಿಸಿದ್ದೇವೆ.

ನನ್ನ ಆತ್ಮೀಯ ವಲಯದ ಹಲವು ಮಂದಿ ಮೇರು ವ್ಯಕ್ತಿತ್ವಗಳ ಶಿಸ್ತುಬದ್ದ ವ್ಯವಹಾರ
ಸಾಧನೆ ಮತ್ತು ಪ್ರೇರಣೆಯೇ ನಮ್ಮ ಸಂಸ್ಥೆಯ ಯಶಸ್ಸಿಗೆ ಪ್ರಮುಖ ಕಾರಣ. ಸದಾ ಸಮಯ ಅವರಿಗೆ ನಾವು ಅಭಾರಿಯಾಗಿದ್ದೇವೆ ಎಂದು ಹೇಳುತ್ತಾ ಅತ್ಯಂತ ಭಾವುಕತೆಯಿಂದ ಧನ್ಯತಾ ನುಡಿ ಸಮರ್ಪಿಸಿದರು.

ಆಕರ್ಷಣ್ ಸಂಸ್ಥೆಯ ವತಿಯಿಂದ ಕುಂಬ್ರದ ವರ್ತಕರ ಸಂಘದ ಇಪ್ಪತ್ತನೇ ವರ್ಷದ ಸವಿನೆನಪಿಗಾಗಿ ನಿರ್ಮಿಸಿದ ಪೊರ್ಲುದ ಕುಂಬ್ರ ಸೆಲ್ಫೀ ಪಾಯಿಂಟ್ ನಲ್ಲಿ ನಿರ್ಮಾಣಗೊಂಡ ಹಳೇಕಾಲದ ಎತ್ತಿನ ಗಾಡಿಯ ಕೆತ್ತನೆಯ ಶಿಲ್ಪಿ ಕುಂಬ್ರದ ನಾರಾಯಣ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಕುಂಬ್ರದ ಸಣ್ಣ ರೈತ ಕೃಷಿಕರ ಸಮಾಲೋಚಕ ಅಲಂಗೂರು ಇಬ್ರಾಹಿಂ, ಪುತ್ತೂರು ಆರ್ವಿ ಗ್ರಾಫಿಕ್ಸ್ ನ ಮಾಲಕರಾದ ಜ್ಞಾನೇಶ್ ಹಾಗೂ ಆಕರ್ಷಣ್ ಸಂಸ್ಥೆಯ ಟೀಮ್ ಕನ್ಸಲ್ಟೆಂಟ್ ಬಿನಿಲ್ ಮ್ಯಾಥ್ಯೂ
ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು

ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ದುಡಿಯುತ್ತಿರುವ ನೌಕರ ವೃಂದದವರಿಗೆ ಗೌರವಾರ್ಪಣೆ ನಡೆಯಿತು. ಆಕರ್ಷಣ್ ಗ್ರಾಹಕ ಕುಟುಂಬದ ಪ್ರತಿನಿಧಿಯಾಗಿ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾದ
ನೇಮಾಕ್ಷ ಸುವರ್ಣ ಮಾತನಾಡಿ ಮನದಿಂಗಿತವನ್ನು ವ್ಯಕ್ತಪಡಿಸಿದರು.

ಟ್ರೇಡ್ ಮಾಸ್ಟರ್ ಪಾಲುದಾರ ಆರಿಫ್ ಪುತ್ತೂರು ಉಪಸ್ಥಿತರಿದ್ದರು, ಸಂಸ್ಥೆಯ ಮ್ಯಾನೇಜರ್
ಎಸ್ ಪಿ ಬಶೀರ್ ಶೇಕಮಲೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸೇಲ್ಸ್ ಮ್ಯಾನೇಜರ್
ಬಶೀರ್ ಸಂಪ್ಯ ಧನ್ಯವಾದ ಸಮರ್ಪಿಸಿದರು.

ಸಿಬ್ಬಂದಿಗಳಾದ ಮಹಮ್ಮದ್ ಪುಣಚ, ಇಫ್ರತ್ ಅಲ್ ಶೈನಿ, ಸೈದಾ ಮಡಿಕೇರಿ, ರಶೀದ
, ರಿನ್ನಾ ಡಿ ಸೋಜಾ, ಹಸೀನಾ, ಅಬ್ದುಲ್ ಜಲೀಲ್, ನಾಗರಾಜ್ , ಮಿಸ್ಬಾಹ್, ರತ್ನಾಕರ ಕಂಬಳಬೆಟ್ಟು, ಮೋಹನ ನಗರ, ನಾಗೇಶ್ ಪರ್ಪುಂಜ, ಆಸಿಫ್ ಕಂಪ, ಅನೀಸ್ ಕಂಪ, ಆದಂ, ಜಯಂತಿ, ಇಮ್ತಿಯಾಝ್, ಉಮೇಶ್, ಝಾಕಿರ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು

ವ್ಯವಹಾರದಲ್ಲಿ ಗಳಿಸಿದ ಸಂಪತ್ತಿಗಿಂತಲೂ ಜನರ ಮನಸ್ಸಿನಲ್ಲಿ ಗಳಿಸಿರುವ ಪ್ರೀತಿ ವಿಶ್ವಾಸ ಗೌರವ ಎಂಬುದು ಬೆಳೆಕಟ್ಟಲಾರದ ಬಲುದೊಡ್ಡ ಸಂಪತ್ತು. ಸಂಸ್ಥೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ
ಮೇರು ವ್ಯಕ್ತಿಗಳ ಸಾಧನೆ ಮತ್ತು ಪ್ರೇರಣೆಯೇ ನಮ್ಮ ಯಶಸ್ಸಿಗೆ ಕಾರಣ ಸಂಸ್ಥೆಯ ಇಪ್ಪತ್ತೊಂಬತ್ತು ವರ್ಷಗಳ ಯಶಸ್ವೀ ಪಯಣದಲ್ಲಿ ನಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸಿದ ಸರ್ವರಿಗೂ ನಾವು ಅಭಾರಿಯಾಗಿದ್ದೇವೆ. – ಕೆ ಪಿ ಸಾದಿಕ್ ಹಾಜಿ. ಮಾಲಕರು

ಸಂಸ್ಥೆಯ ಇಪ್ಪತ್ತೊಂಬತ್ತನೇ ವರ್ಷದ ವರುಷದ ಹರುಷ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ
ಆಫರ್ ಸೇಲ್ ನಲ್ಲಿ ನೂರಾರು ಗ್ರಾಹಕರಿಗೆ ಕ್ಯಾಶ್ ಡಿಸ್ಕೌಂಟ್ ಮತ್ತು ಉಡುಗೊರೆಗಳನ್ನು ಖಚಿತವಾಗಿ ನೀಡಲಾಗಿತ್ತು

ಅದೃಷ್ಟವಂತ ಗ್ರಾಹಕರಿಗೆ ಬಂಪರ್ ಡ್ರಾ ಆಗಿ ಬೈಕ್ ಒಂದನ್ನು ಇರಿಸಲಾಗಿತ್ತು. ಸಕಲೇಶಪುರದ ಘನಶ್ಯಾಮ್ ಎಂಬವರು ಲಕ್ಕೀ ಡ್ರಾದಲ್ಲಿ ವಿಜೇತರಾಗಿ ಬೈಕ್ ಪಡೆದುಕೊಂಡರು.

Ad Widget
Click to comment

Leave a Reply

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ಮಂಗಳೂರು

Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

Ad Widget

Ad Widget <> Ad Widget

ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.



Ad Widget

ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Ad Widget

Ad Widget

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading