Uncategorized
Murdeshwara Beach tragedy: ಮುರುಡೇಶ್ವರಕ್ಕೆಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವೇಳೆ ಮಹಾ ದುರಂತ – ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು; ಲೈಪ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆಯ ಕೊರತೆ -ರಕ್ಷಣಾ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆರೋಪ

Murdeshwara Beach tragedy: ಡಿ 11: ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಸಮುದ್ರದಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿನಿಯರು ಅಲೆಗಳ ರಭಸಕ್ಕೆ ನೀರಲ್ಲಿ ಕೊಚ್ಚಿ ಹೋಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಉಳಿದ ಮೂವರು ಕಣ್ಮರೆಯಾಗಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಇನ್ನೂ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಶೈವಂತಿ ಗೋಪಾಲಪ್ಪ (15) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಯರಾದ ದೀಕ್ಷಿತಾ (15), ಲಾವಣ್ಯ (15) ಹಾಗೂ ಲಿಪಿಕಾ (15) ಅವರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ.
ಮೂವರ ರಕ್ಷಣೆ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿಶಾಲೆಯ 54 ವಿದ್ಯಾರ್ಥಿಗಳು ಮಂಗಳವಾರ ಶೈಕ್ಷಣಿಕ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದರು. ದೇವರ ದರ್ಶನ ಮುಗಿಸಿ ಸಂಜೆ 6 ಗಂಟೆ ಹೊತ್ತಿಗೆ ಸಮುದ್ರದಲ್ಲಿ ಈಜುವಾಗ 7 ವಿದ್ಯಾರ್ಥಿನಿಯರು ಅಲೆಯ ರಭಸಕ್ಕೆ ಕೊಚ್ಚಿ ಹೋಗಲು ಆರಂಭಿಸಿದ್ದಾರೆ.
ಆಳ ಸಮುದ್ರದಲ್ಲಿ ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ನಾಲ್ವರನ್ನು ರಕ್ಷಣೆ ಮಾಡಿ ದಡಕ್ಕೆ ತಂದಿದ್ದಾರೆ. ಆ ಪೈಕಿ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ(15) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಅಸ್ವಸ್ಥಗೊಂಡ ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋದಾ(15) ವೀಕ್ಷಣಾ(15) ಹಾಗೂ ಲಿಪಿಕಾ(15) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುರುಡೇಶ್ವರ ಪಿಎಸ್‌ಐ ಹಣಮಂತ ಬಿರಾದಾರ ಅವರ ನೇತೃತ್ವದಲ್ಲಿ ಕರಾವಳಿ ಪೊಲೀಸ್ ಪಡೆ ಕಣ್ಮರೆಯಾದ ವಿದ್ಯಾರ್ಥಿನಿಯರಿಗಾಗಿ ತೀವ್ರ ಶೋಧ ನಡೆಸುತ್ತಿದೆ.
ಲೈಪ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆಯ ಕೊರತೆ
ಮುರ್ಡೆಶ್ವರ ಸಮುದ್ರ ತಟದಲ್ಲಿ ಲೈಪ್ ಗಾರ್ಡ್ ಗಳು ಇದ್ದರೂ, ಅವರ ಬಳಿ ಅಗತ್ಯ ಸಲಕರಣೆಗಳಿಲ್ಲದ ಹಿನ್ನಲೆಯಲ್ಲಿ ಎಲ್ಲ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ದರು. ಆದರೂ ಸಹ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕಾಡಳಿತ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದ್ರೆ ಸುರಕ್ಷತೆ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಅಗತ್ಯ ಸಲಕರಣೆಗಳನ್ನು ಒದಗಿಸುತ್ತಿದ್ದರೇ ಜೀವ ಹಾನಿಯನ್ನು ಕಡಿಮೆ ಮಾಡಬಹುದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ರಾತ್ರಿ ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆ
ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದಾರೆ ಎನ್ನುವ ಸುದ್ದಿ ತಿಳಿದ ಸಹಾಯಕ ಆಯುಕ್ತ ಡಾ. ನಯನಾ ಮತ್ತು ತಹಸೀಲ್ದಾರ್ ಅಶೋಕ ಭಟ್ಟ ಅವರು ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು ಚಿಕಿತ್ಸೆಗೆ ದಾಖಲಾದ ಮುರುಡೇಶ್ವರ ಆರೆನ್ನೆಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಅದರಂತೆ ಇವರೊಂದಿಗೆ ಪ್ರವಾಸಕ್ಕೆ ಬಂದಿದ್ದ ವಸತಿಶಾಲೆಯ ಶಿಕ್ಷಕರಲ್ಲಿ ಉಳಿದ ವಿದ್ಯಾರ್ಥಿಗಳ ಕುರಿತು ಮಾಹಿತಿ ಕಲೆ ಹಾಕಿ ಅವರಿಗೆಲ್ಲರಿಗೂ ರಾತ್ರಿ ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ.
Uncategorized
Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Uncategorized
Vivekananda-ವಿವೇಕಾನಂದ ಕಾಲೇಜಿನಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿʼ ಕಾರ್ಯಗಾರ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪುತ್ತೂರು: ವಿದ್ಯಾರ್ಥಿಗಳು ಉದ್ಯೋಗ ಸಂದರ್ಶನಗಳಿಗೆ ಸರಿಯಾದ ತಯಾರಿ ನಡೆಸಬೇಕು. ಪ್ರಮುಖವಾಗಿ ಮಾತುಗಳನ್ನು ಆಲಿಸುವ ಹಾಗೂ ಸಂವಹನ ಸಾಮರ್ಥ್ಯವನ್ನು ಹೊಂದಿರಬೇಕು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕೌಶಲ್ಯ, ಪ್ರೋಬ್ಲಮ್ ಸಾಲ್ವಿಂಗ್, ಟೀಮ್ ವರ್ಕ್, ಹೊಂದಿಕೊಳ್ಳುವಿಕೆ ಮತ್ತು ಉತ್ತಮ ಮನೋಭಾವ ಮೊದಲಾದ ಕೌಶಲ್ಯಗಳು ಉತ್ತಮ ಉದ್ಯೋಗ ಮತ್ತು ಯಶಸ್ವಿ ವೃತ್ತಿ ಜೀವನಕ್ಕೆ ಸಹಾಯಕವಾಗುತ್ತವೆ ಎಂದು ಭಾರತೀಯ ರಾಸಾಯನಿಕ ಮಂಡಳಿ (ಐಸಿಸಿ)ಯ ರೆಸ್ಪಾಂಸಿಬಲ್ ಕೇರ್‌ನ ಲೆಕ್ಕಪರಿಶೋಧಕ ರಾಜಶೇಖರ ಭಟ್ ಹೇಳಿದರು.
ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿ, ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಜೊತೆಗೆ, ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸುವುದು ಇಂತಹ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮಾತನಾಡಿದರು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ. ಉಪಸ್ಥಿತರಿದ್ದರು.
Uncategorized
Bhajana Kammata-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ : ಸಮಾರೋಪ ಸಮಾರಂಭ; ಭಜನೆಯಿಂದ ಭಗವಂತನ ಸಾಕ್ಷಾತ್ಕಾರ, ಉತ್ತಮ ಸಂಸ್ಕಾರ-ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ
ಭಾನುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 28 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 28 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾ-ಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ನಾಡಿನ ಅನೇಕ ಸಾಧು-ಸಂತರು, ಮೀರಾಬಾಯಿಯಂತಹ ಸಾಧಕರು ಭಕ್ತಿಯಿಂದ ತಮ್ಮನ್ನು ತಾವು ಸಮರ್ಪಿಸಿಕೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ.
ಇಸ್ಕಾನ್‌ನವರು ವಿದೇಶಗಳಲ್ಲಿ ಕೂಡಾ ಭಜನೆ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗುವ ಬಗ್ಯೆ ಅರಿವು, ಜಾಗೃತಿ ಮೂಡಿಸಿದ್ದಾರೆ.
ಭಜನೆಯಿಂದ ನಮ್ಮಲ್ಲಿರುವ ಸಾತ್ವಿಕಶಕ್ತಿ ಜಾಗೃತವಾಗಿ ನೈತಿಕತೆಯೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ. ಪ್ರಾರ್ಥನೆ, ಜಪ, ತಪ, ಧ್ಯಾನ ಇದ್ದಲ್ಲಿ ಭಕ್ತರು ಮತ್ತು ಭಗವಂತನ ಮಧ್ಯೆ ಅವಿನಾಭಾವ ಸಂಬಂಧ ಮೂಡಿ ಬರುತ್ತದೆ ಎಂದು ಸ್ವಾಮೀಜಿ ಹೇಳಿದರು.
ಎಲ್ಲಾ ವಿಷಯಗಳಲ್ಲಿಯೂ ಸೂಕ್ಷö್ಮಗ್ರಾಹಿಯಾದ ವೀರೇಂದ್ರ ಹೆಗ್ಗಡೆಯವರು ಹತ್ತು-ಹಲವು ಜನಮಂಗಳ ಕಾರ್ಯಗಳನ್ನು ಮಾಡಿ “ರಾಜರ್ಷಿ” ಯಾಗಿರುವುದು ಎಲ್ಲರಿಗೂ ಸಂತಸ ಮತ್ತು ಅಭಿಮಾನದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ಸನಾತನ ಸಂಸ್ಕೃತಿಯ ಪುನರುತ್ಥಾನಕ್ಕೆ ಕೃಷಿಸಂಸ್ಕೃತಿ ಮತ್ತು ಋಷಿಸಂಸ್ಕೃತಿಯನ್ನು ಮರೆಯಬಾರದು. ಭಜನೆಯಿಂದ ನಾಲಗೆ ಪವಿತ್ರವಾಗಿ ಸಾರ್ಥಕ ಬದುಕಿಗೆ ಸ್ಪೂರ್ತಿ ದೊರಕುತ್ತದೆ. ಭಾವುಕರಾಗಿ ಭಜನೆ ಹಾಡುವುದರಿಂದ ಜೀವನಮಟ್ಟ ಸುಧಾರಣೆಯೊಂದಿಗೆ ನೈತಿಕ ಹಾಗೂ ಧಾರ್ಮಿಕ ಮಟ್ಟವೂ ಉನ್ನತಿಗೇರುತ್ತದೆ ಎಂದು ಅವರು ಹೇಳಿದರು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಸಲ್ಲದು ಎಂದು ಅವರು ತಿಳಿಸಿದರು.
ಸುಶ್ರಾವ್ಯವಾಗಿ ಭಜನೆಯೊಂದನ್ನು ಹಾಡಿ, ಸ್ವಾಮೀಜಿ ಶ್ರೋತೃಗಳ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಿಬಿರಾರ್ಥಿಗಳು ಕಮ್ಮಟದಲ್ಲಿ ಪಡೆದ ಅನುಭವವನ್ನು ಸದುಪಯೋಗ ಮಾಡಿ ಆಯಾ ಊರಿನ ನಾಯಕರಾಗಿ ಪ್ರಗತಿಯ ರೂವಾರಿಗಳಾಗಬೇಕು. ನಿತ್ಯವೂ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಿ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಕಮ್ಮಟದಲ್ಲಿ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಮತ್ತು ಹಿರಿಯ ವಿದ್ವಾಂಸರನ್ನು ಹೆಗ್ಗಡೆಯವರು ಅಭಿನಂದಿಸಿದರು.
ಶಿಬಿರಾರ್ಥಿಗಳಿಂದ ಸಾಮೂಹಿಕ ನೃತ್ಯ ಭಜನೆ ಮತ್ತು ಕುಣಿತ ಭಜನೆ ನಡೆಯಿತು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾಹರ್ಷೇಂದ್ರ ಕುಮಾರ್, ಐಶ್ವರ್ಯನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.
ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರಪಡಿಸಿ ಒಂದು ವಾರ ನಡೆದ ಕಮ್ಮಟದಲ್ಲಿ 107 ಪುರುಷರು ಮತ್ತು 105 ಮಹಿಳೆಯರು ಸೇರಿದಂತೆ ಒಟ್ಟು 212 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ ಎಂದರು.
ಬ್ರಹ್ಮಾವರದ ತಿಮ್ಮಪ್ಪ ಕರ್ಕೇರಾ ಮತ್ತು ಸುಳ್ಯದ ಶ್ರೀಲತಾ ಕಮ್ಮಟದ ಬಗ್ಯೆ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
-
Uncategorized23 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್11 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ6 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ12 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ10 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ11 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ9 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ11 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















