ಸ್ಥಳೀಯ
Koppa-ಕೊಪ್ಪ: ಬಾವಿಗೆ ಬಿದ್ದು ಸಾವನ್ನಪ್ಪಿದ್ದ ಇಬ್ಬರು ಪುಟಾಣಿಗಳು
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮಧ್ಯ ಪ್ರದೇಶ ಮೂಲದ ಸುನೀತಾ ಎಂಬವರ ಮಕ್ಕಳಾದ ಸೀಮಾ(6), ರಾಧಿಕಾ (2), ಮೃತಪಟ್ಟ ಮಕ್ಕಳು
ಕೊಪ್ಪ: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಮಧ್ಯ ಪ್ರದೇಶ ಮೂಲದ ಸುನೀತಾ ಎಂಬವರ ಮಕ್ಕಳಾದ ಸೀಮಾ(6), ರಾಧಿಕಾ (2), ಮೃತಪಟ್ಟ ಮಕ್ಕಳು.
ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸುನೀತಾ ಅವರು ಮಂಗಳವಾರದಂದು (ಡಿ11) ಕೂಲಿ ಕೆಲಸಕ್ಕಾಗಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕಾಫಿ ತೋಟಕ್ಕೆ ಹೋಗಿದ್ದು ಮರಳಿ ಮನೆಗೆ ಬಂದಾಗ ಮಕ್ಕಳು ನಾಪತ್ತೆಯಾಗಿದ್ದರು.
ಸುತ್ತಮುತ್ತಲಿನ ಕಾರ್ಮಿಕರಿಗೆ ಗಾಬರಿಗೊಂಡ ತಾಯಿ ಸುನೀತಾ ಮಕ್ಕಳು ಇಲ್ಲದಿರುವ ವಿಷಯವನ್ನು ತಿಳಿಸಿದಾಗ ಕಾರ್ಮಿಕರು ಸುತ್ತ ಪರಿಶೀಲನೆ ನಡೆಸಿದ್ದು, ಸಮೀಪದ ಬಾವಿಯಲ್ಲಿ ಮಕ್ಕಳ ಮೃತ ದೇಹ ಪತ್ತೆಯಾಗಿದೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಗ್ ನ್ಯೂಸ್
Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.
ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.
ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.
ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
Uncategorized14 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಮಂಗಳೂರು23 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ19 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ24 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ24 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಅಂತರ ರಾಜ್ಯ24 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















