Uncategorized
ನಾನಿಲ್ಲಿ ಸರಕಾರದಿಂದ ಸೂಕ್ತ ಪರಿಹಾರ ಸಿಗದೇ 3 ಮಕ್ಕಳನ್ನು ಹಿಡ್ಕೊಂಡು ಬದುಕಲು ಸಂಘರ್ಷ ನಡೆಸುತ್ತಿದ್ದರೇ, ಗಂಡನ ಕೊಲೆಗಾರ ಹೊರಗೆ ಬಂದು ಮೋಜು ಮಾಡುತ್ತಿದ್ದಾನೆ – ಬಿಜೆಪಿ ಸರಕಾರಕ್ಕೆ ಹರ್ಷ ಮಾತ್ರ ಹಿಂದೂ ನನ್ನ ಗಂಡ ಅಲ್ವಾ? : ಹತ್ಯೆಯಾದ ಬೆಳ್ತಂಗಡಿಯ ದಲಿತ ದಿನೇಶ್ ಪತ್ನಿ ಕವಿತಾ
ಮಂಗಳೂರು: ಮಾ 25 : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಕನ್ಯಾಡಿ (Kanyadi) ಎಂಬಲ್ಲಿ ದಲಿತ ಸಮುದಾಯಕ್ಕೆ ಸೇರಿದ ದಿನೇಶ್ (Dinesh) ಎಂಬವರ ಹತ್ಯೆ ನಡೆದಿತ್ತು . ಫೆ 21ರಂದು ಮಾರಣಾಂತಿಕವಾಗಿ ಹಲ್ಲೆಗೊಳಗಾದ ಅವರು ಒಂದು ದಿನದ ಬಳಿಕ ಮೃತಪಟ್ಟಿದ್ದರು.
ಪೊಲೀಸರು ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳ ಆಧಾರದಲ್ಲಿ ಮೃತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಭಜರಂಗದಳ ಸಹಸಂಚಾಲಕ ಭಾಸ್ಕರ್ ಧರ್ಮಸ್ಥಳ ಅವರ ಸಹೋದರ ಕೃಷ್ಣ ಡಿ (Krishna D) ಯನ್ನು ಬಂಧಿಸಿದ್ದರು. ಅದಾಗಿ ತಿಂಗಳ ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ದಿನೇಶ್ ದಲಿತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ಪರಿಶಿಷ್ಟ ವರ್ಗ ದೌರ್ಜನ್ಯ ಪ್ರಕರಣದಡಿಯಲ್ಲಿ ಅವರ ಕುಟುಂಬಕ್ಕೆ ಸರಕಾರದ ನಿಯಮಾನುಸಾರ ರೂ. 8 ಲಕ್ಷ ಪರಿಹಾರ ಸಿಗಬೇಕಿತ್ತು. ಆದರೆ, ಇದುವರೆಗೆ ಕೇವಲ ರೂ. 4,12,500 ಮಾತ್ರ ಜಿಲ್ಲಾಡಳಿತ ನೀಡಿದೆಯೆಂದು ದಿನೇಶ್ ಅವರ ಪತ್ನಿ ಕವಿತಾ (Kavita) ತಿಳಿಸಿದ್ದಾರೆ.
ಸರ್ಕಾರ ನಮ್ಮನ್ನು ಕಡೆಗಣಿಸುತ್ತಿದೆ. ನಿಯಮ ಅನುಸಾರ ಸಿಗಬೇಕಾದ ಪರಿಹಾರ ಇನ್ನೂ ಸಿಕ್ಕಿಲ್ಲ. ತನ್ನ ಪತಿಯ ಕೊಲೆ ನಡೆದ ಬಳಿಕ ಮಾಜಿ ಮತ್ತು ಹಾಲಿ ಶಾಸಕರಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧನಸಹಾಯ ಮಾಡಿದ್ದಾರೆ. ಆದರೆ, ಸರ್ಕಾರದಿಂದ ನೆರವು ಸಿಕ್ಕಿಲ್ಲ ಎಂದು ಕವಿತಾ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಶಿವಮೊಗ್ಗನಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಸರ್ಕಾರ ಅವರ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರ ಧನ ನೀಡಿದೆ. ಅವರ ಕುಟುಂಬ ಮಾತ್ರ ಹಿಂದೂ ನನ್ನ ಕುಟುಂಬ ಹಿಂದೂ ಅಲ್ಲವೇ? ಅಂತ ಕವಿತಾ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಘೋಷಣೆಯಾದ ಪರಿಹಾರದಲ್ಲೂ ಕೇವಲ ಅರ್ಧದಷ್ಟು ಮಾತ್ರ ನೀಡಲಾಗಿದೆ, ನನಗೆ ನ್ಯಾಯ ಬೇಕು ಎಂದು ಪತಿಯನ್ನು ಕಳೆದುಕೊಂಡು ದುಃಖದಲ್ಲಿರುವ ಕವಿತಾ ಹೇಳುತ್ತಾರೆ.
ತನಗೆ ನ್ಯಾಯ ಬೇಕು ಎಂದು ಅವರು ಹೇಳುವಾಗ ಅವರು ಜೈಲು ಸೇರಿದ್ದ ಹಂತಕ ಕೇವಲ 25 ದಿನಗಳಲ್ಲೇ ಜಾಮೀನು ಪಡೆದು ಆಚೆ ಬಂದು ಮೋಜು ಮಾಡುತ್ತಿರುವ ವಿಷಯವನ್ನು ಉಲ್ಲೇಖಿಸುತ್ತಾರೆ
ತಾನು ಗಂಡನನ್ನು ಕಳೆದುಕೊಂಡು ಮೂರು ಮಕ್ಕಳ ಪೋಷಣೆ ಮಾಡಲು ಹೆಣಗಾಡುತ್ತಿದ್ದರೆ, ಕೊಲೆಗಡುಕ ಬಂಧನವಾದ 25 ದಿನದಲ್ಲೆ ಬಿಡುಗಡೆಯಾಗಿ ತನ್ನ ಕುಟುಂಬದೊಂದಿಗೆ ಸಂತೋಷವಾಗಿದ್ದಾನೆ ಎಂದು ಗದ್ಗತಿತರಾಗಿ ಹೇಳಿದರು.
ಪತಿಯ ಹಂತಕರಿಗೆ ಕಠಿನ ಶಿಕ್ಷೆಯಾಗಬೇಕು ಹಾಗೂ ತಮಗೆ ನ್ಯಾಯ ಸಿಗಬೇಕು. ಸರಕಾರ ನ್ಯಾಯಯುತ ಪರಿಹಾರ ನೀಡಬೇಕು ಎಂದು ಅಗ್ರಹಿಸಿದರು.
ಕಾಂಗ್ರೇಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಹಾಗೂ ಇಂದು ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಟಿಯ ಲ್ಲೂ
ದಿನೇಶ್ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಇನ್ನು ರಾಜ್ಯ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ
ಡಾ.ಪುಷ್ಪಾ ಅಮರನಾಥ್ ಅವರು ದಿನೇಶ್ ತಾಯಿ ಹಾಗೂ ಪತ್ನಿ ಕವಿತಾ ಜತೆ ಮಂಗಳೂರಿನ ಡಿಸಿ ಅಫೀಸ್ ಮುಂಭಾಗ ನೆಲದಲ್ಲಿ ಕೂತು ನ್ಯಾಯಕ್ಕಾಗಿ ಪ್ರತಿಭಟಿಸಿದರು ಹಾಗೂ ರೂ. 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ದುರಂತವಾಗಿದ್ದು, ಬಿಜೆಪಿ ಸರ್ಕಾರ ₹25ಲಕ್ಷ ಪರಿಹಾರ ನೀಡಿದೆ. ಆದರೆ ಸಂಘಪರಿವಾರದವರಿಂದ ಹತ್ಯೆಯಾದ ದಲಿತ ದಿನೇಶ್ ಹತ್ಯೆಗೆ ಕೇವಲ 4 ಲಕ್ಷ ಏಕೆ?ಎಂದು ಅವರು ಈ ಸಂದರ್ಭ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಸ್ಥಳೀಯ1 hour agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ2 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್31 minutes agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!















