Connect with us

ಸ್ಥಳೀಯ

Belagavi-ಬಿಜೆಪಿಯ ಬಣ ರಾಜಕಾರಣ ಬೆಳಗಾವಿ ಅಧಿವೇಶನದಲ್ಲೂ ಬಹಿರಂಗ..!

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಳಗಾವಿ : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರವನ್ನು ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಅಡ್ಡಕತ್ತರಿಯಲ್ಲಿ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ, ಬಣ ರಾಜಕೀಯದಿಂದಾಗಿ ಸೊರಗಿ ಹೋಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಪ್ರಹಾರ’ ವಿಷಯ ಪ್ರಸ್ತಾಪಿಸುವ ವೇಳೆ ಬಂಡಾಯ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರತಿಪಕ್ಷ ನಾಯಕ ಆರ್. ಅಶೋಕ್ ಗುರುವಾರ ವಿಧಾನಸಭೆಯಲ್ಲಿ ಪೊಲೀಸರು ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಿಷಯ ಪ್ರಸ್ತಾಪಿಸಿದಾಗ ಆಡಳಿತ ಪಕ್ಷದ ಸದಸ್ಯ ವಿಜಯಾನಂದ ಕಾಶೆಪ್ಪನವ‌ರ್ ಇದಕ್ಕೆ ಆಕ್ಷೇಪಿಸಿ ‘ಡಿ.10ರಂದು ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ಬಿಜೆಪಿ-ಆರ್‌ಎಸ್‌ಎಸ್‌ ಪ್ರೇರಿತ. ಕಲ್ಲು ತೂರಾಟ ನಡೆಸಿದವರು ನಮ್ಮ ಸಮುದಾಯಕ್ಕೆ ಸೇರಿದವರಲ್ಲ ಎಂದು ತಿರುಗೇಟು ನೀಡಿದರು.

Ad Widget

Ad Widget <> Ad Widget

ಬಿಜೆಪಿ ಸದಸ್ಯರಾದ ವಿಜಯೇಂದ್ರ, ಸುರೇಶ್ ಗೌಡ, ವಿ.ಸುನಿಲ್ ಕುಮಾರ್ ಇದರಿಂದಾಗಿ ಕೋಪಗೊಂಡು ‘ಬಿಜೆಪಿ-ಆರೆಸೆಸ್ಟ್ ಪ್ರೇರಿತ ಹೋರಾಟ’ ಎಂಬುದು ಸರಿಯಲ್ಲ. ಆ ಪದವನ್ನು ಕಡತದಿಂದ ತೆಗೆದುಹಾಕಬೇಕು’ ಎಂದು ಆಗ್ರಹಿಸಿ ಸ್ಪೀಕ‌ರ್ ಪೀಠದ ಮುಂದಿನ ಬಾವಿಗಿಳಿದು ಧರಣಿಗೆ ಮುಂದಾದರು. ಪ್ರತಿಪಕ್ಷ ಸಚೇತಕ ದೊಡ್ಡನಗೌಡ ಪಾಟೀಲ್ ಈ ಸಂದರ್ಭದಲ್ಲಿ ‘ಧರಣಿಗೆ ಹೋಗುವುದು ಬೇಡ’ ಎಂದು ಸಲಹೆ ನೀಡಿದರು.

ಇದರಿಂದಾಗಿ ಸದನಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಪೀಕ‌ರ್ ಖಾದ‌ರ್ ಸದನವನ್ನು ಕೆಲಕಾಲ ಮುಂದೂಡಿದರು. ಈ ವೇಳೆ ಸದನದಿಂದ ಹೊರಬಂದ ಬಿಜೆಪಿ ಸದಸ್ಯ ಸುರೇಶ್ ಗೌಡ, ‘ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವ ನಿಟ್ಟಿನಲ್ಲಿ ವಿಪಕ್ಷ ಸರಿಯಾಗಿ ತೀರ್ಮಾನ ಮಾಡುವುದಿಲ್ಲ’ ಎಂದು ಏರಿದ ಧ್ವನಿಯಲ್ಲಿ ವಿಪಕ್ಷ ನಾಯಕ ಆ‌ರ್.ಅಶೋಕ್‌ ಅವರನ್ನು ಪ್ರಶ್ನಿಸಿದರು. ಇದೇ ವೇಳೆ ಅಲ್ಲಿಗೆ ಧಾವಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಳಿ, ‘ಒಬ್ಬರು ಧರಣಿ ಮಾಡೋಣ ಅಂತಾರೇ, ಮತ್ತೊಬ್ಬರೂ ಬೇಡ ಎನ್ನುತ್ತಾರೆ, ಇದು ಒಳ್ಳೇ ತಲೆನೋವು’ ಎಂದು ಅಶೋಕ್ ಆಕ್ಷೇಪಿದರು.

Ad Widget

Ad Widget

ಬಣ ರಾಜಕಾರಣಕ್ಕೆ ಸಾಕ್ಷಿಯಾದ ಯತ್ನಾಳ್‌ ಗೈರು
ಸುವರ್ಣ ವಿಧಾನಸೌಧದ ಆವರಣದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಘಟನೆ ಖಂಡಿಸಿ ಬಿಜೆಪಿ ಮುಖಂಡರು ಪ್ರತಿಪಕ್ಷ ನಾಯಕ ಆ‌ರ್.ಅಶೋಕ್‌ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವನಗೌಡ ಪಾಟೀಲ್‌ ಯತ್ನಾಳ್‌ ಗೈರು ಹಾಜರಾಗಿದ್ದು, ಬಿಜೆಪಿಯ ಬಣ ರಾಜಕಾರಣಕ್ಕೆ ಸಾಕ್ಷಿಯಾಗಿತ್ತು.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!