ಉಡುಪಿ
Manjunath Bhandari-ಉಡುಪಿ – ಕಾಸರಗೋಡು 400ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹೋರಾಟದಲ್ಲಿ ಆಶಾದಾಯಕ ಬೆಳವಣಿಗೆ : ರೈತರ ಪರ ಸದನದಲ್ಲಿ ಧ್ವನಿ ಎತ್ತಿದ್ದ ಮಂಜುನಾಥ ಭಂಡಾರಿ; ಅವರು ಹೇಳಿದ್ದೇನು ?
ರೈತರ ತೀವ್ರ ವಿರೋಧದ ನಡುವೆಯೂ ಉಡುಪಿ – ಕಾಸರಗೋಡು 400ಕೆವಿ ವಿದ್ಯುತ್ ಪ್ರಸರಣ ಮಾರ್ಗ ರಚನೆಯ ಕಾರ್ಯ ನಡೆಯುತ್ತಿದ್ದು, ಇದೆ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರೊಬ್ಬರು ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಎಂಎಲ್ಸಿ ಮಂಜುನಾಥ ಭಂಡಾರಿ ಸದ್ಯ ನಡೆಯುತ್ತಿರುವ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ್ದು, ಜನರಿಗೆ ತೊಂದರೆಯಾಗುವ ಈ ಯೋಜನೆಯ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ತಮ್ಮ ಕೃಷಿ ಜಮೀನಿನ ರಕ್ಷಣೆಗಾಗಿ ಜಿಲ್ಲಾಡಳಿತ ಸೇರಿ ವಿವಿಧ ಇಲಾಖೆಗೆ ಎಡತಾಕುತ್ತಿರುವ ರೈತರಿಗೆ ಈ ಬೆಳವಣಿಗೆ ಆನೆ ಬಲ ನೀಡಿದೆ. ಕನಿಷ್ಟ ಒಬ್ಬ ಜನ ಪ್ರತಿನಿಧಿಯಾದರೂ ತಮ್ಮ ಪರ ಮಾತನಾಡಿರುವ ಕುರಿತು ಖುಷಿ ಪಟ್ಟಿಕೊಂಡಿರುವ ಅವರು ಉಭಯ ಜಿಲ್ಲೆಗಳ ಎಲ್ಲ ಜನ ಪ್ರತಿನಿಧಿಗಳು ಈ ಕುರಿತು ಧ್ವನಿ ಎತ್ತಬೇಕು ಎಂಬ ಬೇಡಿಕೆಯನ್ನಿತ್ತಿದ್ದಾರೆ.
ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಉಡುಪಿ ಕಾಸರಗೋಡು ವಿದ್ಯುತ್ ಮಾರ್ಗ ಅವೈಜ್ಞಾನಿಕವಾಗಿದ್ದು, ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಯೊಸ ಯೋಜನೆ ರೂಪಿಸುವಂತೆ ಹೋರಾಟಗಾರರಿಂದ ಆಗ್ರಹ ಕೇಳಿ ಬರುತ್ತಿದೆ. ಜನರ ವಿರೋಧವನ್ನೂ ಲೆಕ್ಕಿಸದೆ ಟವರ್ ನಿರ್ಮಾಣಕ್ಕೆ ಮುಂದಾದರೆ ಬಿಡುವ ಪ್ರಶ್ನೆಯಿಲ್ಲ. ಅಭಿವೃದ್ಧಿಗಾಗಿ ಪದೇ ಪದೇ ಕೃಷಿಭೂಮಿಯನ್ನು ಹಾಳು ಮಾಡುವುದು ಸರಿಯಲ್ಲ. ಜನರಿಗೆ ತೊಂದರೆಯಾಗುವ ಯೋಜನೆಯ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

2021ರಿಂದ ಪ್ರತಿಭಟನೆ
ಬೃಹತ್ ಕಾಮಗಾರಿಗಳನ್ನು ನಡೆಸುವ ಕಂಪನಿಗಳು ಯೋಜನೆಯ ಬಗ್ಗೆ ಒಪ್ಪಂದ ಮಾಡಿಕೊಳ್ಳುವ ಮೊದಲೇ ಸಂತ್ರಸ್ತರನ್ನು ವಿಶ್ವಾಸಕ್ಕೆ ಪಡೆದುಕೊಳ್ಳುವ ಕೆಲಸ ಮಾಡಬೇಕಾಗಿದೆ. ಆದರೆ ಯೋಜನೆಯ ಒಪ್ಪಂದವನ್ನು ಗುಟ್ಟಿನಲ್ಲಿ ನಡೆಸಿ ತಂತ್ರಜ್ಞಾನಗಳನ್ನು ಬಳಸಿಕೊಂಡು ಜಾಗಗಳನ್ನು ಗುರಿಸುವ ಕಾರ್ಯವನ್ನು ಮಾಡಲಾಗಿದೆ. 2021ರಲ್ಲಿ ಸರ್ವೇ ಹೆಸರಿನಲ್ಲಿ ರೈತರ ಜಮೀನುಗಳಿಗೆ ಜೆಸಿಬಿ ನುಗ್ಗಿಸುವ ಕಾರ್ಯವನ್ನು ಮಾಡಿ ಗೋಪುರ ನಿರ್ಮಾಣಕ್ಕೆ ಮುಂದಾಗಿದ್ದರು. ಆಗಿನಿಂದಲೂ ರೈತರು ಕಾಮಗಾರಿಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.
ಯೋಜನೆಯ ಬಗ್ಗೆ ಜಾಗದ ಮಾಲೀಕರು ಹಾಗೂ ಕಂಪನಿಯ ನಡುವೆ ಒಪ್ಪಂದ ನಡೆದ ಬಳಿಕ ಪರಿಹಾರದ ಮೊತ್ತವನ್ನು ಪಾವತಿಸದ ಬಳಿಕ ಕಾಮಗಾರಿಯನ್ನು ನಡೆಸಬೇಕೆಂಬ ನಿಯಮವಿದ್ದರೂ, ಎಲ್ಲವನ್ನೂ ಗಾಳಿಗೆ ತೋರಿ ದಬ್ಬಾಳಿಕೆಯಲ್ಲಿ ಕಾಮಗಾರಿಗಳನ್ನು ನಡೆಸಲು ಬರುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿದೆ. ಜನರಿಂದ ಆಯ್ಕೆಯಾದವರು ಜನರ ಕಷ್ಟವನ್ನು ಕೇಳಿ ಪರಿಹಾರ ಒದಗಿಸುವುದು ಬಿಟ್ಟು ಕಂಪನಿಗಳ ಜತೆಗೆ ಸೇರಿಕೊಂಡು ಜನರನ್ನು ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ.
ಅಧಿಕಾರಿಗಳಿಗೆ ಮನವಿ!
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಅವರನ್ನು ಬೇಟಿ ಮಾಡಿ ಕಂಪನಿಯ ಕೆಲಸಕ್ಕೆ ಅನುಮತಿ ನೀಡಬಾರದು ಎಂದು ಮನವಿಯನ್ನು ಸಲ್ಲಿಸಿದರು. ರೈತ ಸಂಘ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ, ಕಾರ್ಕಳ ಕಿಸಾನ್ ಸಂಘದ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ವಿದ್ಯುತ್ ಮಾರ್ಗ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ರಾಜೀವ ಗೌಡ, ಕೃಷ್ಣಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಅಧಿಕಾರಿಗಳು ರೈತರಿಗೆ ಸರಿಯಾದ ಉತ್ತರವನ್ನು ನೀಡದೆ, ಇಬ್ಬಗೆಯ ನೀತಿ ಪಾಲಿಸುತ್ತಿದ್ದಾರೆ. 2021ರಿಂದ ಮಾಹಿತಿ ನೀಡುವುದಾಗಿ ಹೇಳಿಕೊಂಡು ಬರುತ್ತಿರುವ ಅಧಿಕಾರಿಗಳು ಯೋಜನೆಯ ಸಮಗ್ರ ವಿಚಾರ ತಿಳಿದೂ ತಿಳಿಯದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ನಾಲ್ಕು ವರ್ಷಗಳಿಂದ ಸಮುದ್ರ ಮಾರ್ಗ ಹಾಗೂ ಹೆದ್ದಾರಿ ಅಥವಾ ರೈಲ್ವೇ ಮಾರ್ಗದ ಪಕ್ಕದಲ್ಲಿ ಈ ವಿದ್ಯುತ್ ಲೈನನ್ನು ಭೂಗತವಾಗಿ ತೆಗೆದುಕೊಂಡು ಹೋಗುವಂತೆ ಆಗ್ರಹಿಸುತ್ತಿದ್ದೇವೆ. ಯೋಜನೆಯಿಂದ ಆಗುವ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಡಳಿತಕ್ಕೆ ಆಗುತ್ತಿಲ್ಲವಾದರೆ, ಅಧಿಕಾರ ಇದ್ದು ಏನು ಪ್ರಯೋಜನ. ಸಂವಿಧಾನದಲ್ಲಿ ವಿರೋಧದ ನಡುವೆಯೂ ಬಲಾತ್ಕಾರಕ್ಕೆ ಅವಕಾಶಗಳು ಇದೆಯಾ ಎಂಬ ಪ್ರಶ್ನೆ ಮೂಡುತ್ತಿದೆ.- ಶ್ರೀಧರ ಶೆಟ್ಟಿ ಬೈಲುಗುತ್ತು, ಜಿಲ್ಲಾಧ್ಯಕ್ಷರು, ರೈತ ಸಂಘ
ಯೋಜನೆಗೆ ಬೇಕಾದ ಚರ್ಚೆಗಳು ನಡೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುಮೋದನೆಯಾಗಿದೆ. ಎಲ್ಲ ಇಲಾಖೆಯ ಅನುಮತಿ ಪಡೆದ ಬಳಿಕ ನಾವು ನೀಡದೇ ಇರುವುದಕ್ಕೂ ಆಗುವುದಿಲ್ಲ. ಸರ್ಕಾರದ ಸೂಚನೆಯಂತೆ ಮರ ಕಡಿಯುವುದಕ್ಕೆ ಅನುಮತಿ ನೀಡುತ್ತೇವೆ. ವಿವಿಧ ಪರಿಶಿಷ್ಕರಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಶೇ.೪೦ರಷ್ಟು ಮಾತ್ರ ಮರ ಕಡಿಯುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಯೋಜನೆ ಒಳ್ಳೆಯದು ಕೆಟ್ಟದು ಗೊತ್ತಿಲ್ಲ ಪಾಲಿಸಿಯನ್ನು ಜಾರಿ ಮಾಡುವುದು ನಮ್ಮ ಕರ್ತವ್ಯವಾಗಿದೆ. – ಅಂಥೋನಿ ಎಸ್. ಮರಿಯಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ
ವಿದ್ಯುತ್ ಮಾರ್ಗದ ರಚನೆಯಲ್ಲಿ ಯಾವುದೇ ಭೂಸ್ವಾಧೀನ ಪ್ರಕ್ರಿಯೆಗಳಿರುವುದಿಲ್ಲ. ಕಂದಾಯ ಇಲಾಖೆಯಿಂದ ಯಾವುದೇ ಪಾತ್ರ ಇದರಲ್ಲಿ ಇರುವುದಿಲ್ಲ. ಭೂಮಿಗೆ ಹಾಗೂ ಮರಗಳಿಗೆ ದರ ವಿಧಿಸುವುದು ಮಾತ್ರ ನಮ್ಮ ಜವಾಬ್ದಾರಿಯಾಗಿದೆ. ಕಂಪನಿಯವರು ಎಸ್. ಒ. ಪಿ. ಪಾಲಿಸುತ್ತಿಲ್ಲ ಎಂಬ ಬಗ್ಗೆ ವಿಚಾರಣೆಯನ್ನು ನಡೆಸುತ್ತೇವೆ. ಕಂಪನಿಗೆ ಖಾರವಾಗಿ ಹೇಳುತ್ತಿದ್ದು, ಪ್ರಗತಿ ಸಭೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹೇಳಿತ್ತಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಜಿಲ್ಲಾಡಳಿತಕ್ಕೆ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಸೂಚನೆಗಳನ್ನು ನೀಡುತ್ತಿದ್ದಾರೆ.- ಮುಲ್ಲೈ ಮುಹಿಲನ್ , ದ. ಕ. ಜಿಲ್ಲಾಧಿಕಾರಿಗಳು
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
-
Uncategorized19 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ13 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ20 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ20 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ20 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ13 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು20 hours agoPandamburu-ಪಣಂಬೂರು ಬೀಚ್‌ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















