ಅಂತರ ರಾಜ್ಯ
Gukesh-ಚೆಸ್ ವಿಶ್ವ ಚಾಂಪಿಯನ್ ಗೆದ್ದ ಭಾರತದ ಅತಿ ಕಿರಿಯ ಆಟಗಾರ ಗುಕೇಶ್ ಗೆ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಣೆ
18 ವರ್ಷ ವಯಸ್ಸಿನ ಚೆನ್ನೈಯ ಚೆಸ್ ಆಟಗಾರ ಗುಕೇಶ್ ಗುರುವಾರ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವದ 18ನೇ ವಿಶ್ವ ಚಾಂಪಿಯನ್ ಆಗಿ ಟ್ರೋಫಿ ಹಿಡಿದು ಸಂಭ್ರಮಿಸಿದರು. ವಿಶ್ವನಾಥನ್ ಆನಂದ್ ಅವರ ನಂತರ ವಿಶ್ವ ಚಾಂಪಿಯನ್ ಟ್ರೋಫಿ ಹಿಡಿದ ಭಾರತದ ಎರಡನೇ ಅತಿ ಕಿರಿಯ ಆಟಗಾರನೆಂಬ ಹೆಗ್ಗಳಿಗೆ ಗುಕೇಶ್ ಪಾತ್ರರಾದರು.
ಸಿಂಗಪುರ: 18 ವರ್ಷ ವಯಸ್ಸಿನ ಚೆನ್ನೈಯ ಚೆಸ್ ಆಟಗಾರ ಗುಕೇಶ್ ಗುರುವಾರ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವದ 18ನೇ ವಿಶ್ವ ಚಾಂಪಿಯನ್ ಆಗಿ ಟ್ರೋಫಿ ಹಿಡಿದು ಸಂಭ್ರಮಿಸಿದರು. ವಿಶ್ವನಾಥನ್ ಆನಂದ್ ಅವರ ನಂತರ ವಿಶ್ವ ಚಾಂಪಿಯನ್ ಟ್ರೋಫಿ ಹಿಡಿದ ಭಾರತದ ಎರಡನೇ ಅತಿ ಕಿರಿಯ ಆಟಗಾರನೆಂಬ ಹೆಗ್ಗಳಿಗೆ ಗುಕೇಶ್ ಪಾತ್ರರಾದರು.
ಬೆಳಿಗ್ಗೆ ಟ್ರೋಫಿಯ ದರ್ಶನದೊಡನೆ ಆರಂಭವಾದ ಅವರ ದಿನಚರಿ, ಸಮಾರೋಪ ಸಮಾರಂಭದವರೆಗೆ ಕಾದ ಬಳಿಕ ಅಂತರರಾಷ್ಟ್ರೀಯ ಚೆಸ್ ಫೆಡರೇಷನ್ (ಫಿಡೆ) ಅಧ್ಯಕ್ಷ ಅರ್ಕಾಡಿ ದೊರ್ಕೊವಿಚ್ ಅವರು ಟ್ರೋಫಿಯನ್ನು ಭಾರತದ ಯುವ ತಾರೆಗೆ ಪ್ರದಾನ ಮಾಡಿದ ವೇಳೆ ಅದರ ಖುಷಿಯನ್ನು ಗುಕೇಶ್ ಅನುಭವಿಸಿದರು.
“ಈ ಟ್ರೋಫಿ ಎತ್ತಿ ಹಿಡಿದಿರುವುದು ಮತ್ತು ನನ್ನ ಕನಸು ಸಾಕಾರಗೊಂಡಿರುವುದು ಬದುಕಿನ ಬೇರಾವುದೇ ಕ್ಷಣಕ್ಕಿಂತ ದೊಡ್ಡದು’ ಎಂದು ಹದಿಹರೆಯದ ಆಟಗಾರ ಹೇಳಿದರು. ಚಿನ್ನದ ಪದಕ, ಟ್ರೋಫಿಯ ಜೊತೆ ಸುಮಾರು ₹11.03 ಕೋಟಿ ನಗದು ಬಹುಮಾನವನ್ನು ಅವರು ಸ್ವೀಕರಿಸಿದರು.
ಇದಕ್ಕೆ ಮೊದಲು ಗುಕೇಶ್ ಹಲವು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ, ಎಳೆಯ ಮಕ್ಕಳಿಂದ ಹಿಡಿದು ವಯಸ್ಸಾದವರೆಗೂ ಸಿಂಗಪುರದಲ್ಲಿ ನೆಲಸಿರುವ ಭಾರತೀಯ ಮೂಲದವರು ತಂದಿದ್ದ ಸ್ಮರಣಿಕೆಗಳ ಮೇಲೆ ಹಸ್ತಾಕ್ಷರ ನೀಡಿದರು.
ನಿದ್ದೆಗೆಟ್ಟ ಪರಿಣಾಮ ಕಣ್ಣುರಿಯ ಅನುಭವ ಗುತ್ತಿದ್ದ ಟ್ರೋಪಿ ಗೆದ್ದ ಸಂಭ್ರಮದ ವಾತಾವರಣ ಅವೆಲ್ಲವನ್ನೂ ಮರೆಸಿತು.
‘ಈ ಪಯಣ ಯಾವುದೇ ಕನಸಿಗಿಂತ ಕಡಿಮೆಯಿಲ್ಲ. ಹಲವು ಏರಿಳಿತಗಳನ್ನು ಕಂಡಿದ್ದೇನೆ. ಅನೇಕ ಸವಾಲುಗಳು ಎದುರಾಗಿದೆ. ಆಟದ ವೇಳೆ ಕೆಲ ಸಂದರ್ಭಗಳಲ್ಲಿ ಪರಿಹಾರ ಕಾಣದಿದ್ದಾಗ ದೇವರೊಬ್ಬರ ನೆರವಷ್ಟೇ ನನಗೆ ದೊರೆತು ದಾರಿ ತೋರುತ್ತಿತ್ತು’ ಎಂದು ಸಮಾರೋಪ ಸಮಾರಂಭದಲ್ಲಿ ಅವರು ಹೇಳಿದರು. ಪತ್ರಿಕೆಗಳ ಜೊತೆ ಮತ್ತೊಂದು ಸುತ್ತಿನ ಸಂದರ್ಶನದಲ್ಲೂ ಅವರು ಭಾಗಿಯಾದರು.
’18ನೇ ವಯಸ್ಸಿನಲ್ಲಿ 18ನೇ ಚಾಂಪಿಯನ್’ ಎಂಬ ಪೋಸ್ಟ್ ಅನ್ನು ಅವರು ತಮ್ಮ ಎಕ್ಸ್‌ನಲ್ಲಿ ಹಾಕಿದ್ದಾರೆ.
₹5 ಕೋಟಿ ರೂ. ಘೋಷಣೆ
ಗುರುವಾರದಂದು ವಿಶ್ವದ ಅತಿ ಕಿರಿಯ ಚೆಸ್ ಚಾಂಪಿಯನ್ ಗೌರವಕ್ಕೆ ಪಾತ್ರರಾದ ಡಿ.ಗುಕೇಶ್ ಅವರಿಗೆ ₹5 ಕೋಟಿ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಈ ಸಂಬಂಧ ಸ್ಟಾಲಿನ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಮುಖ್ಯಮಂತ್ರಿ ಸ್ಟಾಲಿನ್ ಸಿಂಗಪುರದಿಂದ ಮರಳಿದ ಬಳಿಕ ನಗದು ಬಹುಮಾನ ಪ್ರದಾನ ಮಾಡಲಿದ್ದಾರೆ. ಡಿ. 17ರಂದು ಅವರು ಮರಳುವ ನಿರೀಕ್ಷೆಯಿದೆ. 2023ರ ಡಿಸೆಂಬರ್‌ನಲ್ಲಿ ತಮಿಳುನಾಡು ಸರ್ಕಾರ ಚೆನ್ನೈ ಗ್ರಾಂಡ್‌ಮಾಸ್ಟರ್ಸ್ ಟೂರ್ನಿ ಏರ್ಪಡಿಸುವ ಮೂಲಕ ಗುಕೇಶ್ ಅವರಿಗೆ ಕ್ಯಾಂಡಿಡೇಟ್ಸ್ ಟೂರ್ನಿಗೆ ಅರ್ಹತೆ ಪಡೆಯಲು ಅವಕಾಶ ಒದಗಿಸಿತ್ತು. ಇದರಲ್ಲಿ ಗೆದ್ದ ಗುಕೇಶ್ ಫಿಡೆ ಸರ್ಕಿಟ್ ಸಾಧನೆ ಮುಖಾಂತರ ಕ್ಯಾಂಡಿಡೇಟ್ಸ್ ಗೆ ಅರ್ಹತೆ ಪಡೆದಿದ್ದರು. ಅಲ್ಲೂ ಗೆದ್ದು ವಿಶ್ವ ಚಾಂಪಿಯನ್‌ಷಿಪ್‌ಗೆ ಚಾಲೆಂಜರ್ ಆಗಿದ್ದರು.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಅಂತರ ರಾಜ್ಯ
Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!
ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.
ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.
ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.
ಅಂತರ ರಾಜ್ಯ
Controversial statement-“ಅಮೆರಿಕ–ಪಾಕ್ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ” – ರಾಜಸ್ಥಾನ ಬಿಜೆಪಿ ಅಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ..!
ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಹೊಸದಿಲ್ಲಿ: ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಗುರುವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮದನ್ ರಾಥೋರ್, “ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಯ ರಾಷ್ಟ್ರವಾಗಿರುವುದರಿಂದ ನಾವು ಅದರ ಪರವಾಗಿ ನಿಲ್ಲುತ್ತೇವೆ. ಆದರೆ, ನಮ್ಮ ಆಂತರಿಕ ವಿಷಯಗಳ ವಿಚಾರದಲ್ಲಿ ಭಾರತದ ಪರವಾಗಿ ನಿಲ್ಲುತ್ತೇವೆ. ಈ ವ್ಯತ್ಯಾಸವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನಿಂದ ತೀವ್ರ ಖಂಡನೆ
ರಾಥೋರ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಇದನ್ನು ರಾಷ್ಟ್ರವಿರೋಧಿ ಹೇಳಿಕೆ ಎಂದು ಟೀಕಿಸಿದ್ದಾರೆ. ಭಾರತದ ಸೈನಿಕರು ಮತ್ತು ನಾಗರಿಕರ ಸಾವಿಗೆ ಕಾರಣವಾಗುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ನಾಯಕನ ಹೇಳಿಕೆಗೆ ಪಕ್ಷದ ವರಿಷ್ಠರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
“ಪಾಕಿಸ್ತಾನದ ಪರವಾಗಿ ನಿಲ್ಲುವುದಾಗಿ ರಾಜಸ್ಥಾನ ಬಿಜೆಪಿ ಅಧ್ಯಕ್ಷರು ಹೇಳಿರುವುದು ಬಿಜೆಪಿಯ ನಿಲುವಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ಅಭಿಪ್ರಾಯ ಹೊಂದಿದ್ದಾರೆಯೇ? ಇಲ್ಲದಿದ್ದರೆ, ಈ ಹೇಳಿಕೆ ನೀಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಶಮಾ ಮೊಹಮ್ಮದ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಸಂದೀಪ್ ಗುಪ್ತಾ ಕೂಡ ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ. ಈ ಹೇಳಿಕೆಯು ಪಾಕಿಸ್ತಾನದ ಬಗ್ಗೆ ಬಿಜೆಪಿಗಿರುವ ಒಲವನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿರುವ ಅವರು, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ–ಪಾಕಿಸ್ತಾನ ಒಂದೇ ಡಿಎನ್‌ಎ: ಎಎಪಿ ಟೀಕೆ
ಈ ವಿವಾದಕ್ಕೆ ಆಮ್ ಆದ್ಮಿ ಪಕ್ಷದ ನಾಯಕರೂ ಧ್ವನಿಗೂಡಿಸಿದ್ದಾರೆ. ದಿಲ್ಲಿ ಎಎಪಿ ಘಟಕದೊಂದಿಗೆ ಗುರುತಿಸಿಕೊಂಡಿರುವ ಯುವ ಘಟಕದ ರಾಜ್ಯಾಧ್ಯಕ್ಷ ರಮೇಶ್ ಮಟಿಯಾಲ ಹಾಗೂ ಎಎಪಿ ನಾಯಕ ವಿನಯ್ ಮಹಾಬಲ್ ಮಿಶ್ರಾ ಅವರು ರಾಥೋರ್ ಅವರ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದೇ ವೇಳೆ, ಬಿಜೆಪಿ ಮತ್ತು ಪಾಕಿಸ್ತಾನದ ನಡುವೆ ಸೈದ್ಧಾಂತಿಕ ಸಾಮ್ಯತೆಯಿದೆ ಎಂದು ಆರೋಪಿಸಿರುವ ಎಎಪಿ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ರಾಮ್ ಗುಪ್ತಾ, ರಾಥೋರ್ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.
“ಇನ್ನೂ ಯಾರಿಗಾದರೂ ಅನುಮಾನವಿದೆಯೇ? ಬಿಜೆಪಿ ಮತ್ತು ಪಾಕಿಸ್ತಾನ ಎರಡೂ ಒಂದೇ ಡಿಎನ್‌ಎ ಹೊಂದಿವೆ. ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ಹೇಳಿದ್ದಾರೆ” ಎಂದು ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ರಾಥೋರ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಎಎಪಿ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಈ ವಿಚಾರ ರಾಜಕೀಯ ವಲಯದಲ್ಲಿ ವಾಗ್ವಾದಕ್ಕೆ ಕಾರಣವಾಗಿದೆ.
-
ಅಪರಾಧ17 hours ago
ಸೌತಡ್ಕ ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಮಾರಾಮಾರಿ; ಮಹಿಳೆಯರ ಮೇಲೆ ಹಲ್ಲೆ ಆರೋಪ
-
ದಕ್ಷಿಣ ಕನ್ನಡ18 hours ago
ಬಂಟ್ವಾಳ : ಹಣ ವಾಪಸ್ ಕೇಳಿದ್ದಕ್ಕೆ ಚೂರಿ ಇರಿತ ಆರೋಪ: ಆರೋಪಿ ಪೊಲೀಸ್ ವಶಕ್ಕೆ
-
ಅಪರಾಧ17 hours ago
ಪುತ್ತೂರು ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ
-
ದಕ್ಷಿಣ ಕನ್ನಡ2 hours ago
ಉಪ್ಪಿನಂಗಡಿಯಲ್ಲಿ ಬಾರ್ ಸಮೀಪ ತಲವಾರು ಪ್ರದರ್ಶನ: ಇಬ್ಬರು ಪೊಲೀಸ್ ವಶಕ್ಕೆ
-
ದಕ್ಷಿಣ ಕನ್ನಡ2 hours ago
ಮಂಗಳೂರು : ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ – ಧರ್ಮಗುರು ಬಂಧನ,
-
ದಕ್ಷಿಣ ಕನ್ನಡ2 hours ago
ಸೌತಡ್ಕ ದೇವಸ್ಥಾನದ ಬಳಿ ಹೂವಿನ ಅಂಗಡಿ ವಿಚಾರವಾಗಿ ಗಲಾಟೆ: ಎರಡೂ ಕಡೆಯಿಂದ ದೂರು, ಪ್ರಕರಣ ದಾಖಲು
-
ಅಪರಾಧ48 minutes ago
ಬಂಟ್ವಾಳದಲ್ಲಿ ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಓರ್ವ ವಶಕ್ಕೆ | 12 ಅಂಕದ ಕೋಳಿಗಳು, ಕತ್ತಿ ಹಾಗೂ ₹1,100 ನಗದು ವಶ


















