ಬಿಗ್ ನ್ಯೂಸ್
Covid-19 irregularities-ಕೋವಿಡ್ ಅಕ್ರಮದ ಬಗ್ಗೆ ಕರ್ನಾಟಕದಲ್ಲಿ ಪ್ರಕರಣ ದಾಖಲು : ಮಾಸ್ಕ್, ಪಿಪಿಇ ಕಿಟ್ ನಲ್ಲೇ ನೂರಾರು ಕೋಟಿ ಅಕ್ರಮ
ಕೋವಿಡ್ ಸಾಂಕ್ರಾಮಿಕದ ವೇಳೆ ಪಿಪಿಇ ಕಿಟ್ ಹಾಗೂ ಎನ್-95 ಮಾಸ್ಕ್ ಸೇರಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಅಕ್ರಮ ಪ್ರಕರಣದ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಆರೋಗ್ಯ ಇಲಾಖೆಯ ಹಿಂದಿನ ಅಧಿಕಾರಿಗಳು, ವೈದ್ಯರು ಹಾಗೂ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ವೇಳೆ ಪಿಪಿಇ ಕಿಟ್ ಹಾಗೂ ಎನ್-95 ಮಾಸ್ಕ್ ಸೇರಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಅಕ್ರಮ ಪ್ರಕರಣದ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಆರೋಗ್ಯ ಇಲಾಖೆಯ ಹಿಂದಿನ ಅಧಿಕಾರಿಗಳು, ವೈದ್ಯರು ಹಾಗೂ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ವಿಧಾನಸೌಧ ಠಾಣೆ ಪೊಲೀಸರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಲೆಕ್ಕಪತ್ರಾಧಿಕಾರಿ ಎಂ.ವಿಷ್ಣು ಪ್ರಸಾದ್ ಅವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿದ್ದ ಡಾ.ಪಿ.ಗಿರೀಶ್, ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿದ್ದ ಜಿ.ಪಿ.ರಘು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಲಕರಣೆ ಅಧಿಕಾರಿಯಾಗಿದ್ದ ಎನ್.ಮುನಿರಾಜು, ಲಾಜ್ ಎಕ್ಸ್‌ಪೋರ್ಟ್ಸ್, ಎಂಎಸ್ ಪೂಡೆಂಟ್ ಮ್ಯಾನೇಜ್‌ಮೆಂಟ್, ಕರ್ನಾಟಕ ಜನಪ್ರತಿನಿಧಿಗಳು, ಕರ್ನಾಟಕ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ 19 ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮೂಲಕ ಕೋವಿಡ್ 19ರ ನಿರ್ವಹಣೆಗೆ ಅವಶ್ಯಕವಾಗಿ ಬೇಕಾಗಿದ್ದ ಎನ್-95 ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಾಮಗ್ರಿಗಳನ್ನು ಸಂಗ್ರಹಿಸಿರುವ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕಾನೂನಿನ ಎಲ್ಲ ಪ್ರಕ್ರಿಯೆಯನ್ನು ಗಾಳಿಗೆ ತೂರಿ ಕೆಟಿಪಿಪಿ ಕಾನೂನನ್ನು ಉಲ್ಲಂಘಿಸಲಾಗಿದೆ. ಕೋವಿಡ್ ನಿರ್ವಹಣೆಗೆ ನೇಮಿಸಿದ್ದ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳು ಅಪರಾಧ ಕೃತ್ಯ ಹಾಗೂ ಷಡ್ಯಂತ್ರ ರೂಪಿಸಿ ದೊಡ್ಡ ಮೊತ್ತದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಪಿಪಿಇ ಕಿಟ್ ಹಾಗೂ ಎನ್-95 ಮಾಸ್ಕ್ ಗಳನ್ನು ಖರೀದಿ ಮಾಡಿರುವ ದಾಖಲೆಗಳನ್ನು ಪರಿಶೀಲಿಸಿದಾಗ ಹಲವು ಅಪರಾಧಗಳು ಮೇಲ್ನೋಟಕ್ಕೆ ಕಂಡುಬಂದಿವೆ ಎಂದು ಎಫ್‌ಐಆರ್ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.
ಇಲಾಖೆಯ ಮೂಲಕ ಕೋವಿಡ್- 19ರ ಕಾಲಾವಧಿಯಲ್ಲಿ 15,51,713 ಪಿಪಿಐ ಕಿಟ್ ಹಾಗೂ ₹9.75 ಕೋಟಿ ಮೊತ್ತದ 42,15,047 ಎನ್ 95 ಮಾಸ್ಕ್‌ಗಳನ್ನು ಸಂಗ್ರಹ ಮಾಡಿಕೊಂಡು ಸ್ವಂತ ಲಾಭಕ್ಕೆ ಬಳಕೆ ಮಾಡಿಕೊಂಡಿರುವುದು ಕಂಡುಬಂದಿತ್ತು ಎಂದು ದೂರಿನಲ್ಲಿ ವಿವರಿಸಲಾಗಿದೆ.
ರಾಜ್ಯ ಸರ್ಕಾರ ಕಾನೂನಾತ್ಮಕ, ಆಡಳಿತಾತ್ಮಕ ಅನುಮೋದನೆ ನೀಡಿ 2,59,263 ಎನ್-95 ಮಾಸ್ಕ್ ಮತ್ತು 2,59,263 ಪಿಪಿಐ ಕಿಟ್ ಒಟ್ಟು ₹41.35 ಕೋಟಿ ಮೊತ್ತದ ಸಾಮಾಗ್ರಿಗಳನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಳಸಲು ಅನುಮೋದನೆ ನೀಡಲಾಗಿತ್ತು. ₹41.35 ಕೋಟಿ ಮೌಲ್ಯದ ಮೇಲೆ ಹೋಗಬಾರದು ಎಂದು ಷರತ್ತು ವಿಧಿಸಲಾಗಿತ್ತು. ಆದರೆ, ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ದೂರು ನೀಡಲಾಗಿದೆ.
ಹೆಚ್ಚುವರಿ ಪಿಪಿಇ ಕಿಟ್‌ಗಳನ್ನು ಟೆಂಡರ್ ಇಲ್ಲದೇ ಖರೀದಿಸಿರುವುದು ಹಾಗೂ ಪೂರ್ಣ ಪ್ರಮಾಣದ ಹಣವನ್ನು ಕೇವಲ ಪಿಪಿಇ ಕಿಟ್‌ಗಳಿಗೇ ವಿನಿಯೋಗಿಸಿರುವುದು ಕಂಡುಬಂದಿದೆ. ₹7 ಕೋಟಿ ಮೊತ್ತದಲ್ಲಿ 55,784 ಪಿಪಿಇ ಕಿಟ್‌ಗಳನ್ನು ಕಾನೂನು ಬಾಹಿರವಾಗಿ ಖರೀದಿಸಲಾಗಿದೆ ಎಂದು ಕಂಡುಬಂದಿದೆ ಎಂಬ ದೂರು ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
13,784 ಪಿಪಿಇ ಕಿಟ್‌ಗಳನ್ನು ಯಾವುದೇ ಸರಬರಾಜು ಆದೇಶವಿಲ್ಲದೇ ಖರೀದಿ ಮಾಡಲಾಗಿದೆ. ಆ ಕಿಟ್ ಎಲ್ಲಿಗೆ ನೀಡಲಾಗಿದೆ ಎಂಬುದಕ್ಕೆ ದಾಖಲೆ ಇಲ್ಲ ಎಂದು ವಿವರಿಸಲಾಗಿದೆ.
ಮಂಡ್ಯ ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ನೀಡಿದ್ದ 80 ಸಾವಿರ ಪಿಪಿಇ ಕಿಟ್‌ಗಳನ್ನು ಬಳಸದೇ ಹಾಗೆಯೇ ಬಿಟ್ಟು ₹9.99 ಕೋಟಿ ಸರ್ಕಾರಕ್ಕೆ ನಷ್ಟ ಉಂಟು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಲಾಜ್ ಎಕ್ಸ್‌ಪೋರ್ಟ್ ಹಾಗೂ ಪೂಡೆಂಟ್ ಮ್ಯಾನೇಜ್‌ಮೆಂಟ್ ಸಲ್ಯೂಷನ್‌ನವರು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹರಲ್ಲದಿದ್ದರೂ ದೊಡ್ಡ ಪ್ರಮಾಣದಲ್ಲಿ ಟೆಂಡರ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಮಾಸ್ಕ್, ಪಿಪಿಇ ಕಿಟ್ ಹೆಚ್ಚಾಗಿ ಖರೀದಿ
ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗಿದ್ದು ಮೆ. ಲಾಜ್ ಎಕ್ಸ್‌ಪೋರ್ಟ್ ಸಂಸ್ಥೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಿಲ್ಲದಿದ್ದರೂ ಮತ್ತು ಯೋಗ್ಯರಿಲ್ಲದಿದ್ದರೂ ಇವರಿಗೆ ದೊಡ್ಡ ಪ್ರಮಾಣದ ಟೆಂಡರ್ ನೀಡಲಾಗಿದೆ. ಎನ್-95 ಮಾಸ್ಕ್ ಮತ್ತು ಪಿಪಿಇ ಕಿಟ್ ಅನ್ನೇ ಹೆಚ್ಚಾಗಿ ಖರೀದಿ ಮಾಡಿದ್ದು, ಈ ಖರೀದಿಯ ಪೂರ್ಣ ಮೊತ್ತವನ್ನು ಟೆಂಡರ್‌ನಲ್ಲಿ ಭಾಗವಹಿಸದೇ ಇರುವ ಸಂಸ್ಥೆಯಾದ ಕ್ರೂಡೆಂಟ್ ಮ್ಯಾನೇಜೆಮೆಂಟ್ ಸಲ್ಯೂಷನ್ಸ್ ಸಂಸ್ಥೆಗೆ ಹಣವನ್ನು ಪಾವತಿಸಲಾಗಿದೆ ಎಂಬುದು ಕಂಡುಬಂದಿರುವುದಾಗಿ ಮೂಲಗಳು ಹೇಳಿವೆ.
ಎಸ್‌ಐಟಿಗೆ ವರ್ಗಾವಣೆ
ಕೋವಿಡ್- 19 ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ದಳ) ರಚಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು. ಹಿರಿಯ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಶನಿವಾರ ಅಥವಾ ಭಾನುವಾರ ರಚನೆ ಆಗಲಿದೆ. ವಿಧಾನಸೌಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಎಸ್‌ಐಟಿಗೆ ವರ್ಗಾವಣೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಸ್ಥಳೀಯ22 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು24 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು


















