Connect with us

ಬಿಗ್ ನ್ಯೂಸ್

ಜನಪ್ರಿಯ ದೇಶಿ ಟೂರ್ನಿ ಐಪಿಎಲ್ʼನ 15 ನೇ ಅವೃತ್ತಿ ಇಂದಿನಿಂದ ಆರಂಭ | ಹೊಸ ನಾಯಕತ್ವದ ಚೆನ್ನೈ –ಕೆಕೆಅರ್ ಮಧ್ಯೆ ಮೊದಲ ಮುಖಾಮುಖಿ- ದೋನಿಯ ಕೊನೆಯ ಟೂರ್ನಿ? ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Published

on

Ad Widget

Ad Widget

Ad Widget

Ad Widget

ಮುಂಬೈ, ಮಾ.25: ಭಾರತೀಯ ಕ್ರಿಕೆಟ್‌ನ ಜನಪ್ರಿಯ ದೇಶೀಯ ಟ್ವೆಂಟಿ-20 ಟೂರ್ನಿ ಐಪಿಎಲ್ ಮತ್ತೆ ಸ್ವದೇಶದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ.

Ad Widget

Ad Widget

Ad Widget

Ad Widget

 ಈ ಬಾರಿ ಐಪಿಎಲ್ ಸುದೀರ್ಘವಾಗಿ ಸಾಗಲಿದ್ದು 2011ರ ಬಳಿಕ ಮೊದಲ ಬಾರಿ ವಿಶ್ವ ಕ್ರಿಕೆಟ್‌ನ ಪ್ರತಿಷ್ಠಿತ ದೇಶೀಯ ಟ್ವೆಂಟಿ-20 ಟ್ರೋಫಿಗಾಗಿ 10 ತಂಡಗಳು ಸೆಣಸಾಡಲಿವೆ. ಈ ವರ್ಷದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎರಡು ಹೊಸ ತಂಡಗಳು ಸೇರಪಡೆಯಾಗಿದೆ.  ಲಕ್ನೋ ಸೂಪರ್‌ ಜೈಂಟ್ ಹಾಗೂ ಗುಜರಾತ್ ಟೈಟಾನ್ಸ್ ಹೊಸ ತಂಡಗಳಾಗಿವೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕ್ರಿಕೆಟ್ ಮಂಡಳಿಯ ಪ್ರಮುಖರು ನಿಟ್ಟುಸಿರು ಬಿಡುತ್ತಿದ್ದಾರೆ. ಎರಡು ವರ್ಷಗಳ ಅಂತರದ ಬಳಿಕ ಐಪಿಎಲ್ ಟೂರ್ನಿಯನ್ನು ಸಂಪೂರ್ಣವಾಗಿ ಭಾರತದಲ್ಲೇ ನಡೆಸಲು ನಿರ್ಧರಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಈ ಬಾರಿ ಕ್ರೀಡಾಂಗಣ ಸಾಮರ್ಥ್ಯದ 25 ಪ್ರತಿಶತದಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಲಾಗುವುದು. 2 ಹೊಸ ತಂಡಗಳ ಸೇರ್ಪಡೆ ಯೋ೦ದಿಗೆ ಪಂದ್ಯಗಳ ಸಂಖ್ಯೆಯನ್ನು 60ರಿಂದ 74ಕ್ಕೆ ಏರಿಸಲಾಗಿದೆ. ಈ ಹಿಂದಿನಂತೆಯೇ ಎಲ್ಲ ತಂಡಗಳು ತಲಾ 14ಪಂದ್ಯಗಳನ್ನು ಆಡುತ್ತವೆ. ಆದರೆ, ದೀರ್ಘಾವಧಿಯ ಟೂರ್ನಮೆಂಟ್ ಕ್ರಿಕೆಟ್‌ನ ತೀವ್ರತೆ ಹಾಗೂ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಕಾಲವೇ ಇದಕ್ಕೆ ಉತ್ತರಿಸಬೇಕು.

Ad Widget

Ad Widget <> Ad Widget

ಮಹಾರಾಷ್ಟ್ರದ ನಾಲ್ಕು ಕಡೆ ಪಂದ್ಯ

ಈ ವರ್ಷದ ಐಪಿಎಲ್‌ನ ಎಲ್ಲ ಲೀಗ್ ಪಂದ್ಯಗಳು ಮಹಾರಾಷ್ಟ್ರದ ಎರಡು ನಗರಗಳ  ನಾಲ್ಕು ತಾಣಗಳಲ್ಲಿ ಆಯೋಜಿಸಲಾಗಿದೆ.  ಮುಂಬೈನಲ್ಲಿ ಮೂರು ಹಾಗೂ ಪುಣೆಯ  ಒಂದು ಸ್ಟೆಡಿಯಂಗಳಲ್ಲಿ ಪಂದ್ಯಾಕೂಟ ಆಯೋಜಿಸಲಾಗುತ್ತದೆ. ಎಲ್ಲ ತಂಡಗಳು ತನ್ನ ಎಲ್ಲ  14 ಲೀಗ್ ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂ, ನವಿ ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂ ಹಾಗೂ ಪುಣೆಯ ಎಂಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಆಡಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂ ಹಾಗೂ ಬ್ರಬೋರ್ನ್ ಸ್ಟೇಡಿಯಂ ತಲಾ 20 ಪಂದ್ಯಗಳು ಹಾಗೂ ನವಿ ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂ ಹಾಗೂ ಪುಣೆಯ ಎಂಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ತಲಾ 15 ಪಂದ್ಯಗಳು ಆಡಲಾಗುವುದು. ಪೈನಲ್‌ ಹಾಗೂ ಎಲಿಮಿನೆಟರ್‌ ಪಂದ್ಯ ನಡೆಯುವ ಸ್ಥಳದ ಘೋಷಣೆ ಇನ್ನಷ್ಟೆ ಆಗಬೇಕಿದೆ

2012 ಹಾಗೂ 2014ರಲ್ಲಿ ಪ್ರಶಸ್ತಿ ಜಯಿಸಿರುವ ಕೆಕೆಆರ್ ಹಿಂದಿನ ಯಶಸ್ಸನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ. ಕಳೆದ ವರ್ಷ ಐಪಿಎಲ್ ಫೈನಲ್‌ನಲ್ಲಿ ಎದುರಿಸಿದ್ದ ಚೆನ್ನೈ ತಂಡವನ್ನೇ ಈ ವರ್ಷದ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿರುವ ಕೆಕೆಆರ್ ಶುಭಾರ೦ಭದ ನಿರೀಕ್ಷೆಯಲ್ಲಿದೆ.

Ad Widget

Ad Widget

ಗುಂಪು ಹಾಗೂ ತಂಡಗಳು

ಕೆಕೆಆರ್,   ಮುಂಬೈ ಇಂಡಿಯಾನ್ಸ್‌ , ರಾಜಸ್ಥಾನ, ಡೆಲ್ಲಿ ಹಾಗೂ  ಲಕ್ನೋ

 ಬಿ ಗುಂಪಿನಲ್ಲಿ : ಹೈದರಾಬಾದ್ ಚೆನ್ನೈ, ಆರ್‌ಸಿಬಿ, ಪಂಜಾಬ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿವೆ

ಸ್ಪರ್ಧೆ ಹೇಗೆ ?

ಪ್ರತಿ ತಂಡವೂ ತನ್ನ ಗುಂಪಿನ ಇತರ ತಂಡಗಳ ಜತೆ ತಲಾ ಎರಡು ಪಂದ್ಯ ಆಡಲಿದೆ. ಇನ್ನೊಂದು ಗುಂಪಿನ ನಾಲ್ಕು ತಂಡಗಳ ಜತೆ ತಲಾ 1 ಪಂದ್ಯ ಹಾಗೂ ಒಂದು ತಂಡ ಪಂದ್ಯವನ್ನು (ಇದು ಗುಂಪಿನಲ್ಲಿರುವ ತಂಡದ ಕ್ರಮಾಂಕವನ್ನು ಅವಲಂಬಿಸಿದೆ)ದ ಜತೆ ಎರಡು ಪಂದ್ಯ ಆಡಲಿದೆ.  

ಕ್ಯುರೇಟರ್‌ಗಳಿಗೆ ಸುಮಾರು 2 ತಿಂಗಳ ಕಾಲ ಪಿಚ್‌ಗಳ ನೈಜತೆಯನ್ನು ಕಾಪಾಡಿಕೊಳ್ಳುವುದು ಒಂದು ಸವಾಲಾಗಿದೆ.ಕೆಂಪುಮಣ್ಣಿನ ಪಿಚ್‌ಗಳಾದ ವಾಂಖೆಡೆ, ಸಿಸಿಐ ಹಾಗೂ ಡಿ.ವೈ.ಪಾಟೀಲ್ ಸ್ಟೇಡಿಯಂಗಳಲ್ಲಿ ಹೆಚ್ಚಿನ ಬೌನ್ಸ್ ನಿರೀಕ್ಷಿಸಲಾಗುತ್ತಿದೆ. ಪುಣೆಯಲ್ಲಿನ ಕಪ್ಪು ಮಣ್ಣಿನ ಪಿಚ್  ಸ್ಪಿನ್ ಸ್ನೇಹಿ ಆಗಿರುವ ಸಾಧ್ಯತೆಯಿದೆ.

ಎಂಸಿಸಿ ಹೊಸ ನಿಯಮಗಳು ಜಾರಿ

ಮೆಲ್ಬೋ‌ನ್ ಕ್ರಿಕೆಟ್ ಕ್ಲಬ್ ಇತ್ತೀಚೆಗೆ ಪರಿಚಯಿಸಿರುವ ನೂತನ ನಿಯಮಗಳನ್ನು ಈ ಬಾರಿಯ ಐಪಿಎಲ್‌ನಲ್ಲಿ ಅಳವಡಿಸಿಕೊಳ್ಳಲಾಗುತ್ತದೆ. ಪ್ರಮುಖವಾಗಿ ಬ್ಯಾಟರ್‌ ಕ್ಯಾಚ್ ನೀಡಿ ನಿರ್ಗಮಿಸಿದರೆ, ಕ್ರೀಸ್‌ಗೆ ಇಳಿಯುವ ಹೊಸ ಬ್ಯಾಟರ್ ಸ್ಟ್ರೈಕ್‌ನಲ್ಲಿ ಆಡಬೇಕಿದೆ. ಸೂಪರ್‌ ಓವರ್‌ ನಿಯಮವನ್ನೂ ಬಿಸಿಸಿಐ ಪರಿಷ್ಕರಿಸಿದ್ದು, ಪ್ಲೇ-ಆಫ್‌ ಪಂದ್ಯದಲ್ಲಿ ಸೂಪರ್‌ ಓವರ್‌ ಕೂಡ ಟೈ ಆಗಿ, ನಿಗದಿತ ಅವಧಿಯಲ್ಲಿ ಪಂದ್ಯ ಮುಗಿಯದಿದ್ದರೆ ಲೀಗ್‌ ಹಂತದಲ್ಲಿನ ಅಂಕಪಟ್ಟಿಯನ್ನು ಆಧರಿಸಿ ಗೆಲುವು-ಸೋಲು ನಿರ್ಧಾರವಾಗಲಿದೆ.

ನೂತನ ನಾಯಕರ ಸಾರಥ್ಯ

ಐಪಿಎಲ್‌ನಲ್ಲಿ ಈ ಬಾರಿ 6 ತಂಡಗಳು ನೂತನ ನಾಯಕತ್ವದಡಿ ಮೈದಾನಕ್ಕಿಳಿಯಲಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕು ಬಾರಿ ಚಾಂಪಿಯನ್ ಪಟ್ಟಕ್ಕೆ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ, ಟೂರ್ನಿ ಆರಂಭಕ್ಕೆ ಕೇವಲ ಎರಡು ದಿನ ಬಾಕಿ ಇರುವಾಗ ನಾಯಕನ ಸ್ಥಾನವನ್ನು ರವೀಂದ್ರ ಜಡೇಜಾಗೆ ಬಿಟ್ಟು ಕೊಟ್ಟಿದ್ದಾರೆ.

14 ಸೀಸನ್ ಕಳೆದರೂ ಚಾಂಪಿಯನ್ ಪಟ್ಟದಿಂದ ದೂರವೇ ಉಳಿದಿರುವ ರಾಯಲ್ ಚಾಲೆಂಜರ್ಸ್ ತಂಡ ಫಾಫ್ ಡುಪ್ಲೆಸ್ಸಿಗೆ ನಾಯಕತ್ವ ಸಿಕ್ಕಿದೆ.  ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಶ್ರೇಯಸ್ ಅಯ್ಯರ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.  ಕನ್ನಡಿಗರಾದ ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್‌ವಾಲ್ ಕ್ರಮವಾಗಿ ಲಖನೌ ಸೂಪರ್ ಜೈಯಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಸವ್ಯಸಾಚಿ ಹಾರ್ದಿಕ್ ಪಾಂಡ್ಯಾ ಈ ಬಾರಿ ನೂತನ ಫ್ರಾಂಚೈಸಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

12 ಡಬಲ್ ಹೆಡ್ಡರ್

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು 12 ಡಬಲ್ ಹೆಡ್ಡರ್ (ಒಂದೇ ದಿನ ಎರಡು ಪಂದ್ಯ) ನಡೆಯಲಿದೆ. ಮೊದಲನೇ ಪಂದ್ಯ 3.30ಕ್ಕೆ ಹಾಗೂ ಎರಡನೇ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಎರಡು ಡಿಆರ್‌ಎಸ್‌

15ನೇ ಆವೃತ್ತಿಯ ಐಪಿಎಲ್‌ನಲ್ಲಿ  ಪ್ರತಿ ಇನ್ನಿಂಗ್ಸ್‌ನಲ್ಲಿ ತಂಡವೊಂದಕ್ಕೆ ಎರಡು ಡಿಆರ್‌ಎಸ್‌ ಅವಕಾಶ ನೀಡಲಾಗಿದೆ

ಈ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯದಲ್ಲಿ  ಟಿ -20ವಿಶ್ವಕಪ್ ಟೂರ್ನಿ ನಡೆಯುತ್ತಿರುವ ಕಾರಣ ಐಪಿಎಲ್ ಟೂರ್ನಿಯು ಭಾರತದ ಕೆಲವು ಆಟಗಾರರ ಭವಿಷ್ಯವನ್ನು ನಿರ್ಧರಿಸುತ್ತದೆ.ಅಲ್ಲದೇ ಭಾರತದ ಅತ್ಯಂತ ಯಶಸ್ವಿ ಕಪ್ತಾನ ಹಾಗೂ ವಿಕೇಟ್‌ ಕೀಪರ್‌ ಮಹೇಂದ್ರಸಿಂಗ್‌ ದೋನಿ ಆಡಲಿರುವ ಕೊನೆಯ ಟೂರ್ನಿ ಎಂದೇ ಹೇಳಲಾಗುತ್ತಿದೆ

ವೇಳಾಪಟ್ಟಿ

Ad Widget
Click to comment

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!