ಬಿಗ್ ನ್ಯೂಸ್
Atul Subhash Techie Suicideಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ – ಕೊನೆಗೂ ಪತ್ನಿ, ಅತ್ತೆ ಮತ್ತು ಬಾಮೈದನನ್ನು ಲಾಕ್ ಮಾಡಿದ ಪೊಲೀಸರು; 15 ದಿನಗಳ ಮೊದಲೇ ಸಾಯುವುದಕ್ಕೆ ಪ್ರಿಪರೇಶನ್ ಮಾಡಲು ಆರಂಭಿಸಿದ್ದ !
ಪೊಲೀಸರು ತನಿಖೆ ಇಳಿದಾಗ ಬೆಳಕಿಗೆ ಬಂದ ಮತ್ತೊಂದು ಮಹತ್ವದ ಸಂಗತಿಯೆಂದರೆ ಸಾಯುವುದಕ್ಕೆ 15 ದಿನಗಳ ಹಿಂದೆ ಗೂಗಲ್ ಸರ್ಚ್ ಮಾಡಿದ ಅತುಲ್, ಅದರಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಯಾರನ್ನೆಲ್ಲ ಸಂಪರ್ಕಿಸಬಹುದು ಎನ್ನುವ ವಿಷಯವನ್ನು ಹುಡುಕಾಟ ನಡೆಸಿದ್ದಾನೆ. ರಾಷ್ಟ್ರಪತಿ, ಪ್ರಧಾನಿ ನ್ಯಾಯಾಧೀಶರ ಮೇಲ್ ಐಡಿಗಾಗಿ ಸರ್ಚ್ ಮಾಡಿದ್ದಾನೆ. ಇಂತಹುದೇ ಬೇರೆ ಪ್ರಕರಣದಲ್ಲಿ ವಿವಿಧ ನ್ಯಾಯಧೀಶರು, ನ್ಯಾಯಾಲಯಗಳು ಯಾವ ಯಾವ ತೀರ್ಪು ನೀಡಿವೆ ಎನ್ನುವ ವಿಚಾರದಲ್ಲೂ ಆತ ಶೋಧಿಸಿದ್ದಾನೆ.

Atul Subhash Techie Suicide ಬೆಂಗಳೂರು : ಡಿ 15: ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿರುವ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಯಾಗಿದ್ದು ಪೊಲೀಸರ ತನಿಖೆಯ ವೇಳೆ ಹಲವು ಸ್ಪೋಟಕ ವಿಷಯಗಳು ಬೆಳಕಿಗೆ ಬಂದಿದೆ. ತಾನು ಆತ್ಮಹತ್ಯೆಗೆ ಶರಣಾಗುವುದಕ್ಕೆ 15 ದಿನಗಳ ಮೊದಲೇ ಆತ ಸಾಯುವುದಕ್ಕೆ ಬೇಕಾದ ಪ್ರಿಪರೇಷನ್ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇದರಿಂದ ಆತ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಕಿರುಕುಳದಿಂದ ಎಷ್ಟರಮಟ್ಟಿಗೆ ರೋಸಿ ಹೋಗಿದ್ದ ಎಂದು ತಿಳಿದು ಬರುತ್ತದೆ.
ಇನ್ನು ಆತ ಸಾಯುವ ಮೂರು ದಿನಗಳ ಹಿಂದೆ ಡೆತ್ ನೋಟ್ ಬರೆಯಲು ಆರಂಭಿಸಿರುವುದು ಆತನ ಮೊಬೈಲ್ ಲ್ಯಾಪ್ಟಾಪ್ ಓಪನ್ ಮಾಡಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಗೊತ್ತಾಗಿದೆ. ಆತ್ಮಹತ್ಯೆ ಎನ್ನುವುದು ಆ ಕ್ಷಣದ ನಿರ್ಧಾರ ಎಂಬ ಮಾತುಗಳನ್ನು ಈ ಘಟನೆ ಹುಸಿ ಮಾಡಿದೆ. ಪ್ರಕರಣದ ತನಿಖೆಯನ್ನು ಬೆಂಗಳೂರಿನ ಮಾರ್ತಹಳ್ಳಿ ಪೊಲೀಸರು ಮಾಡುತ್ತಿದ್ದಾರೆ.
ಅತುಲ್ ಆತ್ಮಹತ್ಯೆ ಬಳಿಕ ತಲೆಮರೆಸಿಕೊಂಡಿದ್ದ ಆತನ ಪತ್ನಿ ನಿಕಿತಾ ಸಿಂಘಾಣಿಯ, ಅತ್ತೆ ನಿಶಾ ಸಿಂಘಾಣಿಯ ಹಾಗೂ ಬಾಮೈದ ಅನುರಾಗ್ ಸಿಂಘಾಣಿಯನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಒತ್ತಡ ಹೇರಲಾಗುತ್ತಿತ್ತು. ಅಭಿಯಾನಗಳು ನಡೆದಿದ್ದವು. ಪ್ರಕರಣಗಳಲ್ಲಿ ಪುರುಷರು ಆರೋಪಿಯಾಗಿದ್ದರೆ ಯಾವುದೇ ಸಾಕ್ಷ್ಯ ಇಲ್ಲದಿದ್ದರೂ ಬಂಧಿಸುವ ಪೊಲೀಸರು, ಮಹಿಳೆಯಾದಾಗ ಪರಿಣಾಮಕಾರಿ ಸಾಕ್ಷ್ಯ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಅತುಲ್ ಪತ್ನಿಯನ್ನು ಪೊಲೀಸರು ಹರಿಯಾಣದ ಗುರುಗ್ರಾಮದಲ್ಲಿ ವಶಕ್ಕೆ ಪಡೆದರೆ, ಅತ್ತೆ ಹಾಗೂ ಬಾಮೈದನನ್ನು ಉತ್ತರ ಪ್ರದೇಶದಲ್ಲಿ ಲಾಕ್ ಮಾಡಲಾಗಿದೆ.
ಇನ್ನು ಅತುಲ್ ಬರೆದಿರುವ 30 ಪುಟಗಳ ಡೆತ್ ನೋಟಿನಲ್ಲಿ ಹಾಗೂ ಸಾಯುವುದಕ್ಕೆ ಕೆಲ ಗಂಟೆಗಳ ಮೊದಲು ಪೋಸ್ಟ್ ಮಾಡಲಾದ ಒಂದು ಗಂಟೆಗೂ ಅಧಿಕ ಉದ್ದದ ವಿಡಿಯೋದಲ್ಲಿ ನಿಖಿತಾ ಕುಟುಂಬದ ಹಿಂಸೆ, ತನ್ನ ಮೇಲೆ ದಾಖಲಾದ ಸುಳ್ಳು ಕೇಸಿನ ವಿಚಾರ ಹಾಗೂ ಕೋರ್ಟ್ ನಲ್ಲಾದ ಬೆಳವಣಿಗೆಗಳ ಬಗ್ಗೆ ವಿಸ್ತ್ರತವಾಗಿ ಅತುಲ್ ಉಲ್ಲೇಖ ಮಾಡಿದ್ದಾರೆ . ಇದು ಸಾರ್ವಜನಿಕಗೊಳ್ಳುತ್ತಲೇ ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಯಿತು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ನೀಡಲಾದ ವಿಶೇಷ ಕಾನೂನಿನ ಸೌಲಭ್ಯವನ್ನು ಬಳಸಿಕೊಂಡು ಕೆಲ ಮಹಿಳೆಯರು ಪುರುಷರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಿ ಹಿಂಸೆ ನೀಡುತ್ತಿದ್ದು, ಈ ಆಕ್ರೋಶವನ್ನು ಹೊರ ಹಾಕಲು ಈ ಪ್ರಕರಣವನ್ನು ನೆಟ್ಟಿಗರು ಹಾಗೂ ಸಾರ್ವಜನಿಕರು ಸಮರ್ಥವಾಗಿ ಬಳಸಿಕೊಂಡರು. ಆರೋಪಿಗಳ ಬಂಧನಕ್ಕಾಗಿ ಅಭಿಯಾನಗಳನ್ನು ನಡೆಸಿದರು.
ಪೊಲೀಸರು ತನಿಖೆಗೆ ಇಳಿದಾಗ ಬೆಳಕಿಗೆ ಬಂದ ಮತ್ತೊಂದು ಮಹತ್ವದ ಸಂಗತಿಯೆಂದರೆ ಸಾಯುವುದಕ್ಕೆ 15 ದಿನಗಳ ಹಿಂದೆ ಗೂಗಲ್ ಸರ್ಚ್ ಮಾಡಿದ ಅತುಲ್, ಅದರಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಯಾರನ್ನೆಲ್ಲ ಸಂಪರ್ಕಿಸಬಹುದು ಎನ್ನುವ ವಿಷಯವನ್ನು ಹುಡುಕಾಟ ನಡೆಸಿದ್ದಾನೆ. ರಾಷ್ಟ್ರಪತಿ, ಪ್ರಧಾನಿ, ನ್ಯಾಯಾಧೀಶರ ಮೇಲ್ ಐಡಿಗಾಗಿ ಸರ್ಚ್ ಮಾಡಿದ್ದಾನೆ. ಇಂತಹುದೇ ಬೇರೆ ಪ್ರಕರಣದಲ್ಲಿ ವಿವಿಧ ನ್ಯಾಯಾಧೀಶರು, ನ್ಯಾಯಲಯಗಳು ಯಾವ ಯಾವ ತೀರ್ಪು ನೀಡಿವೆ ಎನ್ನುವ ವಿಚಾರದಲ್ಲೂ ಆತ ಶೋಧಿಸಿದ್ದಾನೆ.
ಸದ್ಯ ಪೊಲೀಸರು ಅತುಲ್ ಲ್ಯಾಪ್ಟಾಪ್ ಹಾಗೂ ಮೊಬೈಲ್ ಫೋನನ್ನು ಆಳಕ್ಕಿಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಂಧಿತ ಆರೋಪಿಗಳ ಹೇಳಿಕೆಯನ್ನು ಪಡೆಯುವುದಕ್ಕೆ ತನಿಖೆಯನ್ನು ಕೇಂದ್ರೀಕರಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized21 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು9 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ7 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ7 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















