Connect with us

ಪುತ್ತೂರು

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ : ಕಳೆದ ಬಾರಿಗಿಂತಲೂ ಅದ್ದೂರಿಯಾಗಿ ನಡೆಯಲಿದೆ ಶ್ರೀನಿವಾಸ ಕಲ್ಯಾಣೋತ್ಸವ- ಕೇಶವಪ್ರಸಾದ್ ಮುಳಿಯ : ಹಿಂದೂಗಳ ಮೇಲಾಗುತ್ತಿರುವ ದಬ್ಬಾಳಿಕೆಗೆ ಒಗ್ಗಟ್ಟೊಂದೇ ಪರಿಹಾರ : ಡಾ.ಸುರೇಶ್ ಪುತ್ತೂರಾಯ

Published

on

Ad Widget

Ad Widget

Ad Widget

Ad Widget

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಉದ್ಘಾಟನಾ ಸಮಾರಂಭ ಡಿ.15 ರಂದು ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಿತು.

Ad Widget

Ad Widget

Ad Widget

Ad Widget

ದೀಪಪ್ರಜ್ವಲನೆ ನೆರವೇರಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ ಅದಕ್ಕಿಂತ ಅದ್ದೂರಿಯಾಗಿ ನಡೆಯುವುದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಉದ್ಯಮಿ ಕೇಶವ ಪ್ರಸಾದ್ ಮುಳಿಯ ಹೇಳಿದರು.

Ad Widget

Ad Widget alt="Ad Widget"/>

Ad Widget

ಹಿಂದೂಗಳ ಒಳಿತಿಗಾಗಿ ನಡೆಯುವ ಕಲ್ಯಾಣೋತ್ಸವದಲ್ಲಿ ಯಾವೂದೇ ವೈಮನಸ್ಸಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕು. ಧರ್ಮ ಸಂರಕ್ಷಣೆಗಾಗಿ ಈ ಅದ್ದೂರಿ ಕಾರ್ಯಕ್ರಮದ ರೂವಾರಿ ಅರುಣ್ ಪುತ್ತಿಲರಿಗೆ ಧನ್ಯವಾದಗಳು ಎಂದರು.

Ad Widget

Ad Widget <> Ad Widget

ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಈ ಬಾರಿ ನಾವೆಲ್ಲ ಒಂದಾಗಿದ್ದೇವೆ. ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನಮ್ಮ ಒಗ್ಗಟ್ಟೊಂದೇ ಪರಿಹಾರ. ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ನಾವೆಲ್ಲ ಒಂದು ಎನ್ನುವುದನ್ನು ಸಾರಬಹುದು ಎಂದರು.ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಬೇಕು ಎಂದು ಸುರೇಶ್ ಪುತ್ತೂರಾಯ ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪ್ರತಿ ಹಿಂದೂಗಳ ಮನೆಗೆ ತಲುಪಲಿದೆ. ಎರಡು ದಿನದ ಕಾರ್ಯಕ್ರಮವನ್ನು ನಮ್ಮ ಕಾರ್ಯಕ್ರಮವೆಂಬಂತೆ ಎಲ್ಲಾ ಹಿಂದೂ ಬಂಧುಗಳು ಪಾಲ್ಗೊಳ್ಳಬೇಕು ಮತ್ತು ಪ್ರತಿ ಮನೆಗಳಿಂದ ಹೊರಕಾಣಿಕೆ ಸಮರ್ಪಣೆಯಾಗಬೇಕೆಂದು ಅರುಣ್ ಪುತ್ತಿಲ ಹೇಳಿದರು.ದೇವಳದ ಅರ್ಚಕರಾದ ವಿ.ಎಸ್ ಭಟ್ ದೀಪಪ್ರಜ್ವಲನೆಗೊಳಿಸಿ ಶುಭಹಾರೈಸಿದರು.

Ad Widget

Ad Widget

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಉದ್ಯಮಿ ಶಶಾಂಕ್ ಕೊಟೇಚಾ, ಹಾಗೂ ನಿವೃತ್ತ ಸೇನಾಧಿಕಾರಿ ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಲಕ್ಷ್ಮಣ ಸಂಪ್ಯ, ಮಹಿಳಾ ಘಟಕದ ಸಂಚಾಲಕರಾದ ರಜತಾ ಗಿರೀಶ್ ಭಟ್, ಸಹಸಂಚಾಲಕಿ ಪುಷ್ಪಾ ರಾಜೇಶ್, ಹರಿಣಿ ಪುತ್ತೂರಾಯ, ಮಲ್ಲಿಕಾ ಪ್ರಸಾದ್, ಕಡಬ ಘಟಕದ ಕಾರ್ಯಾಧ್ಯಕ್ಷರಾದ ವೆಂಕಟರಮಣ ಕಡಬ, ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರವೀಣ್ ನಾಯ್ಕ್ ಪಾಂಗಾಳಾಯಿ, ತಾರಾನಾಥ ಸವಣೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಸಂಚಾಲಕ ಮನೀಶ್ ಕುಲಾಲ್ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಧನ್ಯವಾದಗೈದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೂ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಯಿತು.

Ad Widget
Click to comment

Leave a Reply

ದಕ್ಷಿಣ ಕನ್ನಡ

ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.

Ad Widget

Ad Widget

Ad Widget

Ad Widget

ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!