ನಿಧನ ವಾರ್ತೆ
Puttur-ಪುತ್ತೂರು : ವಿದೇಶಿ ಉದ್ಯೋಗದಿಂದ ರಜೆಯಲ್ಲಿ ಬಂದಿದ್ದ ಯುವಕ ಹೃದಯಾಘಾತದಿಂದ ನಿಧನ
ಭಾರತದ ಯುವ ಸಮುದಾಯದಲ್ಲಿ ಹೃದಯಾಘಾತದ ಸಾವು ಹೆಚ್ಚಳವಾಗುತ್ತಿರುವುದು ಎಲ್ಲರನ್ನು ದಿಗ್ಭ್ರಮೆಗೊಳಿಸಿದೆ. ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.
ಪುತ್ತೂರು : ಭಾರತದ ಯುವ ಸಮುದಾಯದಲ್ಲಿ ಹೃದಯಾಘಾತದ ಸಾವು ಹೆಚ್ಚಳವಾಗುತ್ತಿರುವುದು ಎಲ್ಲರನ್ನು ದಿಗ್ಭ್ರಮೆಗೊಳಿಸಿದೆ.
ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೃತರು ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿದ್ದರು. ಚಾರ್ವಾಕದ ಮೂಲ ಮನೆಯಲ್ಲಿ ದೈವಗಳ ಕಾರ್ಯಕ್ರಮದ ನಿಮಿತ್ತ ಅಲ್ಲಿಗೆ ಬಂದವರು ನಿನ್ನೆ ರಾತ್ರಿಯೇ ಪುತ್ತೂರಿಗೆ ಬಂದಿದ್ದರು.
ಬೆಳಗ್ಗಿನ ಜಾವ ಹೃದಯಾಘಾತವಾದ ತಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಡಿ.28ರಂದು ವಿದೇಶಕ್ಕೆ ಹೋಗುವವರಿದ್ದರು.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
-
ಕ್ರೈಂ14 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ14 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು13 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ12 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ8 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್14 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ9 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ13 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















