Connect with us

ಬಿಗ್ ನ್ಯೂಸ್

ಉಡುಪಿಯಲ್ಲಿ  ಬೆಳ್ಳಂಬೆಳಗ್ಗೆ ಅಬ್ಬರಿಸಿದ ಬುಲ್ಡೋಜರ್- ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷನ  ಹೊಟೇಲ್‌ ತೆರವು | ಹಿಜಬ್ ಹೋರಾಟದಲ್ಲಿ  ವಿದ್ಯಾರ್ಥಿನಿಯರಿಗೆ ಬೆಂಬಲಿಸಿದಕ್ಕೆ ನಗರಸಭೆ  ದ್ವೇಷ ಸಾಧಿಸಿದೆ : ಹೊಟೇಲ್‌ ಮಾಲಕ

Published

on

Ad Widget

Ad Widget

Ad Widget

Ad Widget

 ಉಡುಪಿಯಲ್ಲಿ ಮಾ 26 ರಂದು ಬೆಳ್ಳಂಬೆಳಗ್ಗೆ ಬುಲ್ಡೋಜರ್ ಅಬ್ಬರಿಸಿದೆ. ನಗರದಲ್ಲಿ ಕಟ್ಟಿರುವ ಹಲವು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಉಡುಪಿ ನಗರ ಸಭೆ ಮಾಡಿದೆ..ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಕಳೆದ ಹಲವು ವರ್ಷಗಳಿಂದ ಅಕ್ರಮ ಕಟ್ಟಡದಲ್ಲಿ ಹೊಟೇಲ್ ವ್ಯವಹಾರ ನಿರ್ವಹಿಸುತ್ತಿದ್ದು,ನಗರಸಭೆ ಹಲವು ನೋಟಿಸ್ ನೀಡಿದ ಬಳಿಕ ಹೊಟೇಲ್ ತೆರವುಗೊಳಿಸಿದ ಕಾರಣ ನಗರಸಭೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬೊಲ್ಡೋಜರ್ ನಲ್ಲಿ ಹೊಟೇಲ್ ನೆಲಸಮಗೊಳಿಸಿದೆ.

Ad Widget

Ad Widget

Ad Widget

Ad Widget

ಉಡುಪಿ ಯ ನಗರದ ಜಾಮೀಯಾ ಮಸೀದಿ ಕಾಂಪ್ಲೆಕ್ಸ್ ನಲ್ಲಿ ಬುಲ್ಡೋಜರ್ ಘರ್ಜನೆ ಮಾಡಿದ್ದು,ಬೆಳ್ಳಂಬೆಳಗ್ಗೆ ಉಡುಪಿ ನಗರಸಭೆಯ ಕಾರ್ಯಾಚರಣೆ ಮಾಡಿದೆ.. ಎಸ್ ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಅವರ ಝರಾ ಹೋಟೆಲ್ ನ್ನು ನಗರ ಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನಜೀರ್ ಅಹಮ್ಮದ್ ಅವರ ಹೊಟೇಲ್‌ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಅಕ್ರಮ ಕಟ್ಟಡದಲ್ಲಿದೆ. ಈ ಬಗ್ಗೆ ನಜೀರ್ ಅಹಮ್ಮದ್ ಅವರಿಗೆ ನಗರ ಸಭೆ ಹಲವು ಬಾರಿ ನೋಟೀಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ..ಈ ಹಿನ್ನಲೆಯಲ್ಲಿ ನಗರ ಸಭೆ ಅಧಿಕಾರಿಗಳು ಇದೀಗ ಹೊಟೇಲ್ ತೆರವು ಮಾಡಿದ್ದಾರೆ.

Ad Widget

Ad Widget <> Ad Widget

ಹೊಟೇಲ್ ತೆರವು ಹಿನ್ನಲೆಯಲ್ಲಿ ನಜೀರ್ ಅಹಮ್ಮದ್ ಜೊತೆ  ಅಧಿಕಾರಿಗಳು ಪೊಲೀಸರ ಜೊತೆ ಮಾತುಕತೆ ಮಾಡಿದ್ದಾರೆ..ನಗರಸಭೆ ಸಿಬ್ಬಂಧಿ, ಪೌರಕಾರ್ಮಿಕರಿಂದ ಅಂಗಡಿ ತೆರವು ಮಾಡಲಾಗಿದೆ..ಹೊಟೇಲ್ ಜೊತೆಗೆ ಕಟ್ಟಡದಲ್ಲಿರುವ ಝೈತರ್ ಆನ್ ಎಂಬ ಮಳಿಗೆಯೂ ತೆರವು ಮಾಡಲಾಗಿದೆ.

ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷನ ಅಕ್ರಮ ಕಟ್ಟಡ ತೆರವು ಹಿನ್ನಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡಾ ಮಾಡಲಾಗಿದೆ..ಹೊಟೇಲ್ ತೆರವು ಕಾರ್ಯಾಚರಣೆ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು,ಈ ಹೊಟೇಲ್ ತೆರವು ಬಗ್ಗೆ ಕಳೆದ ಒಂದು ವರ್ಷದಿಂದ‌ ನೊಟೀಸ್ ನೀಡುತ್ತಿದ್ದೇವೆ‌‌.. ಅಕ್ರಮ ಕಟ್ಟಡ ತೆರವು ಬಗ್ಗೆ ಮೂರು ತಿಂಗಳಿನಿಂದ ನಗರಸಭೆಯಲ್ಲಿ ಚರ್ಚೆಯನ್ನು ಮಾಡಲಾಗಿದೆ..ನೊಟೀಸ್ ನೀಡಿ ಯೇ ಅಕ್ರಮ ಕಟ್ಟಡ ತೆರವುಗೊಳಿಸಲಾಗಿದೆ ಅಂತಾ ಹೇಳಿದ್ದಾರೆ.

Ad Widget

Ad Widget

ಈ ವೇಳೆ ಕೇವಲ ಈ ಕಟ್ಟಡ ಮಾತ್ರನಾ ಬೇರೆ ಅಕ್ರಮ ಕಟ್ಟಡಗಳನ್ನು ಏನು ಮಾಡುತ್ತೀರಿ ಅಂತಾ  ಎಸ್‌ ಡಿಪಿಐ ಬೆಂಬಲಿಗರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಉಡುಪಿ ನಗರದ ಎಲ್ಲಾ ಅಕ್ರಮ ಕಟ್ಟಡಗಳಿಗೆ ನೋಟೀಸ್ ನೀಡಲಾಗಿದೆ.‌ತೆರವುಗೊಳಿಸದಿದ್ದಲ್ಲಿ ಕಾರ್ಯಾಚರಣೆ ಮಾಡಿ ತೆರವು ಮಾಡೋದಾಗಿ ಹೇಳಿದ್ದಾರೆ.

ಹಿಜಾಬ್‌ ಬೆಂಬಲಿಸಿದಕ್ಕೆ ದ್ವೇಷದಿಂದ ಕೃತ್ಯ ಆರೋಪ:

ಉಡುಪಿಯಲ್ಲಿ ಹಿಜಾಬ್ ಹೋರಾಟಕ್ಕೆ ಹಿಜಾಬ್ ಪರ ವಿದ್ಯಾರ್ಥಿನಿಯರಿಗೆ ಎಸ್ ಡಿ ಪಿ ಐ ಮತ್ತು ಸಿಎಫ್ಐ ನೇರ ಬೆಂಬಲ ನೀಡಿತ್ತು.ಈ ಹಿನ್ನಲೆಯಲ್ಲಿ ಅವರನ್ನು ಟಾರ್ಗೆಟ್ ಮಾಡಲಾಗಿದೆ ಅಂತಾನೂ ಆರೋಪ ಮಾಡಲಾಗಿದೆ.

ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ.

ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು.

ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್‍ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರವು ಮಾಡುತ್ತಾರಾ? ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು. ಒಂದು ಅಂಗಡಿಗೆ ಡೋರ್ ನಂಬರ್ ಇದೆ ಇನ್ನೊಂದಕ್ಕೆ ಇಲ್ಲ. ಅಂಗಡಿ ಪರವಾನಿಗೆಗೆ ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.  

Ad Widget
1 Comment

1 Comment

  1. ಸಾಯಿನಾಥ್ ರೈ

    March 26, 2022 at 5:29 pm

    ಮಾಡೋದು ಅಕ್ರಮ ದಂಧೆ..,
    ತೆರವುಗೊಳಿಸಿದ್ರೆ ಸಂವಿಧಾನ, ಕಾನೂನು, ನಿಯಮ ಅಂತೆ.

    ಅದನ್ನ ಪ್ರೊಮೋಟ್ ಮಾಡೋಕೆ ನಿಖರ ನ್ಯೂಸ್‌ನಂತಹ ಭ್ರಷ್ಟ ಮಾಧ್ಯಮಗಳು 😡😡😡

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!