ಸ್ಥಳೀಯ
Kukke Subramanya-ಕುಕ್ಕೆ ಸುಬ್ರಹ್ಮಣ್ಯ: ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ
ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಾಗದ ಯುವಕ ಎಂದು ತಿಳಿದು ಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ: ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಾಗದ ಯುವಕ ಎಂದು ತಿಳಿದು ಬಂದಿದೆ.
ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್ ಸಮೀಪದಲ್ಲೇ ಘಟನೆ ನಡೆದಿದ್ದು, ಗಾಯಾಳು ಅಯ್ಯಪ್ಪ ಮಾಲೆಧಾರಿಯನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಕಾರ್ಯಕ್ರಮಗಳು
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.
ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.
ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.
ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ಬಾಬು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಈ ಮನವಿಯ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಪತ್ರ ಬರೆದಿದ್ದಾರೆ.
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಸುರೇಶ್ಬಾಬು ತಮ್ಮ ಪತ್ರದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.
ಸುರೇಶ್ಬಾಬು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.
ಬಿಗ್ ನ್ಯೂಸ್
Railway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್ನಲ್ಲಿ ಬರ್ತ್ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್ನಲ್ಲಿ ಬರ್ತ್ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.
2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.
ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್ಗಳಿಗೂ ಅನ್ವಯಿಸುತ್ತದೆ.
ಗುಂಪು ಬುಕಿಂಗ್ಗೆ ಬರ್ತ್ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.
ಗುಂಪು ಟಿಕೆಟ್ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
- ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
- ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
- ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
- ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
- ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
- ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
- ದುರುಪಯೋಗ ತಡೆಯಲು ಎಚ್ಚರಿಕೆ
- ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
- ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
-
ಸ್ಥಳೀಯ6 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್5 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ7 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್34 minutes agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು8 minutes agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್















