Connect with us

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮ: 800ನೇ ಕೆರೆ ಹಸ್ತಾಂತರ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

Ad Widget

Ad Widget

Ad Widget

Ad Widget

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಶ್ರೀ ಸಭಾಭವನದಲ್ಲಿ ಪುನಶ್ಚೇತನಗೊಳಿಸಿದ ೮೦೦ನೆ ಕೆರೆಯಾದ ಚೌಡನಹಳ್ಳಿ ಕೆರೆಯನ್ನು ಮಾಜಿಶಾಸಕ ಲಿಂಗೇಶ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.
ಕೆರೆಯನ್ನು ರಕ್ಷಣೆ ಮಾಡಿದರೆ ಪವಿತ್ರ ಗಂಗೆಯನ್ನು ರಕ್ಷಣೆ ಮಾಡಿದಷ್ಟೆ ಪುಣ್ಯ ಸಿಗುತ್ತದೆ. ಜಲ ಸಂರಕ್ಷಣೆ ಮತ್ತು ಸ್ವಚ್ಛಪರಿಸರ ರಕ್ಷಣಾ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು.

Ad Widget

Ad Widget <> Ad Widget

ಕೆರೆಗಳಿಗೆ ಕಸ, ಕಲ್ಮಶ, ತ್ಯಾಜ್ಯವನ್ನು ಹಾಕಬಾರದು. ಕೆರೆಗಳಿಗೆ ಕಾಯಕಲ್ಪ ನೀಡುವುದು ತಮಗೆ ಅತ್ಯಂತ ಪ್ರಿಯವಾದ ಕಾಯಕವಾಗಿದ್ದು, ಕೆರೆಯ ಸುತ್ತಲೂ ಹಣ್ಣುಹಂಪಲಿನ ಗಿಡಗಳನ್ನು ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು. ಎಲ್ಲಾ ಕೆಲಸವನ್ನು ಸರ್ಕಾರ, ಗ್ರಾಮಪಂಚಾಯಿತಿ ಮಾಡಬೇಕೆಂದು ನಿರೀಕ್ಷಿಸದೆ, ನಮ್ಮ ಊರು, ನಮ್ಮ ಕೆರೆ ಮತ್ತು ಪರಿಸರಸಂರಕ್ಷಣೆ ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ ಎಂದು ಅವರು ಹೇಳಿದರು.



Ad Widget

ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಕೆರೆಯು ಆಯಾ ಊರಿನ ಕಲ್ಪವೃಕ್ಷವಾಗಿದ್ದು ಸಕಲ ಜೀವರಾಶಿಗಳಿಗೂ ಉಪಯುಕ್ತವಾಗಿದೆ. ಪ್ರತಿ ದೇವಾಲಯದಲ್ಲಿ ಕ್ಷೇತ್ರಪಾಲ ರಕ್ಷಣೆ ಮಾಡಿದಂತೆ ಕೆರೆ ಸಮಿತಿಯವರು ಊರಿನ ಕೆರೆಯನ್ನು ಜತನದಿಂದ ಕಾಪಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

Ad Widget

Ad Widget

ಶಿವಾನಂದ ಕಳವೆ ಸಂಪನ್ಮೂಲ ವ್ಯಕ್ತಿಯಾಗಿ ಕೆರೆಗಳ ಸಂರಕ್ಷಣೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿದರು. ಕೆರೆ ಸಮಿತಿಯ ಸದಸ್ಯ ಕಿತ್ತೂರಿನ ಮಲ್ಲಿಕಾರ್ಜುನ ಹುದಲಿ ಅನಿಸಿಕೆ ವ್ಯಕ್ತಪಡಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಅನಿಲ್‌ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಎಂಜಿನಿಯರ್ ನಿಂಗರಾಜ್ ಧನ್ಯವಾದವಿತ್ತರು. ನಿರ್ದೇಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
—

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading