Connect with us

ಶಿಕ್ಷಣ

Vidyamata-ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ

Published

on



Ad Widget

Ad Widget

Ad Widget

Ad Widget

ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು : ಪುತ್ತೂರಿನ ಸರ್ಕಾರಿ ಉದ್ಯೋಗ ತರಬೇತಿ ಸಂಸ್ಥೆ ವಿದ್ಯಾಮಾತಾ ಶಿಕ್ಷಣ ಸಂಸ್ಥೆ ಬಹುದೊಡ್ಡ ಸಾಧನೆ ಮೆರೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ ಮೂಲಕ ಹಾಗೂ ಹಲವಾರು ಕಾರ್ಯಗಾರಗಳ ಮೂಲಕ ತರಬೇತಿಯನ್ನು ನೀಡಲಾಗಿತ್ತು.



Ad Widget

ಇದೀಗ ಎರಡು ಪರೀಕ್ಷೆಗಳ ಅಂಕಗಳ ಆಧಾರದಲ್ಲಿ ಅರ್ಹತಾ ಪಟ್ಟಿಯು ಬಿಡುಗಡೆಗೊಳಿಸಲಾಗಿದ್ದು, ಅಂತಿಮ ಪಟ್ಟಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಬಿಡುಗಡೆಗೊಳಿಸುವುದಾಗಿ ಸರಕಾರದ ಪ್ರಕಟಣೆಯು ತಿಳಿಸಿರುತ್ತದೆ.

Ad Widget

Ad Widget

ಅರ್ಹ ಎಲ್ಲ ಅಭ್ಯರ್ಥಿಗಳನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಅಭಿನಂದಿಸಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading