Uncategorized
ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯಜ್ಞಾನ ಬೇಕು – ಶಾಸಕ ವೇದವ್ಯಾಸ ಕಾಮತ್
ಮಂಗಳೂರು, ಮಾ. 27: ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಯುಟಿ ಖಾದರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದದ್ದಾರೆ. ಮಂಗಳೂರಿನ ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಎಂದು ಹೇಳಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ ರವರ ಗಂಭೀರ ಆರೋಪಕ್ಕೆ ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಖಡಕ್ ಉತ್ತರ ಕೊಟ್ಟಿದ್ದಾರೆ.
ಸರ್ಕಾರದ ಕೆಲಸ, ಗುತ್ತಿಗೆಗಳನ್ನ ನೀಡಲು ಅದರದ್ದೇ ಆದ ಕಾನೂನುಗಳಿವೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಇರಬೇಕು. ಮಂಗಳೂರು ಪಾಲಿಕೆಯಲ್ಲಿ 5 ಲಕ್ಷ ಮೇಲ್ಪಟ್ಟ ಎಲ್ಲಾ ಕಾಮಗಾರಿ ಇ-ಟೆಂಡರ್ ಮೂಲಕ ಆಗುತ್ತದೆ. ಮೂಡಾ ಮತ್ತು ಪಿಡಬ್ಲ್ಯುಡಿ ಎಲ್ಲಾ ಕಾಮಗಾರಿ ಇ-ಟೆಂಡರ್ ಆಗುತ್ತದೆ. ಇದರಲ್ಲಿ ಅರ್ಹತೆ ಇದ್ದವರಿಗೆ ಈ ಕಾಮಗಾರಿ ಗುತ್ತಿಗೆ ಅವರಿಗೆ ಸಿಗುತ್ತದೆ ಎಂದರು.
ನಾನು ಕೆಲವು ವರ್ಷಗಳ ಹಿಂದೆ ವಿದೇಶ ಪ್ರವಾಸ ಮಾಡಿದ್ದೆ ಆ ಸಂದರ್ಭದಲ್ಲಿ ನನ್ನ ಪ್ರವಾಸಕ್ಕೆ ಶುಭ ಕೋರಿ ಮುಸ್ಲಿಂ ಸ್ನೇಹಿತರು ಜಾಹೀರಾತು ಹಾಕಿದ್ದರು. ದುಬೈ ದೇಶದ ಎಲ್ಲಾ ಕಂಪೆನಿ ಯಾರದ್ದು? ಅಲ್ಲಿಗೆ ಉದ್ಯಮಕ್ಕೆ ನಾನು ಹೋಗಬೇಕು. ನಾನೊಬ್ಬ ರಫ್ತುಧಾರನಾಗಿ ಅಲ್ಲಿಗೆ ಹೋಗುವಾಗ ಅಲ್ಲಿನ ವ್ಯವಸ್ಥೆ ನನಗೆ ಅಗತ್ಯ. 40-50 ದೇಶಗಳಿಗೆ ರಫ್ತು ಮತ್ತು ಆಮದು ಮಾಡುವಾಗ ಅಲ್ಲಿನ ವ್ಯವಹಾರಿಕ ವ್ಯವಸ್ಥೆಯನ್ನು ನಾನು ಅನುಸರಿಸಬೇಕು. ನಾನು ಯಾರ ಜೊತೆ ವ್ಯವಹಾರ ಮಾಡಬೇಕು ಅಂತ ಗೊತ್ತಿದೆ ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಶಿಕ್ಷಣ22 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ16 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ21 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ16 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ21 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಬಿಗ್ ನ್ಯೂಸ್15 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸ್ಥಳೀಯ21 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ22 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















