ಬಿಗ್ ನ್ಯೂಸ್
ಅಂಬಿಕಾ ವಿದ್ಯಾಲಯದಲ್ಲಿ ಬೇಸಿಗೆ ಶಿಬಿರ ಪ್ರೇರಣಾ – 2022 ಕ್ಕೆ ಚಾಲನೆ | ನಮ್ಮ ನೆಲದ ಜ್ಞಾನ, ಸಂಸ್ಕøತಿ ಮಕ್ಕಳಿಗೆ ಸಿಗುವಂತಗಬೇಕು : ಡಾ.ಶ್ರೀಧರ ಎಚ್.ಜಿ
ಪುತ್ತೂರು: ಮಾ 28 : ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು
ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕøತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.
ಎಳೆಯ ವಯಸ್ಸಿನಿಂದಲೇ ಓದುವ ಸಂಸ್ಕøತಿಯನ್ನು ರೂಢಿಸಿಕೊಳ್ಳಬೇಕು. ಮನೆಯಲ್ಲಿ ನಮ್ಮದೇ ಆದ ಪುಟ್ಟ ಗ್ರಂಥಾಲಯವನ್ನು ರೂಪಿಸಿಕೊಂಡರೆ ನಮ್ಮ ಬೌದ್ಧಿಕ ಮಟ್ಟ ಬೆಳೆಯುವುದಕ್ಕೆ ಸಾಧ್ಯ. ಶಿಕ್ಷಣ, ಸಂಸ್ಕಾರ ಹಾಗೂ ಸಂಸ್ಕøತಿಗಳ ಬಗೆಗಿನ ತಿಳುವಳಿಕೆ ಪ್ರತಿಯೊಬ್ಬರಿಗೂ ಅತ್ಯಂತ ಅಗತ್ಯ. ಹಾಸ್ಟೆಲ್‍ನಲ್ಲಿನ ವಿದ್ಯಾರ್ಥಿಗಳಿಗೆ ಸಹಬಾಳ್ವೆಯ ಅನುಭವ ದೊರಕುತ್ತದೆ. ಆದರೆ ನಿತ್ಯ ಮನೆಯಿಂದ ಶಾಲೆಗೆ ಬರುವ ಮಕ್ಕಳಿಗೆ ಪ್ರೇರಣಾದಂತಹ ಶಿಬಿರಗಳಿಂದ ಸಹಬಾಳ್ವೆಯ ಕಲ್ಪನೆ ಒಡಮೂಡುತ್ತದೆ. ಅಂತೆಯೇ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಯತ್ನಗಳು ಆಗಬೇಕಾದದ್ದು ಅಗತ್ಯ ಎಂದರು.

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕøತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.
ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು16 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್22 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ21 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ22 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ22 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ21 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















