ಕಾರ್ಯಕ್ರಮಗಳು
Vidyarashmi-ಸವಣೂರು: ವಿದ್ಯಾರಶ್ಮಿ ವಿದ್ಯಾಲಯದ ಅದ್ದೂರಿ ವಾರ್ಷಿಕೋತ್ಸವ-ʻಸಂಭ್ರಮ ರಶ್ಮಿʼ
ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ʻಸಂಭ್ರಮ ರಶ್ಮಿʼ ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಡಿ. 20ರಂದು ಜರಗಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶೀಂಟೂರು ನಾರಾಯಣ ರೈಯವರ ಪ್ರತಿಮೆಗೆ ಹಾರಾರ್ಪಣೆ ನಡೆಯಿತು.
ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ʻಸಂಭ್ರಮ ರಶ್ಮಿʼ ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಡಿ. 20ರಂದು ಜರಗಿತು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಪೂರ್ವದಲ್ಲಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶೀಂಟೂರು ನಾರಾಯಣ ರೈಯವರ ಪ್ರತಿಮೆಗೆ ಹಾರಾರ್ಪಣೆ ನಡೆಯಿತು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸುತ್ತಾ 2ನೇ ಮಹಾಯುದ್ಧದ ಸಂದರ್ಭದಲ್ಲಿ ಬರ್ಮಾದಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ ತಂದೆಯವರಾದ ಶೀಂಟೂರು ನಾರಾಯಣ ರೈವರ ಆಶಯದಂತೆ ಸವಣೂರಿನಲ್ಲಿ 2001ರಲ್ಲಿ ಏಕಕಾಲದಲ್ಲಿ ಎಲ್.ಕೆ.ಜಿ, 1ನೇ ತರಗತಿ, 8ನೇ ತರಗತಿ ಮತ್ತು ಪ್ರಥಮ ಪಿಯುಸಿಯನ್ನು ಏಕಕಾಲದಲ್ಲಿ ಆರಂಭಿಸಿದೆ. ಪುತ್ತೂರು, ಮಂಗಳೂರು, ಮೈಸೂರು ಹೀಗೆ ಪಟ್ಟಣಗಳಲ್ಲಿ ಸಿಗುವಂತ ಉನ್ನತ ಶಿಕ್ಷಣ ನಮ್ಮ ಹಳ್ಳಿಯ ವಿದ್ಯಾರ್ಥಿಗಳಿಗೂ ಸಿಗಬೇಕೆನ್ನುವ ಉದ್ದೇಶದಿಂದ 22 ಎಕ್ರೆ ಜಾಗದಲ್ಲಿ ಒಂದೊಂದೇ ವಿಭಾಗಗಳನ್ನು ಸ್ಥಾಪಿಸುತ್ತಾ ಅತ್ಯಾಧುನಿಕ ಶಿಕ್ಷಣ ವ್ಯವಸ್ಥೆಗಳನ್ನು ಕಲ್ಪಿಸಿದ್ದೇನೆ. ಸುಮಾರು 380 ವಿದ್ಯಾರ್ಥಿಗಳು ನಮ್ಮ ವಿದ್ಯಾರ್ಥಿ ನಿಲಯದಲ್ಲಿದ್ದಾರೆ. ಕಲಿಕೆಗೆ ಪೂರಕ ಸಾಧನಗಳಾದ ಸ್ಮಾರ್ಟ್ ಕ್ಲಾಸ್, ಇ-ಬೋರ್ಡ್, ಶಾಲಾ ಬಸ್ ಹೀಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದರು.
ಮಕ್ಕಳನ್ನು ಮೌಲ್ಯಭರಿತರನ್ನಾಗಿ ಮಾಡಿದಾಗ ಭಾರತ ವಿಶ್ವಗುರುವಾಗುತ್ತದೆ
ಸಂಭ್ರಮ ರಶ್ಮಿಯನ್ನು ಉದ್ಘಾಟಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಹೆಚ್ ಮಾಧವ ಭಟ್ ಅತಿಥಿಯಾಗಿ ಭಾಗವಹಿಸಿ ಪೇಟೆ ಪಟ್ಟಣದಲ್ಲಿರುವ ಸಿಗುವಂತ ಉನ್ನತ ಮಟ್ಟದ ಶಿಕ್ಷಣ ಈ ಹಳ್ಳಿಯ ವಿದ್ಯಾರ್ಥಿಗಳಿಗೆ ದೊರೆಯುವಂತಾಗಲು ಕಾರಣಕರ್ತರಾದ ಶೀಂಟೂರು ನಾರಾಯಣ ರೈಯವರನ್ನು ಇವತ್ತು ನಾವು ಸ್ಮರಿಸಬೇಕು. ಅವರ ಕನಸ್ಸನ್ನು ನನಸಾಗಿಸಿ ಶಿಕ್ಷಣ ಸಂಸ್ಥೆಗಳಿಗೆ ಆಧುನಿಕ ಸ್ಪರ್ಶ ನೀಡಿದವರು ಸೀತಾರಾಮ ರೈಯವರು. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆ ಅತ್ಯಂತ ಸುರಕ್ಷಿತವಾಗಿರುವುದರಿಂದ ಪರವೂರಿನಿಂದಲೂ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ನಮ್ಮ ಮಕ್ಕಳನ್ನು ಕೌಶಲ್ಯಭರಿತರಾಗಿ, ಮೌಲ್ಯಭರಿತರಾಗಿ ಮಾಡಿದಾಗ ನಮ್ಮ ದೇಶ ವಿಶ್ವಗುರುವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಹಾಯಕ ಪೊಲೀಸ್ ಕಮಿಷನರ್ ಶ್ರೀಮತಿ ನಝ್ಮಾ ಫರೂಕಿ ಮಾತನಾಡಿ ಎಲ್ಲಾ ಸಾಧನೆಗಳಲ್ಲಿ ಶ್ರೇಷ್ಠ ಸಾಧನೆ ಅಂದರೆ ಅದು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವಂತದ್ದು. ಅಂತಹ ಸಾಧನೆಯನ್ನು ಇವತ್ತು ಸೀತಾರಾಮ ರೈಯವರು ಮಾಡಿ ತೋರಿಸಿದ್ದಾರೆ ಎಂದರು.
ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಸವಣೂರು ಸುಂದರ ರೈ, ಶ್ರೀಮತಿ ರಶ್ಮಿ ಅಶ್ವಿನ್ ಶೆಟ್ಟಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯಿ, ವಿದ್ಯಾರ್ಥಿ ನಾಯಕಿ ಕು. ಯಶಸ್ವಿ ರೈ ಆಸೀನರಾಗಿದ್ದರು. ಸಭಾಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ಯಾರು ವಿದ್ಯೆಯನ್ನು ಕಲಿಯುತ್ತಾರೋ ಅಂತವರಿಗೆ ಹಣ ತಾನಾಗಿಯೇ ಬರುತ್ತದೆ. ಸರಸ್ವತಿಯನ್ನು ಪೂಜಿಸಿದರೆ ಲಕ್ಷ್ಮಿ ತಾನಾಗಿಯೇ ಒಲಿದುಬರುತ್ತಾಳೆ. ಪೋಷಕರು ನಿಮ್ಮ ಮಕ್ಕಳು ಯಾಕೆ ಕಲಿಯಬೇಕೆಂದು ಹೇಳಿ. ಕಲಿಸುವ ಕೆಲಸ ನಾವು ಮಾಡುತ್ತೇವೆ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರಶ್ಮಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಕೇವಳ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಆಳ್ವ ಆಯಾ ಸಂಸ್ಥೆಗಳ ವರದಿ ವಾಚಿಸಿದರು. ಕು. ರಶ್ಮಿತಾ ಮತ್ತು ತಂಡ ಪ್ರಾರ್ಥಿಸಿದರು. ಕು. ವಿದೀಶ ಮುನ್ನುಡಿ ಹೇಳಿದರು. ಕು. ನಿಧಿ ಮತ್ತು ಕು. ಅಭಿಜ್ಞಾ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಶ್ರೀಲೇಖ ಶೆಟ್ಟಿ ಎಂ ಕ್ರೀಡಾ ಸಾಧಕರ ಪಟ್ಟಿ ವಾಚಿಸಿದರು. ಉಪನ್ಯಾಸಕರಾದ ಮುರಲೀಧರ ಕೆ.ಎಲ್ ಶೈಕ್ಷಣಿಕ ಸಾಧಕರ ಪಟ್ಟಿ ವಾಚಿಸಿದರು.
ವಿದ್ಯಾರ್ಥಿಗಳಾದ ಫಾತಿಮತ್ ಸಬೀಬಾ ಮತ್ತು ಪ್ರಾಪ್ತಿ ಪಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕಿ ಕೆ. ಯಶಸ್ವಿ ರೈ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಹಕರಿಸಿದರು. ಪೋಷಕರು, ಸಂಸ್ಥೆಯ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಿ. 14ರಂದು ಕ್ರೀಡಾರಶ್ಮಿ, ಡಿ. 19ರಂದು ಸನ್ಮಾನರಶ್ಮಿ ಕಾರ್ಯಕ್ರಮ ನಡೆದಿತ್ತು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
Uncategorized18 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized21 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized20 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized21 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized22 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ4 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized20 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್4 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















