ಮಂಗಳೂರು
Mangalore-ಮಂಗಳೂರು : ಡಿ.21ರಿಂದ ಜ.19ರ ವರೆಗೆ ಕದ್ರಿ ಪಾರ್ಕಿನಲ್ಲಿ ಕರಾವಳಿ ಉತ್ಸವ; ರೋಬೋಟಿಕ್ ಚಿಟ್ಟೆ ಪ್ರದರ್ಶನ; ಹೆಲಿಕಾಫ್ಟರ್ ರೈಡ್
ಮಂಗಳೂರು : ಇಲ್ಲಿನ ಕದ್ರಿ ಪಾರ್ಕಿನಲ್ಲಿ ಕೆಲವು ವರ್ಷಗಳ ಬಳಿಕ ಪುನ: ಆರಂಭಗೊಂಡಿರುವ ಕರಾವಳಿ ಉತ್ಸವ ಎರಡೇ ದಿನಗಳಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕರಾವಳಿ ಉತ್ಸವ ಡಿ. 21ರಿಂದ ಆರಂಭಗೊಂಡಿದ್ದು, ಆಕರ್ಷಕ ಮೆರವಣಿಗೆ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡಿವೆ.
ಮಂಗಳೂರು : ಇಲ್ಲಿನ ಕದ್ರಿ ಪಾರ್ಕಿನಲ್ಲಿ ಕೆಲವು ವರ್ಷಗಳ ಬಳಿಕ ಪುನ: ಆರಂಭಗೊಂಡಿರುವ ಕರಾವಳಿ ಉತ್ಸವ ಎರಡೇ ದಿನಗಳಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಜಿಲ್ಲಾಡಳಿತ ಉತ್ತಮ ವ್ಯವಸ್ಥೆಯನ್ನು ಈ ಬಾರಿ ಮಾಡಿದ್ದು, ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಸಂಘಟಿಸಿರುವುದಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ.
ಕರಾವಳಿ ಉತ್ಸವ ಡಿ. 21ರಿಂದ ಆರಂಭಗೊಂಡಿದ್ದು, ಆಕರ್ಷಕ ಮೆರವಣಿಗೆ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡಿವೆ.
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಡಿ.21ರಿಂದ ಜನವರಿ 19ರವರೆಗೆ ನಡೆಯಲಿದೆ. ಪ್ರತೀ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಝಲಕ್ ಇರಲಿದೆ. ಕರಾವಳಿ ಕರ್ನಾಟಕದ ಕಲೆ, ಕರಕುಶಲ ಮತ್ತು ಖಾದ್ಯಗಳ ಪ್ರದರ್ಶನ, ಸಾಂಸ್ಕೃತಿಕ ವೈವಿಧ್ಯಗಳ ಜೊತೆಗೆ ಮನೋರಂಜನೆಯ ಭರಪೂರವಿದೆ.
ಡಿ.29ರವರೆಗೆ ಮೇರಿಹಿಲ್ ಹೆಲಿಪ್ಯಾಡಿನಲ್ಲಿ ಹೆಲಿಕಾಫ್ಟರ್ ರೈಡ್ ಆರಂಭಿಸಲಾಗಿದ್ದು, ಇದಕ್ಕೂ ಬಹಳಷ್ಟು ಜನ ಆಗಮಿಸುತ್ತಿದ್ದಾರೆ.
ಡಿ.22ರಿಂದ ಜ.19ರವರೆ ಕದ್ರಿ ಪಾರ್ಕಿನಲ್ಲಿ ರೋಬೋಟಿಕ್ ಚಿಟ್ಟೆ ಪ್ರದರ್ಶನವಿದ್ದು, ಈ ಪ್ರದರ್ಶನವನ್ನು ವೀಕ್ಷಣೆ ಮಾಡಲು ಬಹಳಷ್ಟು ಜನ ಆಗಮಿಸುತ್ತಿದ್ದಾರೆ. ಶನಿವಾರ ಮತ್ತು ಭಾನುವಾರ ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಕಂಡು ಬಂದಿದ್ದು, ಈ ಪ್ರದರ್ಶನ ಸಂಜೆ 4 ರಿಂದ ರಾತ್ರಿ 9 ರವರೆಗೆ ಮಾತ್ರ ಇರಲಿದೆ.
ಅಲ್ಲದೆ ಇಂದು ವಸ್ತುಪ್ರದರ್ಶನ ವೇದಿಕೆಯಲ್ಲಿ ನೃತ್ಯರೂಪಕವಿರಲಿದೆ. ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಇವರಿಂದ ಕಾರ್ಯಕ್ರಮವಿದೆ. ನಾಳೆ ಸಂಜೆ ದೇವದಾಸ್ ಕಾಪಿಕಾಡ್ ನಿರ್ದೇನದ ತುಳುಹಾಸ್ಯ ನಾಟಕ ʻಎರ್ಲಾ ಗ್ಯಾರಂಟಿ ಅತ್ತ್ʼ ಎನ್ನುವ ನಾಟಕ ವಸ್ತು ಪ್ರದರ್ಶನ ವೇದಿಕೆಯಲ್ಲಿ ಪ್ರದರ್ಶಿಸಲ್ಪಡಲಿದೆ.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
-
ಬಿಗ್ ನ್ಯೂಸ್19 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು22 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ23 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized23 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ24 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ22 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್23 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
-
ಅಪರಾಧ24 hours agoMangalore-ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


















