ಸ್ಥಳೀಯ
Gadiyara school-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆ ಕೆದಿಲ (ಗಡಿಯಾರ ) ಇಲ್ಲಿನ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ 7 ಡೆಸ್ಕ್ ಮತ್ತು 7 ಬೆಂಚನ್ನು ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆ ಕೆದಿಲ (ಗಡಿಯಾರ ) ಇಲ್ಲಿನ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ 7 ಡೆಸ್ಕ್ ಮತ್ತು 7 ಬೆಂಚನ್ನು ವಿತರಿಸಲಾಯಿತು.
ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ಡೆಸ್ಕ್ ಮತ್ತು ಬೆಂಚನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪುಟ್ಟ ರಂಗನಾಥ, ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸುಂದರ, ಸೇವಾ ಪ್ರತಿನಿಧಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲದ ಸದಸ್ಯರಾದ ಜಗದೀಶ, ಗಿರೀಶ ಉಪಸ್ಥಿತರಿದ್ದರು.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ನಿಧನ ವಾರ್ತೆ
Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
-
ನಿಧನ ವಾರ್ತೆ11 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು8 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ11 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ನಿಧನ ವಾರ್ತೆ6 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಬಿಗ್ ನ್ಯೂಸ್5 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















