ಬಿಗ್ ನ್ಯೂಸ್
ಸುಳ್ಯ : ಮಾರಕಾಸ್ತ್ರಗಳೊಂದಿಗೆ ನುಗ್ಗಿ ಮನೆ ಮಂದಿಯನ್ನು ಬೆದರಿಸಿ ನಗ ನಗದು ದರೋಡೆಗೈದ ಪ್ರಕರಣ – ಅಂತರಾಜ್ಯ ಕಳ್ಳರ ಗ್ಯಾಂಗಿನ ನಾಲ್ವರ ಬಂಧನ | 10 ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು
ಮಾ 23 : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಸಂಪಾಜೆ ಬಳಿ ಹತ್ತು ದಿನಗಳ ಹಿಂದೆ ರಾತ್ರಿ ವೇಳೆ ಮನೆಯೊಂದಕ್ಕೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅಲ್ಲಿದವರನ್ನು ಬೆದರಿಸಿ ಚಿನ್ನ ಹಾಗೂ ನಗದನ್ನು ದೋಚಿದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಜ್ಯೋತಿಷ್ಯ ಹಾಗೂ ಪೌರೋಹಿತ್ಯ ವೃತ್ತಿ ಮಾಡುವ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಚಟ್ಟೆಕಲ್ಲು ನಿವಾಸಿ ಅಂಬರೀಶ್ ಎಂಬವರ ಮನೆಗೆ ಮಾ.21 ರಂದು ರಾತ್ರಿ ಮಾರಕಾಯುದ್ದಗಳೊಂದಿಗೆ ಮುಸುಕುಧಾರಿ ದರೋಡೆಕೋರರ ತಂಡ ನುಗ್ಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ 4 ಮಂದಿ ದರೋಡೆಕೋರರರನ್ನು ಬಂಧಿಸಿದ ಸುಳ್ಯ ಪೊಲೀಸರ ತಂಡ ಆರೋಪಿಗಳ ಬಳಿಯಿಂದ ಒಂದು ಲಕ್ಷ 20 ಸಾವಿರ ರೂಪಾಯಿ ನಗದು ಹಾಗು ಕೃತ್ಯಕ್ಕೆ ಬಳಸಿದ ವಾಹನ, ಮೊಬೈಲ್ ಸಹಿತ ಇತರ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ . ಬಂಧಿತ ಆರೋಪಿಗಳ ಪೈಕಿ ಇಬ್ಬರು ತಮಿಳುನಾಡು ರಾಜ್ಯದವರಾದರೇ , ಇನ್ನಿಬ್ಬರು ಕರ್ನಾಟಕದ ಹಾಸನ ಜಿಲ್ಲೆಗೆ ಸೇರಿದವರು.
ತಮಿಳು ನಾಡಿನ ಕೊಯಮತ್ತೂರು ಜಿಲ್ಲೆಯ ಅಣ್ಣೂರು ತಾಲೂಕಿನ .ಕಾರ್ತಿಕ್ ಟಿ. ಪ್ರಾಯ: (38 ವರ್ಷ ), ಹಾಸನದ ಚಿಕ್ಕಬುವನಹಳ್ಳಿ ಹೋಬಳಿಯ ಮಧುಕುಮಾರ್ (33 ವರ್ಷ,) ಹಾಸನದ ವಿದ್ಯಾನಗರ ನಿವಾಸಿ ದೀಕ್ಷಿತ್ ಕೆ.ಎನ್ (26 ವರ್ಷ) ಹಾಗೂ ತಮಿಳುನಾಡಿನ ಧರ್ಮಾಪುರಿ ಜಿಲ್ಲೆಯ ಬಿ. ನರಸಿಂಹನ್, ಪ್ರಾಯ: 40 ವರ್ಷ ಬಂಧಿತರು.

ಏನಿದು ಪ್ರಕರಣ ?
ಭಾನುವಾರ ಮಾ 21 ರಂದು ಸಂಜೆ ಅಂಬರೀಶ್ ಭಟ್ ಪುತ್ರ ಶ್ರೀವತ್ಸ ಜೊತೆ ಮದೆನಾಡು ಗ್ರಾಮಕ್ಕೆ ಕೆಲಸದ ನಿಮಿತ್ತ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಅಂಬರೀಶ್ ಭಟ್ ಪತ್ನಿ ಪುಷ್ಪಾ, ಸೊಸೆ ಆಶಾ, ತಂದೆ ಗೋವಿಂದ ಭಟ್, ತಾಯಿ ಸರಸ್ವತಿ ಮತ್ತು ಇಬ್ಬರು ಮೊಮ್ಮಕ್ಕಳು ಇದ್ದರು.
ದರೋಡೆ ಹೇಗಾಯ್ತು?
ಅಂದು ರಾತ್ರಿ 8:30ರ ವೇಳೆಗೆ ಹೊರಗಡೆ ನಾಯಿ ಬೊಗಳುವ ಸದ್ದು ಕೇಳಿಸಿದ್ದು ನೋಡಲು ಆಶಾರವರು ಚಾವಡಿಯ ಬಳಿ ಬಂದಿದ್ದಾರೆ. ಈ ವೇಳೆ ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಗೂ ಮಾರಕಾಸ್ತ್ರಗಳನ್ನು ಹಿಡಿದಿದ್ದ 3 ಮಂದಿ ದರೋಡೆಕೋರರನ್ನು ಕಂಡು ಗಾಬರಿಯಾಗಿದ್ದಾರೆ. ದರೋಡೆಕೋರರಲ್ಲಿ ಒಬ್ಬಾತ ನೇರವಾಗಿ ಆಶಾ ಅವರ ಬಳಿ ಬಂದು ಮಾಂಗಲ್ಯ ಸರವನ್ನು ಹಿಡಿದು ಎಳೆದಿದ್ದಾನೆ.
ಈ ವೇಳೆ ಏನು ನಡೆಯುತ್ತಿದೆ ಎಂದು ನೋಡಲು ಗೋವಿಂದ ಭಟ್, ಸರಸ್ವತಿ ಬಂದಿದ್ದಾರೆ. ಈ ವೇಳೆ ಸರಸ್ವತಿ ಅವರನ್ನು ಬೀಳಿಸಿದ ದರೋಡೆಕೋರ ಮಾರಕಾಸ್ತ್ರವನ್ನು ಕತ್ತಿನ ಬಳಿ ಹಿಡಿದು ಹಣ ಎಲ್ಲಿ ಎಂದು ಬೆದರಿಸಿ ಕೇಳಿದ್ದಾನೆ.
ಗಾಬರಿಯಾದ ಮನೆ ಸದಸ್ಯರು ಹಣ, ಚಿನ್ನ ಇರುವ ಜಾಗವನ್ನು ತೋರಿಸಿದ್ದಾರೆ. ಬಳಿಕ ಗೋವಿಂದ ಭಟ್ ಅವರ ಬಾಯಿಗೆ ಪ್ಲಾಸ್ಟರ್ ಹಚ್ಚಿ, ಮನೆಯಲ್ಲಿದ್ದ ಎಲ್ಲಾ ಸದಸ್ಯರನ್ನೂ ಊಟದ ಕೋಣೆಯಲ್ಲಿ ಕೂರಿಸಿ, ಕೂಡಿ ಹಾಕಿದ್ದಾರೆ. ನಂತರ ಅಂಬರೀಶ್ ಭಟ್ ಪತ್ನಿ ಪುಷ್ಪಾ ಕೈಯಿಂದಲೇ ಬಲವಂತವಾಗಿ ಗೋಡ್ರೇಜ್ ಬಾಗಿಲು ತೆಗೆಸಿದ್ದಾರೆ. ಈ ವೇಳೆ ಗೋಡ್ರೇಜ್ನಲ್ಲಿದ್ದ 3 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನ, 1.50 ಲಕ್ಷ ರೂ.ನಗದು, ಒಂದು ಸ್ಯಾಮ್ಸಂಗ್ ಮೊಬೈಲ್ ಅನ್ನು ದೋಚಿದ್ದರು
ಮೂವರು ದರೋಡೆಕೋರು ಒಳಗಡೆ ಬಂದಿದ್ದರೇ, ಉಳಿದ ಮೂವರು ಹೊರಗಡೆ ಕಾವಲು ನಿಂತಿದ್ದರು. ದರೋಡೆಯ ಬಳಿಕ ಹೊರಗಡೆ ಇದ್ದವರು ದರೋಡೆಕೋರರ ಕೈಯಿಂದ ಹಣ, ಚಿನ್ನದ ಗಂಟನ್ನು ಪಡೆದಿದ್ದಾರೆ. ಕೊನೆಗೆ ಪರಾರಿಯಾಗುವುದಕ್ಕೂ ಮೊದಲು ಯಾರಿಗೂ ಹೇಳದಂತೆ ಮನೆಯ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ.
ಈ ಘಟನೆ ರಾತ್ರಿ ಸುಮಾರು 8:30 ರಿಂದ 9 ಗಂಟೆಯ ವೇಳೆ ನಡೆದಿದೆ. ದರೋಡೆಕೋರರು ಅಪರಿಚಿತರಾಗಿದ್ದು, ತಮಿಳು ಭಾಷೆಯಲ್ಲಿ ಹಾಗೂ ಸನ್ನೆಗಳ ಮೂಲಕ ಸಂವಹನ ಮಾಡಿ ಕೃತ್ಯ ಎಸಗಿದ್ದಾರೆ. ದರೋಡೆಕೋರರಲ್ಲಿ ಒಬ್ಬ ಮಾತ್ರ ನಲ್ವತ್ತರಿಂದ ಐವತ್ತು ವರ್ಷದ ವ್ಯಕ್ತಿಯಾಗಿದ್ದು ಉಳಿದ ಐದು ಜನರು 20ರಿಂದ 30 ವರ್ಷದೊಳಗಿನವರಾಗಿದ್ದರು. ಅವರೆಲ್ಲರೂ ಪರಸ್ಪರ ತಮಿಳಿನಲ್ಲೇ ಮಾತನಾಡುತ್ತಿದ್ದರು ಎಂದು ಆಶಾ ಭಟ್ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.
ತನಿಖೆ ಪ್ರಗತಿಯಲ್ಲಿ
ಬಂಧಿತರಿಂದ ದರೋಡೆಗೈದ ನಗದಿನ ಪೈಕಿ ರೂಪಾಯಿ 1 ,20000 ಮತ್ತು ಆರೋಪಿಗಳು ಕೃತ್ಯದ ಸಮಯ ಉಪಯೋಗಿಸಿದ ವಾಹನ ಮತ್ತು 5 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶ ಪಡೆಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು ಉಳಿದ ಆರೋಪಿಗಳ ಪತ್ತೆ ಮತ್ತು ದರೋಡೆಯಾದ ಚಿನ್ನಾಭರಣಗಳು ಮತ್ತು ಉಳಿದ ನಗದು ಪತ್ತೆಗೆ ಬಾಕಿ ಇರುತ್ತದೆ ಎಂದು ದ.ಕ. ಎಸ್ ಪಿ ಸೋನಾವನ ಋಷಿಕೇಶ ಭಗವಾನ್ ಮಾಹಿತಿ ನೀಡಿದ್ದಾರೆ
ಪೊಲೀಸ್ ಅಧೀಕ್ಷಕರಾದ ಶ್ರೀ ಸೋನಾವನ ಋಷಿಕೇಶ ಭಗವಾನ್ಐಪಿಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕುಮಾರ್ ಚಂದ್ರ ರವರ ಸೂಚನೆಯಂತ ಪೊಲೀಸ್ ಉಪಾಧೀಕ್ಷಕರಾದ ಕು. ಗಾನಾ.ಪಿ.ಕುಮಾರ್ ರವರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು, ಸುಳ್ಯ ನವೀನ್ ಚಂದ್ರ ಜೋಗಿ ಯವರ ಮಾರ್ಗದರ್ಶನದಲ್ಲಿ ಸುಳ್ಯ ಠಾಣಾ ಪೊಲೀಸ್‌ಉಪನಿರೀಕ್ಷಕರಾದ ಶ್ರೀ ದಿಲೀಫ್ ಆರ್, ರತ್ನಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಪಿ ಎಸ್ ಐ ಶ್ರೀಹರೀಶ್ ಎಂ ಆರ್, ಬೆಳ್ಳಾರೆ ಠಾಣಾ ಎ ಎಸ್ ಐ ಭಾಸ್ಕರ್ ಹೆಡ್ ಕಾನ್ಸ್ ಟೇಬಲ್ ಗಳಾದ ಜಯರಾಮ, ಉದಯ್ ಗೌಡ, ಪಿ, ದೇವರಾಜ್, ಸಿ ಪಿ ಸಿ ವಿಜಯ್ ಕುಮಾರ್ , ಅನಿಲ್ ,ಮಹದೇವ ಪ್ರಸಾದ್ ರವರನ್ನು ಒಳಗೊಂಡ ಪೊಲೀಸರ ತಂಡ ಆರೋಪಿಗಳನ್ನು ಬಂದಿಸಿದೆ
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ಅಪರಾಧ16 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ22 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ21 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ16 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ21 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಬಿಗ್ ನ್ಯೂಸ್15 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸ್ಥಳೀಯ21 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ22 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















