Connect with us

ಶಿಕ್ಷಣ

Vikasa Vaibhava-ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷತೆಗಳ ಗುಚ್ಚವಾಗಿ ಸಂಪನ್ನಗೊಂಡ ವಿಕಾಸ ವೈಭವ-2024

Published

on



Ad Widget

Ad Widget

Ad Widget

Ad Widget

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ,ಮಾಣಿ ಇಲ್ಲಿಯ ಶಾಲಾ ವಾರ್ಷಿಕೋತ್ಸವ ವಿಕಾಸ ವೈಭವ – 2024 ಡಿಸೆಂಬರ್ 21 ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು.

Ad Widget

Ad Widget

Ad Widget

Ad Widget

ವಿಟ್ಲ : ಡಿ. 24 : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿಯ ಶಾಲಾ ವಾರ್ಷಿಕೋತ್ಸವ ವಿಕಾಸ ವೈಭವ – 2024 ಡಿಸೆಂಬರ್ 21 ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು.

Ad Widget

Ad Widget

Ad Widget alt="Ad Widget"/>

Ad Widget

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Ad Widget

Ad Widget <> Ad Widget

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ | ಎಂ . ಮೋಹನ್ ಆಳ್ವ ನೂತನ ಬಾಲವಿಕಾಸ ವಸತಿ ನಿಲಯವನ್ನು ಉದ್ಘಾಟಿಸಿ , ಮಾತನಾಡಿ ” ಮಾಣಿಯಂತಹ ಗ್ರಾಮೀಣ ಪ್ರದೇಶದಲ್ಲಿ ಬಾಲವಿಕಾಸವೆಂಬ ಸುಸಜ್ಜಿತವಾದ ವಿದ್ಯಾಸಂಸ್ಥೆಯನ್ನು ಕಟ್ಟಿ, ಇಲ್ಲಿನ ಮಕ್ಕಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸೇವಾ ಮನೋಭಾವ ಬಾಲವಿಕಾಸ ಆಡಳಿತ ಮಂಡಳಿಯಲ್ಲಿದೆ. ಇಡೀ ವರ್ಷ ನಿರಂತರವಾಗಿ ಶಾಲಾ ಮಕ್ಕಳನ್ನು ಪಠ್ಯ ಹಾಗೂ ಕ್ರೀಡೆ, ವಿಜ್ಞಾನ, ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದ ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅವರನ್ನು ಸದೃಢ ಪ್ರಜೆಗಳನ್ನಾಗಿ ಮಾಡುವಲ್ಲಿ ಈ ಸಂಸ್ಥೆ ಬಹಳಷ್ಟು ಶ್ರಮಪಡುತ್ತಿದೆ ” ಎಂದು ಹೇಳಿ ಬಾಲವಿಕಾಸ ಆಡಳಿತ ಮಂಡಳಿಯ ತ್ಯಾಗ ಮನೋಭಾವವನ್ನು ಶ್ಲಾಘಿಸಿದರು.



Ad Widget

ಇನ್ನೋರ್ವ ಮುಖ್ಯ ಅತಿಥಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯ್ಸ್ ಬಾಲವಿಕಾಸ ವೆಬ್ ಸೈಟ್ ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ” ಕರಾವಳಿ ಕರ್ನಾಟಕದ ಅತ್ಯಂತ ಸುಸಜ್ಜಿತ ಡಿಜಿಟಲ್ ಕ್ಯಾಂಪಸ್‌ ಹೊಂದಿದ ಏಕೈಕ ಸಂಸ್ಥೆ ಬಾಲವಿಕಾಸ. ಇದು ಮಾದರಿ ಶಿಕ್ಷಣ ಸಂಸ್ಥೆಯಲ್ಲೊಂದಾಗಿದೆ . BALAVIKAS ಪದದಲ್ಲಿ KAS -IAS ಇದೆ. ಹೆಸರಿಗೆ ತಕ್ಕಂತೆ ಪ್ರಗತಿಯ ಪಥದತ್ತ ಸಾಗುತ್ತಿದೆ ” ಎಂದರು.

Ad Widget

Ad Widget

ಬಾಲವಿಕಾಸ ಶಾಲೆಯ ಆಡಳಿತ ಮಂಡಳಿಯು ಕಳೆದ ಶೈಕ್ಷಣಿಕ ವರ್ಷದಿಂದ ಮಾಣಿ ಪರಿಸರದಲ್ಲಿರುವ ಪ್ರತಿಭೆಗಳನ್ನು , ಸಾಧಕರನ್ನು ಗುರುತಿಸಿ ಅವರಿಗೆ ವಿಕಾಸ ವೈಭವ ವೇದಿಕೆಯಲ್ಲಿ ಬಾಲವಿಕಾಸರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವ ಸಂಪ್ರದಾಯವನ್ನು ಆರಂಭಿಸಿದ್ದರು. ಈ ವರ್ಷ ಬಾಲವಿಕಾಸರತ್ನ ಪ್ರಶಸ್ತಿಯನ್ನು ಬಾಲವಿಕಾಸದ ಹಿರಿಯ ವಿದ್ಯಾರ್ಥಿಯಾದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲ್ಲಡ್ಕ ಮ್ಯೂಸಿಯಂ ಸ್ಥಾಪಕ ಮೊಹಮ್ಮದ್ ಯಾಸೀರ್ ರವರಿಗೆ ನೀಡಿ ಸನ್ಮಾನಿಸಲಾಯಿತು. ಇದರೊಂದಿಗೆ ಅವರ ಸಾಧನೆಯ ಹಾದಿಯ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು . ಕಲ್ಲಡ್ಕ ಮ್ಯೂಸಿಯಂನ ಸ್ಥಾಪನೆಗೆ ಬಾಲವಿಕಾಸ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳುತ್ತಿದ್ದ ಪಠ್ಯೇತರ ಚಟುವಟಿಕೆಗಳು ಪ್ರೇರಣೆಯಾದ ರೀತಿಯನ್ನು ಯಾಸೀರ್ ತಮ್ಮ ಮಾತಿನಲ್ಲಿ ಮೆಲುಕು ಹಾಕುವ ಮೂಲಕ ಭಾವನಾತ್ಮಕವಾಗಿ ಸಂಸ್ಥೆಯ ಈಗಿನ ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾದರು .

ಈ ಸಂದರ್ಭದಲ್ಲಿ ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿ ವಿಜೇತ ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸುಪ್ರಿಯಾ ಡಿ ಯವರನ್ನು ಗೌರವಿಸಲಾಯಿತು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಲೆ, ಕ್ರೀಡೆ, ವಿಜ್ಞಾನ ಹಾಗೂ ಸ್ಕೌಟ್ & ಗೈಡ್ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮದ ಆರಂಭದಲ್ಲಿ ಸಾಕ್ಷ್ಯ ಚಿತ್ರವಾಗಿ ದಾಖಲಿಸಿದ ಶಾಲೆಯ ಶೈಕ್ಷಣಿಕ ವರ್ಷದ ವಾರ್ಷಿಕ ವರದಿ ವಿಕಾಸ ವಿಹಂಗಮ-2024 ಅನಾವರಣವಾಯಿತು.

ಈ ಸಭಾ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಉಪಾಧ್ಯಕ್ಷರಾದ ಯತಿರಾಜ್ ಕೆ ಎನ್, ಕಾರ್ಯದರ್ಶಿಯಾದ ಮಹೇಶ್ ಶೆಟ್ಟಿ ಜೆ , ಸದಸ್ಯರಾದ ಸುಭಾಷಿಣಿ ಎ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ ಸ್ವಾಗತಿಸಿ, ಶಾಲಾ ಸಂಸತ್ತಿನ ಪ್ರಧಾನ ಮಂತ್ರಿ ಕು. ಸಾಕ್ಷಿ ವಂದಿಸಿದರು. ಸಹಶಿಕ್ಷಕಿಯರಾದ ಯಜ್ಞೇಶ್ವರಿ ಎನ್ ಸನ್ಮಾನ ಪತ್ರ ಹಾಗೂ ಶಿಕ್ಷಾ ಎಸ್ ಶೆಟ್ಟಿ ಬಹುಮಾನ ವಿಜೇತರ ಹೆಸರುಗಳನ್ನು ವಾಚಿಸಿದರು. ಶೋಭಾ ಎಂ ಶೆಟ್ಟಿ ಹಾಗೂ ಲೀಲಾ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಮತ್ತು ಅನಂತರದಲ್ಲಿ ಇಲ್ಲಿನ ವಿದ್ಯಾರ್ಥಿಗಳು ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯಲ್ಲಿ ಪ್ರದರ್ಶಿಸಿದ ವಿವಿಧ ರೀತಿಯ ಸುಂದರ ಸಾಂಸ್ಕೃತಿಕ ಕಾರ್ಯಕ್ರಮಗಳು ವೀಕ್ಷಕರ ಮನಸೂರೆಗೊಳ್ಳುವ ಮೂಲಕ ಹಲವಾರು ವಿಶೇಷತೆಗಳೊಂದಿಗೆ ವಿಕಾಸ ವೈಭವ – 2024 ಯಶಸ್ವಿಯಾಗಿ ಸಂಪನ್ನಗೊಂಡಿತು.

Ad Widget

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading