ಮೈಸೂರು
Siddaramaiah-ಕರ್ನಾಟಕದ ಇತಿಹಾಸದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿ ಇನ್ನೊಬ್ಬರಿಗೆ ಎರಡನೇ ಬಾರಿ ಪೂರ್ಣ ಬಹುಮತ ಕೊಟ್ಟಿದ್ದಾರಾ ..? ಸಿದ್ದರಾಮಯ್ಯ ಜನಪ್ರಿಯ ನಾಯಕ..! ಅಚ್ಚರಿಯ ಹೇಳಿಕೆ ನೀಡಿ ಸಿಎಂ ಹಾಡಿ ಹೊಗಳಿದ ಪ್ರತಾಪ್ ಸಿಂಹ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 40 ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯರವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಹಾಡಿಹೊಗಳಿದ್ದಾರೆ.
ʼಸಿದ್ದರಾಮಯ್ಯ ಆರೋಗ್ಯ ರಸ್ತೆʼ ಎಂದು ಪಾಲಿಕೆ ಮೈಸೂರಿನ ಕೆಆರ್ ಎಸ್ ರಸ್ತೆಗೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಾಪ್ ಸಿಂಹ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧಿಸುತ್ತೇನೆ. ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಹೇಳಿದರು.
ಜಯದೇವ ಆಸ್ಪತ್ರೆ ಕಟ್ಟಡ, ಸೂಪರ್ ಸ್ಪೆಷಲಾಟಿ ಆಸ್ಪತ್ರೆ, ರಾಜಪಥ ಇವನ್ನೆಲ್ಲಾ ಸಿದ್ದರಾಮಯ್ಯನವರು ಮಾಡಿಸಿದ್ದಾರೆ. 40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ. ಈ ವಿಚಾರದಲ್ಲಿ ತಕಾರರು ಎತ್ತಿದರೆ ಮೊಸರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದು ಪ್ರತಾಪ್‌ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಧಕರು ಬರೀ ಬಿಜೆಪಿಯಲ್ಲಿ ಮಾತ್ರ ಇಲ್ಲ. ಎಲ್ಲಾ ಪಕ್ಷದಲ್ಲೂ ಇದ್ದಾರೆ. ಸಿದ್ದರಾಮಯ್ಯ ಅವರ ಹೆಸರು ಇಡುವ ವಿಚಾರದಲ್ಲಿ ಪಕ್ಷಬೇಧ ಮಾಡಬೇಡಿ. ಸಣ್ಣತನ ತೋರಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಮಹಾರಾಜರ ಹೆಸರು ಎಲ್ಲಾ ಕಡೆ ಇಟ್ಟಿದ್ದೇವೆ. ಮಹಾರಾಜರ ನಂತರವೂ ಅನೇಕ ಸಾಧಕರು ಮೈಸೂರಿನಲ್ಲಿ ಬಂದಿದ್ದಾರೆ. ವಿಶ್ವೇಶ್ವರಯ್ಯ ಅವರಂಥ ಇಂಜಿನಿಯರ್ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ? ಮಿರ್ಜಾ ಇಸ್ಮಾಯಿಲ್ ಇರದಿದ್ದರೆ ಬೆಂಗಳೂರಿಗೆ ವಿದ್ಯುತ್ ತೆಗೆದುಕೊಂಡು ಹೋಗಲು ಆಗುತ್ತಿತ್ತಾ ಎಂದು ಪ್ರಶ್ನಿಸಿ ಒಳ್ಳೆ ಒಳ್ಳೆಯ ದಿವಾನರು ಇದ್ದ ಕಾರಣ ಒಳ್ಳೆ ಅಭಿವೃದ್ಧಿ ಆಗಿದೆ. ಅವರಿಗೆ ಇನ್ನೂ ಗೌರವ ಸಿಗಬೇಕಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಕೆಂಪೇಗೌಡರ ನಂತರ ಬಂದ ಸಾಧಕರಿಗೆ ಎಷ್ಟು ಗೌರವ ಕೊಟ್ಟಿದ್ದೇವೋ ಅದೇ ರೀತಿ ಮೈಸೂರಿನಲ್ಲೂ ಮಹಾರಾಜರ ನಂತರ ಬಂದವರಿಗೆ ಗೌರವ ಕೊಡಬೇಕಿದೆ ಎಂದು ಹೇಳಿದರು.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ17 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ23 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು18 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ12 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಸ್ಥಳೀಯ24 hours agoBail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು















