ಕಾರ್ಯಕ್ರಮಗಳು
Gramajanya-ಗ್ರಾಮಜನ್ಯ ಹೊಸ ಆಡಳಿತ ಕಚೇರಿ ಉದ್ಘಾಟನೆ ಮತ್ತು ನಿರಖು ಠೇವಣಿ ಸೌಲಭ್ಯಕ್ಕೆ ಚಾಲನೆ;
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಇಂದು ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿಯನ್ನು ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿದರು.
ಪುತ್ತೂರು, ಡಿ.24: ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಇಂದು ಗ್ರಾಮಜನ್ಯ ತನ್ನ ಹೊಸ ಆಡಳಿತ ಕಚೇರಿಯನ್ನು ಪ್ರಮುಖ ಉದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿದರು.
ಅವರು ತಮ್ಮ ಭಾಷಣದಲ್ಲಿ, ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ 45% ರಷ್ಟು ಉದ್ಯೋಗಿಗಳು ಕೃಷಿಯಲ್ಲಿ ತೊಡಗಿಸಿಕೊಂಡಿದ್ದರೂ, ಈ ವಲಯವು ಜಿಡಿಪಿಗೆ ಕೇವಲ 17% ಕೊಡುಗೆ ನೀಡುತ್ತದೆ, ಇದು ಕಡಿಮೆ ಉತ್ಪಾದಕತೆ ಮತ್ತು ಆದಾಯದ ಮಟ್ಟವನ್ನು ಪ್ರತಿಬಿಂಬಿಸುತ್ತದೆ. ಕೃಷಿ ವ್ಯವಹಾರದಲ್ಲಿ ವಾಣಿಜ್ಯ ಮಾದರಿಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ ಆಚಾರ್ಯ, ಜೇನು ಉತ್ಪಾದನೆಯಲ್ಲಿ ಗ್ರಾಮಜನ್ಯದ ಗುತ್ತಿಗೆ ಕೃಷಿ ಉಪಕ್ರಮವನ್ನು ಒಂದು ಉಜ್ವಲ ಉದಾಹರಣೆಯಾಗಿ ಉಲ್ಲೇಖಿಸಿದರು.
“ಮೌಲ್ಯವರ್ಧನೆ ಇಲ್ಲದೆ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಿದಾಗ ಕೃಷಿ ಆದಾಯ ಕಡಿಮೆ ಇರುತ್ತದೆ. ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಜೀವಿತಾವಧಿಯನ್ನು ಹೆಚ್ಚಿಸುವ ಮೂಲಕ, ನಾವು ಉತ್ಪಾದಕತೆ ಮತ್ತು ಆದಾಯವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು” ಎಂದು ಆಚಾರ್ಯ ಹೇಳಿದರು. ಸೂಪರ್ ಮಾರ್ಕೆಟ್ ಕಪಾಟುಗಳಲ್ಲಿ ಕಂಡುಬರುವಂತಹ ಆಧುನಿಕ ಆರ್ಥಿಕತೆಯ ಬೇಡಿಕೆಗಳನ್ನು ಕೃಷಿ ಉತ್ಪನ್ನಗಳು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳುವ ಮೂಲಕ ಮೌಲ್ಯವರ್ಧನೆಯಲ್ಲಿ ತನ್ನ ಪ್ರಯತ್ನಗಳನ್ನು ಮುಂದುವರಿಸಿರುವ ಗ್ರಾಮಜನ್ಯದ ಕಾರ್ಯವನ್ನು ಶ್ಲಾಘಿಸಿದರು.
ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಅವರು ಗ್ರಾಮಜನ್ಯ ನಿರಖು ಠೇವಣಿ (ಫಿಕ್ಸೆಡ್ ಡೆಪಾಸಿಟ್) ಸೌಲಭ್ಯವನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಖಂಡಿಗೆಯವರು, ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯಲು ಗ್ರಾಮಜನ್ಯ ವೇದಿಕೆಯನ್ನು ಬಳಸಿಕೊಳ್ಳಬಹುದು. ಇದು ರೈತರಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಮತ್ತು ಅವರ ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ಗ್ರಾಮಜನ್ಯವು ರೈತರು ಎದುರಿಸುತ್ತಿರುವ ಅನಿಶ್ಚಿತತೆಗಳನ್ನು ಪರಿಹರಿಸುತ್ತಿದೆ ಮತ್ತು ಜೇನು ಉತ್ಪಾದಕರು ಮತ್ತು ಮಾರುಕಟ್ಟೆಯ ನಡುವಿನ ಅಂತರವನ್ನು ಕಡಿಮೆ ಮಾಡುತ್ತಿದೆ, ಇದರ ಪರಿಣಾಮವಾಗಿ ಗ್ರಾಮೀಣ ಉದ್ಯೋಗ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಜೇನು ಉತ್ಪಾದನೆಯು ಕೃಷಿ ಬೆಳೆ ಬೆಳವಣಿಗೆಗೆ ಕೊಡುಗೆ ನೀಡುತ್ತದೆ, ಆದರೆ ಹಲಸು ಮತ್ತು ಬಿದಿರಿನ ಮೌಲ್ಯವರ್ಧಿತ ಉತ್ಪನ್ನಗಳು ಆಹಾರ, ಕೈಗಾರಿಕೆಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಹೇಳಿದರು. ಗ್ರಾಮಜನ್ಯದ ತ್ವರಿತ ಬೆಳವಣಿಗೆಯನ್ನು ಬೆಂಬಲಿಸಲು, ಸಂಸ್ಥೆಯ ಅಭಿವೃದ್ಧಿಗೆ ಕೊಡುಗೆ ನೀಡುವಾಗ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿರಖು ಠೇವಣಿ ಸೌಲಭ್ಯದ ಲಾಭವನ್ನು ಪಡೆದುಕೊಳ್ಳುವಂತೆ ಅವರು ಸದಸ್ಯರಿಗೆ ಕರೆ ನೀಡಿದರು.
ಆಕರ್ಷಕ 9.5% ಬಡ್ಡಿಯೊಂದಿಗೆ ಎಫ್ಡಿ ಸೌಲಭ್ಯವು ಸದಸ್ಯರಿಗೆ ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆ ಆಯ್ಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ, ಇದು ಆರ್ಥಿಕ ಸೇರ್ಪಡೆ ಮತ್ತು ಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಟಿ. ಜಿ. ರಾಜಾರಾಮ್ ಭಟ್ ಅವರು ಹೆಚ್ಚುವರಿ ಷೇರುಗಳನ್ನು ಬಿಡುಗಡೆ ಮಾಡಿದರು, ಇದು ಸದಸ್ಯರ ಪಾಲ್ಗೊಳ್ಳುವಿಕೆ ಮತ್ತು ಸಾಂಸ್ಥಿಕ ವಿಸ್ತರಣೆಗೆ ಹೊಸ ಅವಕಾಶಗಳನ್ನು ಸೂಚಿಸಿತು.
ರಾಜಾರಾಮ ಭಟ್ ಮಾತನಾಡಿ, ಸಂಸ್ಥೆಯ ಉಪಕ್ರಮಗಳಿಂದ ಪ್ರೇರಿತನಾಗಿ ರೈತನಾಗಿ ಮತ್ತು ಬಿದಿರು ನೆಡುವವರಾಗಿ ಗ್ರಾಮಜನ್ಯದೊಂದಿಗೆ ಸಂಬಂಧ ಹೊಂದಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ” ಗ್ರಾಮಜನ್ಯ ಕೇವಲ ಹೆಸರಿಗೆ ಮಾತ್ರವಲ್ಲ, ರೈತರಿಗೆ ನಿಜವಾದ ವೇದಿಕೆಯಾಗಿದೆ” ಎಂದು ಹೇಳಿದರು. ಕ್ಯಾಂಪ್ಕೊದಂತಹ ಸಹಕಾರಿ ಮಾದರಿಗಳ ಮಹತ್ವವನ್ನು ಭಟ್ ಒತ್ತಿಹೇಳಿದರು ಮತ್ತು ಸಹಕಾರಿ ಸಚಿವಾಲಯದ ಅಡಿಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ (ಎಫ್ಪಿಒ) ಭವಿಷ್ಯದ ಬಗ್ಗೆ ಆಶಾವಾದವನ್ನು ವ್ಯಕ್ತಪಡಿಸಿದರು.
ಗ್ರಾಮಜನ್ಯದ ವಿಸ್ತರಣೆಗೆ ಕೊಡುಗೆ ನೀಡಲು ಸದಸ್ಯರಿಗೆ ಅವಕಾಶವಾಗಿ ತಲಾ ₹ 10 ಮೌಲ್ಯದ ಐದು ಲಕ್ಷ ಹೆಚ್ಚುವರಿ ಷೇರುಗಳನ್ನು ಖರೀದಿಸಲು ಸಲಹೆ ನೀಡಿದರು. “ಇದು ಸವಾಲಿನ ಕೆಲಸ, ಆದರೆ ನಾವು ಒಟ್ಟಾಗಿ ಎಲ್ಲಾ ರೈತರಿಗೆ ಪ್ರಯೋಜನವಾಗುವ ಆಂದೋಲನವನ್ನು ನಿರ್ಮಿಸಬಹುದು. ಗ್ರಾಮಜನ್ಯವನ್ನು ಬೆಂಬಲಿಸುವುದು ಎಂದರೆ ಪರ್ಯಾಯ ಬೆಳೆಗಳು, ಮೌಲ್ಯವರ್ಧನೆ ಮತ್ತು ಸುಸ್ಥಿರ ಬೆಳವಣಿಗೆಯನ್ನು ಬೆಂಬಲಿಸುವುದು” ಎಂದು ಅವರು ಹೇಳಿದರು. ಸಂಸ್ಥೆಯ ದಿನಕ್ಕೆ 10 ಟನ್ ಜೇನು ಸಂಸ್ಕರಣಾ ಸಾಮರ್ಥ್ಯವನ್ನು ಅವರು ಶ್ಲಾಘಿಸಿದರು ಮತ್ತು ಗ್ರಾಮಜನ್ಯ ನೀಡುವ ಸೇವೆಗಳನ್ನು ಬಳಸಿಕೊಳ್ಳುವಂತೆ ರೈತರನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕೃಷಿಕ ಸಮಾಜದ ನಿರ್ದೇಶಕರಾದ ವಿಜಯಕುಮಾರ್ ರೈ ಅವರು ಹೆಚ್ಚುವರಿ ಷೇರುಗಳನ್ನು ಖರೀದಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ಗ್ರಾಮಜನ್ಯದ ಅಧ್ಯಕ್ಷ ಮತ್ತು ಕಾರ್ಯಕ್ರಮದ ಅಧ್ಯಕ್ಷ ಮೂಲಚಂದ್ರ ಕುಕ್ಕಾಡಿ ಅವರಿಗೆ ಚೆಕ್ ಹಸ್ತಾಂತರಿಸಿದರು, ಇದು ಸಂಸ್ಥೆಯ ಧ್ಯೇಯಕ್ಕೆ ವಿಶ್ವಾಸ ಮತ್ತು ಬೆಂಬಲವನ್ನು ಸಂಕೇತಿಸುತ್ತದೆ.
ಸಿಇಒ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾತ್ವಿಕ್ ಶಂಕರ್ ಅತಿಥಿಗಳನ್ನು ಸ್ವಾಗತಿಸಿದರು. ರವೀಶ್ ಎ. ವಂದಿಸಿದರು. ನಿರ್ದೇಶಕರಾದ ರಾಮಪ್ರತೀಕ್ ಕರಿಯಾಲ, ನಿರಂಜನ್ ಪೊಳ್ಯ, ಶ್ರೀಹರ್ಷ ಎಕ್ಕಡ್ಕ, ಶ್ರೀನಂದನ್ ಕೆ., ಸಲಹಾ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಕೆ., ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
ಸ್ಥಳೀಯ
Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.
ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
-
ಬಿಗ್ ನ್ಯೂಸ್19 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್11 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ17 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು19 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized18 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್19 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ17 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















