ಸ್ಥಳೀಯ
Havyaka-ಹವ್ಯಕರು 3ನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು-ರಾಘವೇಶ್ವರ ಶ್ರೀ; 3ನೇ ಮಗು ಹೆತ್ತ ತಾಯಿಗೆ ವೀರ ಮಾತೆ ಪ್ರಶಸ್ತಿ; ಮಗುವಿನ ಸಂಪೂರ್ಣ ಜವಾಬ್ದಾರಿ ಹೊರಲಿರುವ ಮಠ
‘ಹವ್ಯಕ ಸಮುದಾಯದವರ ಜನಸಂಖ್ಯೆ ಕುಸಿಯುತ್ತಿರುವುದುದರಿಂದ ಮುಂದಿನ ತಲೆಮಾರಿನ ಬೆಳವಣಿಗೆಗೆ ಸಂಕಷ್ಟ ಎದುರಾಗುವಂತಾಗಿದೆ. ಹೀಗಾಗಿ, ಹವ್ಯಕರು ಮೂರನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು’ ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.
ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಹವ್ಯಕರ ಜನಸಂಖ್ಯೆ ಹೆಚ್ಚಳಕ್ಕೆ ಕರೆನೀಡಿದ್ದಾರೆ.
‘ಹವ್ಯಕ ಸಮುದಾಯದವರ ಜನಸಂಖ್ಯೆ ಕುಸಿಯುತ್ತಿರುವುದುದರಿಂದ ಮುಂದಿನ ತಲೆಮಾರಿನ ಬೆಳವಣಿಗೆಗೆ ಸಂಕಷ್ಟ ಎದುರಾಗುವಂತಾಗಿದೆ. ಹೀಗಾಗಿ, ಹವ್ಯಕರು ಮೂರನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು’ ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.
‘ಆ ಮೂರನೇ ಮಗುವಿನ ಪಾಲನೆಯ ಹೊಣೆಯನ್ನು ನಮ್ಮ ರಾಮಚಂದ್ರಾಪುರ ಮಠ ಹೊರಲಿದೆ ಮತ್ತು ಆ ಮಗುವಿಗೆ ನಾವೇ ತಂದೆ-ತಾಯಿಯಾಗಿ ಪೋಷಿಸುತ್ತೇವೆ. ಮೂರಕ್ಕಿಂತ ಹೆಚ್ಚು ಮಗುವಿಗೆ ಜನ್ಮ ನೀಡುವ ತಾಯಿಗೆ ವೀರಮಾತೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ’ ಎಂದೂ ಅವರು ಘೋಷಿಸಿದ್ದಾರೆ.
ಶುಕ್ರವಾರ ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ತೃತೀಯ ವಿಶ್ವ ಹವ್ಯಕ ಸಮ್ಮೇಳನ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಜನಸಂಖ್ಯಾ ನಿಯಂತ್ರಣ ನಿಯಮವನ್ನು ಹವ್ಯಕ ಸಮುದಾಯದವರು ಗಂಭೀರವಾಗಿ ಒಂದು ಮಗುವಿಗೆ ಸುಮ್ಮನಾಗುತ್ತಿದ್ದಾರೆ. ಮಕ್ಕಳನ್ನು ಭಾರ ಎಂದು ತಿಳಿದ ಪರಿಣಾಮ ಹವ್ಯಕ ಸಮುದಾಯದ ಸಂಖ್ಯೆ ಕುಸಿಯುತ್ತಿದೆ. ಇದು ಮುಂಬರುವ ಸಂಕಷ್ಟ ಮತ್ತು ಯುವಪೀಳಿಗೆಯ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ.
ಜನಸಂಖ್ಯಾ ನಿಯಂತ್ರಣ ನಿಯಮವನ್ನು ಯಾವ ಸಮುದಾಯದವರು ಅಳವಡಿಸಿಕೊಳ್ಳಬೇಕೋ ಅವರು ಅಳವಡಿಸಿಕೊಳ್ಳಲಿಲ್ಲ. ಅದನ್ನು ಹವ್ಯಕ ಸಮಾಜದವರು ಗಂಭೀರವಾಗಿ ಪರಿಗಣಿಸಿದ ಪರಿಣಾಮ ಈಗ ಸಮಸ್ಯೆ ಎದುರಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಹವ್ಯಕರು ಅಪರೂಪದ ತಳಿ. ಇದನ್ನು ಉಳಿಸಬೇಕಿದೆ. ಹೀಗಾಗಿ ಪ್ರತಿ ದಂಪತಿಯೂ ಕನಿಷ್ಟ 3 ಮಕ್ಕಳಿಗೆ ಜನ್ಮನೀಡಬೇಕು. ಒಂದು ವೇಳೆ ಮೂರನೇ ಮಗುವಿನ ಪಾಲನೆ ಸಾಧ್ಯವಾಗದಿದ್ದರೆ ಆ ಮಗುವಿನ ಪಾಲನೆಯನ್ನು ಶ್ರೀ ರಾಮಚಂದ್ರಾಪುರ ಮಠವೇ ಮಾಡಲಿದೆ. ಆ ಮಗುವಿಗೆ ತಂದೆ-ತಾಯಿಯಾಗಿ ಶೈಕ್ಷಣಿಕ ಸೇರಿ ಎಲ್ಲ ವಿಚಾರದಲ್ಲೂ ಪೋಷಣೆ ಮಾಡುತ್ತೇವೆ ಎಂದರು.
ಸಮಾವೇಶದ ಮೂಲಕ ನಾವು ಸರ್ಕಾರದ ಮುಂದೆ ಬೇಡಿಕೆಗಳನ್ನು ಇಡುವ ಬದಲು, ಹವ್ಯಕ ಸಮಾಜದವರ ಮುಂದೆಯೇ ಬೇಡಿಕೆಯನ್ನಿಡಬೇಕಿದೆ. ಹವ್ಯಕ ಸಮಾಜದ ಬೆಳವಣಿಗೆಗೆ ಎಲ್ಲರೂ ಮುಂದಾಗಬೇಕು. ಎಲ್ಲರೂ ಒಟ್ಟಾಗಿ ಸಮಾಜವನ್ನು ಬೆಳೆಸಬೇಕು. ಹವ್ಯಕರು ಮಲಗಿದರೆ ಕುಂಭಕರ್ಣರ ರೀತಿ, ಎದ್ದರೆ ಹನುಮಂತರ ರೀತಿ. ಹನುಮಂತ ಏನು ಬೇಕಾದರೂ ಸಾಧನೆ ಮಾಡುತ್ತಾನೆ. ಅದೇ ರೀತಿ ಹವ್ಯಕರು ಕುಂಭಕರ್ಣನ ನಿದ್ದೆಯಿಂದ ಎದ್ದು ಹನುಮಂತನ ರೀತಿ ಸಮಾಜದ ಬೆಳವಣಿಗೆಗೆ ಕೆಲಸ ಮಾಡಬೇಕು ಎಂದರು.
ದ.ಕೊರಿಯಾದ ಪರಿಸ್ಥಿತಿ ಹವ್ಯಕರಿಗೂ ಎದುರಾಗಿದೆ
ದಕ್ಷಿಣ ಕೊರಿಯಾದಲ್ಲಿ ಈಗ ಜನಸಂಖ್ಯೆ ಕುಸಿಯುತ್ತಿದೆ. ಜನ ಸಂಖ್ಯಾ ನಿಯಂತ್ರಣದ ನೆಪದಲ್ಲಿ ಮಕ್ಕಳನ್ನು ಹೊಂದದಂತೆ ದಕ್ಷಿಣ ಕೊರಿಯಾದಲ್ಲಿ ನಿಯಂತ್ರಣ ಹೇರಲಾಗಿತ್ತು. ಹೀಗಾಗಿ ದಕ್ಷಿಣ ಕೊರಿಯಾದಲ್ಲಿ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಅದೇ ಪರಿಸ್ಥಿತಿ ಹವ್ಯಕರಿಗೂ ಎದುರಾಗಿದೆ ಎಂದರು.
ಕುಟುಂಬ ಜೀವನಕ್ಕೆ ಹೆಚ್ಚಿನ ಮಹತ್ವ:
ನಾನು, ನನ್ನದು, ನನಗೆ, ನನ್ನಿಂದ ಎನ್ನುವ ಜಪ ಹೆಚ್ಚಾಗುತ್ತಿದೆ. ಕನಸಿನಲ್ಲೂ ನಾನು, ನನ್ನದು ಎಂದು ಹೇಳಲಾಗುತ್ತಿದೆ. ನಾನು ಎನ್ನುವುದು ಸತ್ತು ನಾವು ಎಂಬುದು ಬಾರದಿದ್ದರೆ ಯಾರೂ ಉದ್ದಾರವಾಗುವುದಿಲ್ಲ. ನಮ್ಮ ಪೂರ್ವಾಶ್ರಮದಲ್ಲಿ ನಮ್ಮ ಅಜ್ಜನೊಂದಿಗೆ 13 ಮೊಮ್ಮಕ್ಕಳು ಆಟವಾಡುತ್ತಿದ್ದೆವು. ಆಗೆಲ್ಲ ಕುಟುಂಬ ಜೀವನಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದೆವು. ಈಗ ಅದು ಕಡಿಮೆಯಾಗುತ್ತಿದೆ ಎಂದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಸ್ಥಳೀಯ
Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್‌ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
-
ಬಿಗ್ ನ್ಯೂಸ್9 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ದಕ್ಷಿಣ ಕನ್ನಡ22 hours ago
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ
-
ಅಪರಾಧ8 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ7 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ6 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ8 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ8 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ಬಿಗ್ ನ್ಯೂಸ್6 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!















