ಸ್ಥಳೀಯ
Excel-ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಗುರುವಾಯನಕೆರೆಯ ‘ಎಕ್ಸೆಲ್ ಶಿಕ್ಷಣ ಸಂಸ್ಥೆ’; ನೀಟ್, ಮೆಡಿಕಲ್, ಸಿಇಟಿ, ಫಾರೆನ್ಸಿಕ್ ಸೈನ್ಸ್ ನಲ್ಲಿ ದೇಶದಲ್ಲೇ ಅತ್ಯುತ್ತಮ Rank; ಬೇಷ್ ಅನ್ನಲೇ ಬೇಕು ಸುಮಂತ್ ಕುಮಾರ್ ಜೈನ್ ರ ಶಿಕ್ಷಣ ಕ್ಷೇತ್ರದ ಪರಿಶ್ರಮಕ್ಕೆ
ಶಿಕ್ಷಕರೇ ಸೇರಿಕೊಂಡು ಕಟ್ಟಿದ ಶಿಕ್ಷಣ ಸಂಸ್ಥೆಯೊಂದು ದೇಶದಲ್ಲೇ ಹೆಸರು ಪಡೆಯುತ್ತಿದೆ. ಈ ವಿದ್ಯಾಸಂಸ್ಥೆ ಬೇರೆ ಯಾವೂದು ಅಲ್ಲ ಶಿಕ್ಷಣ ಕಾಶಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿಸರ್ಗ ರಮಣೀಯ ಕೆರೆಯ ಮುಂಭಾಗದ ಪ್ರದೇಶದಲ್ಲಿ ಮೈದಳೆದು ನಿಂತ ಎಕ್ಸೆಲ್ ಪದವಿಪೂರ್ವ ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆ ಮಾಡಲು ಹೊರಟವರಿಗೆ ಯೋಗ್ಯ ಆಯ್ಕೆ.
ಬೆಳ್ತಂಗಡಿ: ಶಿಕ್ಷಕರೇ ಸೇರಿಕೊಂಡು ಕಟ್ಟಿದ ಶಿಕ್ಷಣ ಸಂಸ್ಥೆಯೊಂದು ದೇಶದಲ್ಲೇ ಹೆಸರು ಪಡೆಯುತ್ತಿದೆ. ಈ ವಿದ್ಯಾಸಂಸ್ಥೆ ಬೇರೆ ಯಾವೂದು ಅಲ್ಲ ಶಿಕ್ಷಣ ಕಾಶಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿಸರ್ಗ ರಮಣೀಯ ಕೆರೆಯ ಮುಂಭಾಗದ ಪ್ರದೇಶದಲ್ಲಿ ಮೈದಳೆದು ನಿಂತ ಎಕ್ಸೆಲ್ ಪದವಿಪೂರ್ವ ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆ ಮಾಡಲು ಹೊರಟವರಿಗೆ ಯೋಗ್ಯ ಆಯ್ಕೆ.
ವಿದ್ಯಾಸಂಸ್ಥೆ ರೂವಾರಿ ಸುಮಂತ್ ಕುಮಾರ್ ಜೈನ್ ದಶಕಗಳಿಗೂ ಮೀರಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಸಂಪೂರ್ಣ ಅನುಭವ ಹೊಂದಿದವರು. ನೀಟ್, ಸಿಇಟಿ ಪರೀಕ್ಷೆಗಳ ತರಬೇತುದಾರರಾಗಿ ರಾಜ್ಯಾದ್ಯಂತ ಸುತ್ತಾಡಿ ಖ್ಯಾತಿ ಪಡೆದವರು. ಅನುಭವಿ ಉಪನ್ಯಾಸಕರು ಸ್ಥಾಪಿಸಿದ ಸಂಸ್ಥೆಯಾದ ಕಾರಣ ಅತ್ಯಂತ ಕಡಿಮೆ ಅವಧಿಯಲ್ಲಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದು ದೇಶಾದ್ಯಂತ Rank ಪಟ್ಟಿಯಲ್ಲಿ ಕೀರ್ತಿ ಗಳಿಸುವಲ್ಲಿ ಯಶಸ್ವಿಯಾಗಿದೆ. ಸುಮಂತ್ ಕುಮಾರ್ ಜೈನ್ ರ ಅಲ್ಪ ಸಮಯದ ಅಪಾರ ಸಾಧನೆಗೆ ಬೇಷ್ ಅನ್ನಲೇ ಬೇಕು.
ಪದವಿ ಪೂರ್ವ ಕಾಲೇಜು ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತಿ ಪಡೆಯಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಒಳಗೊಂಡು ಆಧುನಿಕ ವೃತ್ತಿಪರ ಕೋರ್ಸ್‌ಗಳಿಗೆ ಸುಲಭ ಪ್ರವೇಶಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದೆ. ಇದಲ್ಲದೆ ಬಿ.ಎಸ್ಸಿ, ಅಗ್ರಿಕಲ್ಚರ್, ಫಾರೆನ್ಸಿಕ್ ಸೈನ್ಸ್, ವಾಣಿಜ್ಯ ವಿಭಾಗದಲ್ಲಿ ಪ್ರವೇಶ ಪರೀಕ್ಷೆಗಳಿಗೂ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದೆ.
ನೀಟ್ ಪರೀಕ್ಷೆಯಲ್ಲಿ ದೇಶದಲ್ಲೇ ಅದ್ವಿತೀಯ ಸಾಧನೆ ಮಾಡಿ, ಎಕ್ಸೆಲ್‌ನ ಕೀರ್ತಿ ಪತಾಕೆಯನ್ನು ಗಗನದೆತ್ತರಕ್ಕೆ ಹಾರಿಸಿದ್ದಾರೆ. 720 ಅಂಕಗಳ ನೀಟ್‌ನಲ್ಲಿ 710 ಪಡೆದ ಪ್ರಜ್ವಲ್ ಎಚ್.ಎಂ.. 692 ಪಡೆದ ಆದಿತ್ ಜೈನ್, 689 ಪಡೆದ ರಾಹುಲ್, 649 ಅಂಕ ಪಡೆದ ಸಂಜನಾ ಅವರ ಸಾಧನೆ ಅಮೋಘ, ಸರ್ಕಾರಿ ವೈದ್ಯಕೀಯ ಸೀಟುಗಳನ್ನು ಅತ್ಯಧಿಕ ಸಂಖ್ಯೆಯಲ್ಲಿ ಪಡೆದ ವಿದ್ಯಾಸಂಸ್ಥೆ ಹೆಗ್ಗಳಿಕೆ ಕೂಡ ಗುರುವಾಯನಕೆರೆಯ ಎಕ್ಸೆಲ್ ನದ್ದಾಗಿದೆ.
ಫಾರೆನ್ಸಿಕ್ ಸೈನ್ಸ್ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಅರ್ಹರಾಗಿರುವುದು ವಿಶೇಷ, 2023-24ನೇ ಶೈಕ್ಷಣಿಕ ವರ್ಷದ ಪಿಯು ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 445 ವಿದ್ಯಾರ್ಥಿಗಳ ಪೈಕಿ 357 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಉಳಿದ 88 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದರೊಂದಿಗೆ ರಾಜ್ಯಮಟ್ಟದ ಮೊದಲ 10 ಬ್ಯಾಂಕ್‌ಗಳನ್ನು ಪಡೆದ ಹಿರಿಮೆ ಸಂಸ್ಥೆಯದ್ದಾಗಿದೆ. ಇಬ್ಬರು ವಿದ್ಯಾರ್ಥಿಗಳು 600 ಅಂಕಗಳ ಪೈಕಿ 597 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಕ್ಕಳ ಸಾಧನೆಯಲ್ಲಿ ಅಗ್ರಗಣ್ಯವೆನಿಸುವ ದಕ್ಷ ಪ್ರಾಧ್ಯಾಪಕ ವರ್ಗವಿದೆ. ಪಠ್ಯಕ್ರಮದಲ್ಲಿ ಸುಮಾರು 10 ರಿಂದ 20 ವರ್ಷ ಅನುಭವವುಳ್ಳ ಪ್ರಾಧ್ಯಾಪಕ ವೃಂದ ಮಕ್ಕಳ ಸಾಧನೆ ಮತ್ತು
ಎಳಿಗೆಗಾಗಿ ಶ್ರಮಿಸುತ್ತಿದೆ.
ಸುಸಜ್ಜಿತ ವಸತಿ ನಿಲಯ: ಕಾಲೇಜಿನಲ್ಲಿ ಸುಸಜ್ಜಿತ ವಸತಿ ನಿಲಯಗಳಿವೆ. ನಿತ್ಯವೂ ವಿದ್ಯಾರ್ಥಿಗಳ ಯೋಗಕ್ಷೇಮ ನೋಡಿಕೊಳ್ಳಲು 30 ವಿದ್ಯಾರ್ಥಿಗಳಿಗೆ ಒಬ್ಬರಂತೆ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಮುಂಜಾನ 3ಕ್ಕೆ ಎದ್ದು, ಪ್ರಾತರ್ವಿಧಿ ಪೂರೈಸಿ, ಯೋಗ-ಧ್ಯಾನ-ಪ್ರಾರ್ಥನೆ ಮುಗಿಸಿ, 6ಕ್ಕೆ ಅಧ್ಯಯನಕ್ಕೆ ತೊಡಗುತ್ತಾರೆ. 6ರಿಂದ 8ರ ತನಕ ನೀಟ್/ಜೆಇಇ/ಸಿಇಟಿ ಕೋಚಿಂಗ್ ನಡೆಯುತ್ತದೆ.
ತರಗತಿ ಮತ್ತು ಇಂಟಿಗ್ರೇಟೆಡ್ ಕೋಚಿಂಗ್ ಅವಧಿ ಮುಗಿದ ಬಳಿಕ ಸಂಜೆ 6ರಿಂದ 8, ಊಟದ ಬಳಿಕ ರಾತ್ರಿ 11ರ ತನಕ ಅಧ್ಯಯನದ ವಿಷಯಗಳ ಸಂದೇಹ ನಿವಾರಣೆಗೆ ವಿದ್ಯಾರ್ಥಿಗಳಿಗೆ ಅವಧಿ. ಅಧ್ಯಯನ ವೇಳೆ ಎಲ್ಲ ವಿಷಯಗಳ ಉಪನ್ಯಾಸಕರು ಆಯಾ ಪಠ್ಯಕ್ಕೆ ಲಭ್ಯವಾಗುವುದು ವಿಶೇಷ.
ಏರುತ್ತಲೇ ಇದೆ ಎಕ್ಸೆಲ್ ಮೈಲಿಗಲ್ಲು :
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಕ್ಸೆಲ್ ಕಾಲೇಜು ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಿಕೊಂಡಿದೆ. ಹತ್ತನೇ ತರಗತಿಯಲ್ಲಿ ಕಡಿಮೆ ಅಂಕ ಪಡೆದುಕೊಂಡವರೂ ಎಕ್ಸೆಲ್‌ನಲ್ಲಿ ದ್ವಿತೀಯ ಪಿಯುಸಿ ಮುಗಿಸುವಾಗ ಡಿಸ್ಟಿಂಕ್ಷನ್ ಗಳಿಸುವುದು ಸಾಮಾನ್ಯ, 10ನೇ ತರಗತಿಯಲ್ಲಿ ಶೇ.49 ಪಡೆದು ಎಕ್ಸೆಲ್‌ನಲ್ಲಿ ವಿಜ್ಞಾನ ವಿಭಾಗಕ್ಕೆ ದಾಖಲಾದ ವಿದ್ಯಾರ್ಥಿ ದ್ವಿತೀಯ ಪಿಯುಸಿಯಲ್ಲಿ ಶೇ.92 ಪಡೆದು ಉತ್ತೀರ್ಣರಾಗಿದ್ದಾರೆ.
ದಾಖಲಾತಿ ಪ್ರಕ್ರಿಯೆ ಆರಂಭ:
2025-26ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ. ಮುಂಗಡ ದಾಖಲಾದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಸಿಗುತ್ತದೆ. ವೆಬ್‌ಸೈಟ್ ಮೂಲಕ ದಾಖಲು ಮಾಡಿಕೊಳ್ಳಬಹುದು. ಅಥವಾ 98808 99769/88672 42769 ಸಂಸ್ಥೆಯನ್ನು ಸಂಪರ್ಕಿಸಬಹುದು.

“ಎಕ್ಸೆಲ್ ಕಾಲೇಜಿನ ಯಶಸ್ಸಿಗೆ ಸಂಸ್ಥೆಯು ಹೊಂದಿರುವ ಶಿಕ್ಷಣ ವ್ಯವಸ್ಥೆಯೇ ಪ್ರಮುಖ ಕಾರಣ, ಹಾಸ್ಟೆಲ್ ಜೀವನದಲ್ಲಿ ಕಷ್ಟ ಬಂದರೂ ಭವಿಷ್ಯದಲ್ಲಿ ನಿರ್ಭೀತಿಯಿಂದ ಬದುಕಲು ಬೇಕಾದ ಜೀವನ ಪಾಠ ಕಲಿಸಿಕೊಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆಯ ಪ್ರಗತಿಯ ಕಡೆಗೆ ವೈಯಕ್ತಿಕ ಕಾಳಜಿವಹಿಸಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ”
– ಸುಮಂತ್ ಕುಮಾರ್ ಜೈನ್ ಅಧ್ಯಕ್ಷ, ಆಡಳಿತ ಮಂಡಳಿ
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು15 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ18 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್13 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಸ್ಥಳೀಯ20 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ13 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಬಿಗ್ ನ್ಯೂಸ್20 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು14 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ15 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















