Connect with us

ನಿಧನ ವಾರ್ತೆ

Puttur-ಪುತ್ತೂರು: ಗೋಂದೊಳು ಪೂಜೆಗೆ ಬಂದ ಮೂವರು ಮಸಣ ಸೇರಿದರು – ನಸುಕಿನ ಜಾವ ನಡೆದದ್ದೇನು ?

Published

on

Ad Widget

Ad Widget

Ad Widget

Ad Widget

ಕಾರು ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ತುಸು ಎಡ ಬದಿಗೆ ಚಲಿಸಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ಜಾವ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ಘಟಿಸಿದೆ.

Ad Widget

Ad Widget

Ad Widget

Ad Widget

ಕಾರು ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ತುಸು ಎಡ ಬದಿಗೆ ಚಲಿಸಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ಜಾವ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ಘಟಿಸಿದೆ.

Ad Widget

Ad Widget alt="Ad Widget"/>

Ad Widget

ಕಾರು ಚಾಲಕ ಸುಳ್ಯ ತಾಲೂಕು ಜಟ್ಟಿಪಳ್ಳ ನಿವಾಸಿ ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಚಿದಾನಂದ (58 ವ), ಅವರ ತಂದೆ ನಿವೃತ್ತ ಪೋಸ್ಟ್ ಮಾಸ್ಟರ್ ಅಣ್ಣು ನಾಯ್ಕ (85 ವ) ಹಾಗೂ ಅವರ ಪಕ್ಕದ ಮನೆಯವರಾದ ಪ್ಲಂಬರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ರಮೇಶ್ ನಾಯ್ಕ ಮೃತಪಟ್ಟವರು.

Ad Widget

Ad Widget <> Ad Widget

ಮೃತ ಅಣ್ಣು ನಾಯ್ಕ ರವರ ಪತ್ನಿ ರತ್ನಾವತಿಯವರ ತಾಯಿ ಮನೆಯಾದ ಪುಣಚದ ಗೌರಿ ಮೂಲೆಯ ದಡ್ಡೋಳಿ ನಾರಾಯಣ ನಾಯ್ಕ ಅವರ ಮನೆಯಲ್ಲಿ ಗುರುವಾರ ಗೋಂಧೊಳು ಪೂಜೆ ಇತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಣ್ಣು ನಾಯ್ಕ ದಂಪತಿಗಳು ಹಾಗೂ ಅವರ ಪುತ್ರ ಚಿದಾನಂದ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ್ ಆಗಮಿಸಿದ್ದರು. ನಸುಕಿನ ಜಾವದವರೆಗೆ ಕಾರ್ಯಕ್ರಮ ನಡೆದಿದ್ದು, ಬಳಿಕ ಊಟ ಮುಗಿಸಿ ಅಣ್ಣು ನಾಯ್ಕ, ಚಿದಾನಂದ ಹಾಗೂ ರಮೇಶ್ ನಾಯ್ಕ್ ವಾಪಸ್ಸು ಸುಳ್ಯದ ಜಟ್ಟಿಪಳ್ಳಕ್ಕೆ ತೆರಳಿದ್ದಾರೆ. ರತ್ನಾವತಿಯವರು ಅಣ್ಣನ ಮನೆಯಲ್ಲೇ ಉಳಿದುಕೊಂಡಿದ್ದರು.

ತಮ್ಮ ಮಾರುತಿ ಅಲ್ಟೋ ಕೆ -10 ಕಾರಿನಲ್ಲಿ ಅವರು ನಸುಕಿನ ಜಾವ ಗೌರಿ ಮೂಲೆಯಿಂದ ಹೊರಟ್ಟಿದ್ದು, ಪುಣಚ – ಪರ್ಲಡ್ಕ ಸಂಪರ್ಕ ರಸ್ತೆಯಲ್ಲಿ ಆಗಮಿಸಿ ಮಾಣಿ – ಮೈಸೂರು ಹೆದ್ದಾರಿಯನ್ನು ಪರ್ಲಡ್ಕ ಜಂಕ್ಷನ್ ನಲ್ಲಿ ಪ್ರವೇಶಿಸಿದ್ದಾರೆ. ಅಲ್ಲಿಂದ ಸುಮಾರು 100 ರಿಂದ 150 ಮೀಟರ್ ಹೆದ್ದಾರಿಯಲ್ಲಿ ಸಾಗಿದ ಕಾರು ಬಳಿಕ ಬಲಕ್ಕೆ ಸಣ್ಣ ತಿರುವು ಪಡೆದುಕೊಂಡು ಹೆದ್ದಾರಿಯಲ್ಲೆ ಸಾಗಬೇಕಿತ್ತು. ಆದರೇ ಇದರ ಬದಲು ನಿದ್ದೆ ಮಂಪರಿನ ಕಾರಣದಿಂದಲೋ ಏನೋ ತುಸು ಎಡಕ್ಕೆ ಚಲಿಸಿದ ಕಾರು ಗ್ಯಾರೇಜ್ ಪಕ್ಕದ ಮಣ್ಣಿನ ರಸ್ತೆಯಲ್ಲಿ ಸುಮಾರು 20 ಮೀಟರ್ ನಷ್ಟು ದೂರ ಸಾಗಿ ಖಾಸಗಿ ವ್ಯಕ್ತಿಯೊಬ್ಬರ ಜಮೀನಿಗೆ ಉರುಳಿ ಬಿದ್ದಿದೆ.

Ad Widget

Ad Widget

ಗ್ಯಾರೇಜಿನ ಹಿಂಬದಿಯಲ್ಲಿ ಸಂಪಾಜೆ ಮೂಲದ ರಾಜೇಶ್ ಭಟ್ ಅವರ ಜಮೀನಿದ್ದು, ಅದು ಹೆದ್ದಾರಿಯಿಂದ 10 ಅಡಿ ಕೆಳಗಿದೆ. ರಸ್ತೆಯಿಂದ ಎಡಕ್ಕೆ ಚಲಿಸಿದ ಕಾರು ಮರ ಗಿಡ ಗಂಟಿಗಳ ಮಧ್ಯೆ ಸಾಗಿ 10 ಅಡಿ ಕೆಳಗೆ ಉರುಳಿ ಬಿದ್ದಿದ್ದು ನಾಲ್ಕು ಟಯರ್ ಗಳು ಮೇಲ್ಮುಖವಾಗಿತ್ತು.

ಕಾರು ಕೆಳಗೆ ಬಿದ್ದು ಪಲ್ಟಿಯಾದ ಹಿನ್ನಲೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರಬಹುದು . ಇದು ನಸಕಿನ ಜಾವ 4.30ರ ಸುಮಾರಿಗೆ ನಡೆದ ಹಿನ್ನಲೆಯಲ್ಲಿ ಯಾರ ಗಮನಕ್ಕೂ ಬಂದಿಲ್ಲ. ಪಕ್ಕದ ಮನೆಯವರಿಗೆ ಏನೋ ಬಿದ್ದ ಶಬ್ಧ ಕೇಳಿಸಿದ್ದರೂ ಅವರು ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಹಾಗೂ ಕಾರಿನಿಂದ ಹೊರ ಬರಲಾಗದೇ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗುತ್ತಿದೆ.

ಅಣ್ಣು ನಾಯ್ಕ ಹಾಗೂ ರತ್ನಾವತಿಯವರಿಗೆ ಚಿದಾನಂದ ಹಾಗೂ ವನಜಾಕ್ಷಿ ಎಂಬಿಬ್ಬರು ಮಕ್ಕಳು. ಚಿದಾನಂದರವರು ಚಿಕ್ಕ ಮಗಳೂರಿನಲ್ಲಿ ನೆಲೆಸಿದ್ದರೆ, ವನಜಾಕ್ಷಿಯವರನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಹೀಗಾಗಿ ಜಟ್ಟಿಪಳ್ಳ ಕಾನತ್ತಿಲದ ಮನೆಯಲ್ಲಿ ದಂಪತಿಗಳಿಬ್ಬರೇ ವಾಸಿಸುತ್ತಿದ್ದರು. ಚಿದಾನಂದರವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ , ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಮೃತ ದೇಹವನ್ನು ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

ಅಂತಿಮ ನಮನ
ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂಘದ ಪದಾಧಿಕಾರಿಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Ad Widget
Click to comment

Leave a Reply

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ನಿಧನ ವಾರ್ತೆ

Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!