ಪುತ್ತೂರು
Shrinivasa Kalyanotsava | ಪುತ್ತೂರು : ಸಂತರ ಸಮಾಗಮದಲ್ಲಿ ಧರ್ಮಸಂಗಮ : ಬೊಳುವಾರಿನಿಂದ ಶ್ರೀದೇವಿ ಭೂದೇವಿ ಸಹಿತ ಶ್ರೀನಿವಾಸನ ಭವ್ಯ ಸ್ವಾಗತ – ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ – ನಾಳೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ
ಪುತ್ತೂರು: ಕಲ್ಯಾಣೋತ್ಸವದ (Shrinivasa Kalyanotsava) ಮೂಲಕ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗುತ್ತಿದೆ. ಭಗವಂತನ ಕಲ್ಯಾಣ ಗುಣಗಳನ್ನು ಅನುಸರಿಸುವ ಕಾರ್ಯವಾಗಬೇಕು. ಸನಾತನ ಹಿಂದು ಧರ್ಮದ ಸಂರಕ್ಷಣೆ ನಡೆಸುವ ಕಾರ್ಯ ನಮ್ಮಿಂದಲೇ ನಡೆಯಬೇಕಾಗಿದೆ. ಧರ್ಮವನ್ನು ರಕ್ಷಣೆ ಮಾಡುವವರನ್ನು, ಧರ್ಮವೇ ರಕ್ಷಿಸುತ್ತದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ನಡೆದ ಧರ್ಮ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಅರಕಲಗೂಡು ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನ ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಭಾರತೀಯ ಸಂಸ್ಕೃತಿ ಎಲ್ಲ ದೇಶಕ್ಕೆ ಆದರ್ಶಮಯವಾಗಿದ್ದು, ಜಗತ್ತು ಅನುಸರಿಸುವುದಕ್ಕೆ ಮುಂದಾಗುತ್ತಿದೆ. ದೇಶದ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಟಿಬದ್ದವಾಗಬೇಕಾಗಿದೆ. ಎಲ್ಲರೂ ಒಂದು ಎಂಬ ಭಾವನೆಯಲ್ಲಿ ಗುರಿಯ ಕಡೆಗೆ ಸಾಗುತ್ತಿದ್ದೇವೆ ಎಂದು ತಿಳಿಸಿದರು.
ಚಿತ್ರ : ನವೀನ್ ಸ್ಟುಡಿಯೋ

ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಸನಾತನ ಧರ್ಮದ ಉಳಿವಿಗೆ ಹಿಂದು ಪ್ರತಿಜ್ಞಾ ಬದ್ಧನಾಗಬೇಕಾಗಿದೆ. ಸಂಘಟನೆಯ ಮೂಲಕ ಸಮಾಜದಲ್ಲಿ ಪರಿವರ್ತನೆಯನ್ನು ಮಾಡಬಹುದು. ಪುತ್ತಿಲ ಪರಿವಾರ ಕೆಲಸ ಕಾರ್ಯಗಳ ಮೂಲಕ ಸಾಮರ್ಥ್ಯವನ್ನು ತೋರಿಸಿದೆ. ಪುತ್ತಿಲರ ಯೋಜನೆ, ಯೋಚನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.
ಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಸಂಪತ್ತನ್ನು ಭಗವಂತನಿಗೆ ಅರ್ಪಿಸಿದಾಗ ಜೀವನ ಬಂಗಾರಮಯವಾಗುತ್ತದೆ. ಕೆಲಸವನ್ನು ಶ್ರದ್ಧೆಯಿಂದ ಮಾಡಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಧರ್ಮ ರಕ್ಷಣೆಯ ಕಾರ್ಯ ಪ್ರತಿಯೊಬ್ಬರ ಹೊಣೆಯಾಗಿದೆ. ಪರಮಾತ್ಮನ ಆರಾಧನೆಯ ಮೂಲಕ ವೈರಿ ನಿಗ್ರಹ ಮಾಡಬಹುದಾಗಿದೆ ಎಂದು ತಿಳಿಸಿದರು.

ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಧರ್ಮಾಚರಣೆಯನ್ನು ನಡೆಸಿದಾಗ ಜೀವನದಲ್ಲಿ ಮಂಗಳ ಪ್ರಾಪ್ತಿಯಾಗುತ್ತದೆ. ಸಂಸ್ಕೃತಿಯ ಆಚರಣೆಗಳು ನಡೆದಾಗ ಯುವ ಪೀಳಿಯನ್ನು ತಿಳಿಸುವ ಕಾರ್ರವಾಗಬೇಕು. ಸಜ್ಜನರಿಗೆ ರಕ್ಷಣೆ ಸಿಗದಿದ್ದಾಗ ಧರ್ಮ ರಕ್ಷಣೆಯ ನಿಟ್ಟಿನಲ್ಲಿ ಭಗವಂತನ ಆಗಮನವಾಗುತ್ತದೆ. ಕಲ್ಯಾಣೋತ್ಸವದ ಮೂಲಕ ಸಮಸ್ತ ಹಿಂದೂ ಸಮಾಜದ ಕಲ್ಯಾಣ ಆಗಲಿದೆ ಎಂದರು.
ಅಧ್ಯಕ್ಷತೆಯನ್ನು ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು ವಹಿಸಿದರು.ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಶಾಂಕ ಕೊಟೇಚಾ, ಬೂಡಿಯಾರು ರಾಧಾಕೃಷ್ಣ ರೈ, ಚಂದಪ್ಪ ಮೂಲ್ಯ, ಕೋಶಾಧಿಕಾರಿ ಉದಯ ಕುಮಾರ್ ರೈ ಎಸ್. ಸಂಪ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಮತ್ತಿತರರು ಉಪಸ್ಥಿತರಿದ್ದರು.ಶ್ರೀನಿವಾಸ ಕಲ್ಯೋಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಸ್ವಾಗತಿಸಿದರು. ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ವಂದಿಸಿದರು. ಹರಿಣಿ ಪುತ್ತೂರು, ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು. ನವೀನ್ ರೈ ಪಂಜಳ ಸಹಕರಿಸಿದರು.

ಬೊಳುವಾರಿನಿಂದ ಭವ್ಯ ಸ್ವಾಗತ:
ಶ್ರೀನಿವಾಸ ಕಲ್ಯಾಣೋತ್ಸವದ ಹಿನ್ನಲೆಯಲ್ಲಿ ಬೊಳುವಾರಿನಲ್ಲಿ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರನ್ನು ಬೊಳುವಾರಿನಲ್ಲಿ ಸ್ವಾಗತಿಸಲಾಯಿತು. ನಾಸಿಕ್ ಬ್ಯಾಂಡ್, ನೃತ್ಯ ಭಜನೆ, ಚೆಂಡೆ, ಭಜನೆ ತಂಡ, ಪೂರ್ಣಕುಂಭ, ಮಂತ್ರ ಪಾರಾಯಣ, ವಾದ್ಯ ತಂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಶೋಭಾಯಾತ್ರೆಗೆ ಉಡುಪಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಚಾಲನೆ ನೀಡಿದರು.
ಬೊಳುವಾರಿನಿಂದ ಮುಖ್ಯ ರಸ್ತೆಯ ಮೂಲಕ ಸರ್ಕಾರಿ ಬಸ್ ನಿಲ್ದಾಣದಿಂದ ದೇವರಮಾರು ಗದ್ದೆಯ ಈಶ ಮಂಟಪಕ್ಕೆ ಮೆರವಣಿಗೆ ಮೂಲಕ ದೇವರನ್ನು ಕರೆತರಲಾಯಿತು.
ಕುಂಟಾರು ರವೀಶ್ ತಂತ್ರಿ, ಹಿರಿಯ ಬಿಜೆಪಿ ಮುಖಂಡ ಮೊಗರೋಡಿ ಬಾಲಕೃಷ್ಣ ರೈ, ಮಂಗಳೂರಿನ ಖ್ಯಾತ ಹುಲಿವೇಷ ಆಯೋಜಕ ಯಜ್ಞೇಶ್ವರ್ ಬರ್ಕೆ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಶಶಾಂಕ ಕೊಟೇಚಾ, ಚಂದಪ್ಪ ಮೂಲ್ಯ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿಯ ರಾಜು ಶೆಟ್ಟಿ, ಸಹಸಂಚಾಲಕ ಮನೀಶ್ ಕುಲಾಲ್, ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಮತ್ತಿರರು ಉಪಸ್ಥಿತರಿದ್ದರು.





ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ24 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು24 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















