ಪುತ್ತೂರು
ಸಂಸದ ಬ್ರಿಜೇಶ್ ಚೌಟ ನೇತೃತ್ವದ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ – ಇಂದು ಫೈನಲ್
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದ 8ನೇ ವರ್ಷದ ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು ಚಾಲನೆ ನೀಡಲಾಯಿತು.
ಕಾಶ್ಮೀರದ ರಜರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್ ಅವರು ಕಂಬಳಕ್ಕೆಚಾಲನೆ ನೀಡಿದರು.
ಮಂಗಳೂರು ಕಂಬಳದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮತ್ತು ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸೇನಾ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದು ಮೃತಪಟ್ಟ ಐವರು ಯೋಧರಾದ ಸುಬೇದಾರ್ ದಯಾನಂದ ತಿರಕಣ್ಣವರ್, ಲ್ಯಾನ್ಸ್ ಹವಾಲ್ದಾರ್ ಅನೂಪ್, ನಾಯಕ್ ಘಡ್ಗೆ ಶುಭ ಸಮಾಧಾನ್, ಸಿಪಾಯಿ ನಿಕುರೆ ದಿಗಂಬರ್ ಮತ್ತು ಸೆ.ಮಹೇಶ್ ಮರಿಗೊಂಡ್ ಅವರಿಗೆ ನಮನ ಸಲ್ಲಿಸಲಾಯಿತು.

ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ। ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ. ವಿ.ಕುಲಪತಿ ಪಿ.ಎಲ್ ಧರ್ಮ, ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿಯ ಮುಖ್ಯಸ್ಥ ಚಿತ್ತರಂಜನೆ, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ರಾಮಕೃಷ್ಣ ಮಠದ ಚಿದಂಬರಾನಂದ ಸ್ವಾಮೀಜಿ, ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ, ಜಯರಾಮ್ ಶೆಟ್ಟಿ, ಕಾರ್ಪೊರೇಟರ್ ಕಿರಣ್ ಕೋಡಿಕಲ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್ ಕವಿತಾ ಸನಿಲ್, ಬ್ರಿಗೇಡಿಯರ್ ಐ.ಎಂ ರೈ, ಮಂಗಳೂರು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಉಪಾಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ.ಅಶೋಕ್ ಕೃಷ್ಣಾಪುರ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಪ್ರಸಾದ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ್ ಕುಮಾರ್, ಪ್ರಕಾಶ್ ಗರೋಡಿ, ವಸಂತ್ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇಂದು ಕಂಬಳದ ಫೈನಲ್ ಸ್ಪರ್ಧೆ:
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ದಕ್ಷಿಣ ಕನ್ನಡ19 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ19 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ18 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಅಪರಾಧ24 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ18 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್18 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















