ನಿಧನ ವಾರ್ತೆ
Pregnant woman-ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು, ಗರ್ಭಿಣಿ ಸಾವು: ಮನನೊಂದ ಪತಿ ಆತ್ಮಹತ್ಯೆಗೆ ಯತ್ನ
ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವನ್ನಪ್ಪಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪತ್ನಿ ಸಾವಿನ ಸುದ್ದಿ ತಿಳಿದು ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿ, ಡಿ. 31: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವನ್ನಪ್ಪಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪತ್ನಿ ಸಾವಿನ ಸುದ್ದಿ ತಿಳಿದು ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ.
ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದ ರಾಧಿಕಾ ವಯಸ್ಸು ಕೇವಲ 19 ವರ್ಷ. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಿಮ್ಸ್ ಆಸ್ಪತ್ರೆ ನಿರ್ದೇಶಕರ ಪ್ರತಿಕ್ರಿಯೆ:
ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಎಸ್ಎಫ್ ಕಮ್ಮಾರ ಪ್ರತಿಕ್ರಿಯಿಸಿದ್ದು, ಬೆಳಗಾವಿಯಿಂದ ಕಿಮ್ಸ್ ಆಸ್ಪತ್ರೆ ಬಂದಾಗ ಗರ್ಭಿಣಿ ರಾಧಿಕಾ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಿಪಿ, ನಾಡಿಮಿಡಿತ ಇರಲಿಲ್ಲ, ರಾಧಿಕಾ ಅವರಿಗೆ ಪ್ರಜ್ಞೆಯೇ ಇರಲಿಲ್ಲ. ಹೊಟ್ಟೆಯಲ್ಲಿ ಮಗುಯಿತ್ತು. ಗರ್ಭಪಾತ ಆಗಿರಲಿಲ್ಲ. ಆದರೆ ನಮ್ಮ ವೈದ್ಯರು ಸಕಾಲದಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.
ಸತ್ತ ಮಗು ರಾಧಿಕಾ ಹೊಟ್ಟೆಯಲ್ಲೇ ಇತ್ತು. ಅವರಿಗೆ ಪ್ರಜ್ಞೆ ಬಂದಾಗ ಗರ್ಭದಿಂದ ಮಗು ಹೊರ ತೆಗೆಯುವ ಆಲೋಚನೆ ಇತ್ತು. ಆದರೆ ಅವರ ಆರೋಗ್ಯ ಚೇತರಿಕೆ ಆಗಲೇ ಇಲ್ಲ. ಇಂದು ಬೆಳಗ್ಗೆ 11 ಗಂಟೆ ರಾಧಿಕಾ ಸಾವನ್ನಪ್ಪಿದ್ದಾರೆ. ಇದರಿಂದ ಮನನೊಂದು ಆಕೆ ಪತಿ ಮಲ್ಲೇಶಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ನಿಧನ ವಾರ್ತೆ
Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.
ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
-
Uncategorized19 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ6 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ6 hours agoAccident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್6 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕಾರ್ಯಕ್ರಮಗಳು5 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಶಿಕ್ಷಣ24 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಅಪರಾಧ4 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ















