ಮಂಗಳೂರು
Chauta-ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಸಬ್ಸಿಡಿ – ಕ್ಯಾ. ಚೌಟ
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರೆಯುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸೂಚಿಸಿದ್ದಾರೆ.
ಮಂಗಳೂರು, ಡಿ.31: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರೆಯುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ. ಬ್ರಿಜೇಶ್ ಚೌಟ ಅವರು ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್‌ಗೆ 30,000 ರೂ. 2 ಕಿಲೋ ವ್ಯಾಟ್ 60,000 ರೂ., 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‌ಗಳಿಗೆ 78,000 ರೂ.ವರೆಗೆ ಸಬ್ಸಿಡಿ ದೊರಕಲಿದೆ ಎಂದವರು ತಿಳಿಸಿದ್ದಾರೆ.
ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್ ಅನ್ನು ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಾಟ ಮಾಡಬಹುದು ಎಂದು ಸಂಸದರು ಹೇಳಿದರು.
ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದರು.
ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜ. 2ರಂದು ಸಚಿವ ಪ್ರಹ್ಲಾದ ಜೋಶಿ ಮಂಗಳೂರಿಗೆ
ಜ. 2ರಂದು ಮಂಗಳೂರಿಗೆ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸೋಲಾರ್ ಉಪಕರಣ ಮಾರಾಟಕ್ಕೆ 270 ಡೀಲರ್ಗಳು
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಮಂದಿ ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯಡಿಯಲ್ಲಿ ಸೋಲಾರ್ ಉಪಕರಣಗಳ ಮಾರಾಟಕ್ಕೆ 270 ಡೀಲರ್ ಗಳನ್ನು ಗುರುತಿಸಲಾಗಿದೆ. ಸಾರ್ವಜನಿಕರು ಅರ್ಜಿಯನ್ನು ನೋಂದಾಯಿ http://www.pmsuryaghar.gov.in ಲೈನ್ ಪೋರ್ಟಲ್‌ಗೆ ಭೇಟಿ ನೀಡಬಹುದು ಎಂದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಬಿಗ್ ನ್ಯೂಸ್23 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ24 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ5 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಮಂಗಳೂರು4 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ


















