Connect with us

ಸ್ಥಳೀಯ

Dharmasthala-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯಿಂದ ರಾಜ್ಯದಲ್ಲಿ ಶುದ್ಧಜಲ ಬಳಕೆ ಕುರಿತು ʻಜಲ ಅಭಿಯಾನʼ

Published

on



Ad Widget

Ad Widget

Ad Widget

Ad Widget

ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತಿಂಗಳು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ದ ಜಲ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1.50 ಲಕ್ಷ ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾ‌ರ್ ಎಸ್.ಎಸ್. ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತಿಂಗಳು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ದ ಜಲ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1.50 ಲಕ್ಷ ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾ‌ರ್ ಎಸ್.ಎಸ್. ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಲ್ಲಿ ಜನರಿಗೆ ಶುದ್ಧ ನೀರು ಕೊಡುವ ಉದ್ದೇಶಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಸಮುದಾಯ ಶುದ್ಧಕುಡಿಯುವ ನೀರಿನ ಘಟಕ ಸ್ಥಾಪಿಸುವ ನಿರ್ಧಾರ ಕೈಗೊಂಡರು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ 2009ರಲ್ಲಿ ಮೊದಲ ಶುದ್ದಕುಡಿಯುವ ನೀರಿನ ಘಟಕವನ್ನು ಹೇಮಾವತಿ ವಿ. ಹೆಗ್ಗಡೆಯವರು ಲೋಕಾರ್ಪಣೆ ಮಾಡಿದರು.

Ad Widget

Ad Widget <> Ad Widget

ರಾಜ್ಯದಲ್ಲಿ ಇದುವರೆಗೆ ‘ಶುದ್ಧಗಂಗಾ’ ಎಂಬ ಹೆಸರಿನಲ್ಲಿ 481 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಸುಮಾರು 5.55ಲಕ್ಷ ಜನರು ನಿತ್ಯ ಶುದ್ಧನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿದಿನ 22 ಲಕ್ಷ ಲೀಟರ್ ಶುದ್ದ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತಿದೆ. ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳೂ ಕೈ ಜೋಡಿಸಿವೆ ಎಂದು ಅವರು ಹೇಳಿದ್ದಾರೆ.



Ad Widget

ಶುದ್ಧಗಂಗಾ ಘಟಕಗಳು ಇರುವ ಪ್ರದೇಶದ ಜನರಿಗೆ ಜಾಗೃತಿ ಅಭಿಯಾನ ಆಯೋಜಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕ ಮಾಹಿತಿ ಕಾರ್ಯಕ್ರಮ, ಒಕ್ಕೂಟ ಸಭೆಗಳು, ಜ್ಞಾನವಿಕಾಸ ಕೇಂದ್ರಗಳಲ್ಲಿ ಮಾಹಿತಿ ಹಾಗೂ ಮನೆಮನೆಗೆ ತೆರಳಿ ನೋಂದಣಿ ಮೊದಲಾದ 500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಘಟಕ ಮೇಲ್ವಿಚಾರಕರು, ಪ್ರೇರಕರು, ಸ್ಥಳೀಯ ಕಾರ್ಯಕರ್ತರು ಹಾಗೂ ಪ್ರಗತಿಬಂಧು ಒಕ್ಕೂಟದ ಸದಸ್ಯರು ಇದರಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget

Ad Widget

ಶುದ್ಧಜಲ ಅಭಿಯಾನದ ಕರಪತ್ರ ಬಿಡುಗಡೆ:
ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಶುದ್ಧಜಲ ಅಭಿಯಾನದ ಕರಪತ್ರವನ್ನು ಧರ್ಮಸ್ಥಳದಲ್ಲಿ ಬುಧವಾರ ಬಿಡುಗಡೆ ಮಾಡಿದರು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್, ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ ಪೈ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಶುದ್ಧಗಂಗಾ ಮತ್ತು ಕೆರೆ ಅಭಿವೃದ್ಧಿ ವಿಭಾಗದ ನಿರ್ದೇಶಕ ಶಿವಾನಂದ ಆಚಾರ್ಯ ಉಪಸ್ಥಿತರಿದ್ದರು.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading