ಸಾಮಾಜಿಕ ಮಾಧ್ಯಮ
ಬಿಗ್ ಬಾಸ್ ಮನೆಯಲ್ಲಿ ಪುತ್ತೂರಿನ ಖ್ಯಾತ ಟಿಕ್ ಟಾಕ್ ಸ್ಟಾರ್ ನ ಕುಟುಂಬದ ಹುಲಿ ಕುಣಿತ – ಇತಿಹಾಸದಲ್ಲೆ ಮೊದಲ ಬಾರಿಗೆ ಎಂಟ್ರಿ ಕೊಟ್ಟ ಅತಿ ದೊಡ್ಡ ಕುಟುಂಬ – ತೊಟ್ಟಿಲಲ್ಲಿ ಮಗಲಗಿದ ಮಗುವನ್ನು ನೋಡಿ ಭಾವುಕರಾದ ಧನರಾಜ್ ಆಚಾರ್ಯ

ಬೆಂಗಳೂರು: ಈ ವಾರದಿಂದ ಬಿಗ್ಬಾಸ್ ಮನೆಯಲ್ಲಿ ಫ್ಯಾಮಿಲಿ ರೌಂಡ್ ಆರಂಭವಾಗಿದೆ. ಸ್ಪರ್ಧಿಗಳ ಕುಟುಂಬ ಸದಸ್ಯರು ಬಿಗ್ ಬಾಸ್ ಮನೆಗೆ ಭೇಟಿ ನೀಡಿ ಅವರ ಜತೆ ಕಳೆಯುವ ಮಧುರ ಕ್ಷಣಗಳು ಪ್ರೇಕ್ಷಕರ ಮನಸ್ಸನ್ನು ಸೆಳೆಯುತ್ತಿದೆ. ಇಂದಿನ ಸಂಚಿಕೆಯಲ್ಲಿ (ಜ.2) ಪುತ್ತೂರಿನ ಖ್ಯಾತ ಯೂಟ್ಯೂಬರ್ , ತನ್ನ ನಗೆ ಬುಗ್ಗೆಯಿಂದ ಬಿಗ್ ಬಾಸ್ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಧನರಾಜ್ ((Dhanaraj) ರವರ ಕುಟುಂಬದ ಸದಸ್ಯರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಲಿದ್ದಾರೆ.
ಈಗಾಗಲೇ ತ್ರಿವಿಕ್ರಮ್, ಭವ್ಯಾ, ರಜತ್, ಮಂಜು, ಗೌತಮಿ, ಮೋಕ್ಷಿತಾ ಅವರ ಕುಟುಂಬ ಬಿಗ್ಬಾಸ್ ಮನೆಗೆ ಭೇಟಿ ನೀಡಿದೆ. ಅವರ ಕುಟುಂಬದ ಒಂದು ಅಥಾವ ಎರಡು ಸದಸ್ಯರು ಮನೆಯೊಳಗೆ ಭೇಟಿ ನೀಡಿದ್ರೆ, ಧನರಾಜ್ ಕುಟುಂಬದಿಂದ ಜಂಬೋ ತಂಡವೇ ಬಿಗ್ ಬಾಸ್ ಮನೆ ಪ್ರವೇಶಿಸಿದೆ. ಈ ಮೂಲಕ ದೊಡ್ಮನೆಗೆ ದೊಡ್ಡ ಕುಟುಂಬವೇ ಭೇಟಿ ನೀಡಿದಂತಾಗುತ್ತದೆ.
ಸುಮಾರು 25ಕ್ಕೂ ಹೆಚ್ಚು ಮಂದಿ ಬಸ್ಸು ಬುಕ್ ಮಾಡಿಕೊಂಡು ಮಂಗಳವಾರ ಪುತ್ತೂರಿನಿಂದ ಬೆಂಗಳೂರಿಗೆ ತೆರಳಿದ್ದು, ಬುಧವಾರ ಅಲ್ಲಿ ಶೂಟಿಂಗ್ ಮುಗಿಸಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಇಂದು ರಾತ್ರಿಯ ಸಂಚಿಕೆಯಲ್ಲಿ ಇದು ಪ್ರಸಾರವಾಗಲಿದ್ದು ಕಲರ್ಸ್ ಕನ್ನಡ ವಾಹಿನಿ ಈಗಾಗಲೇ ಇದರ ಪ್ರೊಮೋ ರಿಲೀಸ್ ಮಾಡಿದೆ.

ದೊಡ್ಮನೆಯ ಗಾರ್ಡನ್ ಏರಿಯಾದಲ್ಲಿ ಧನರಾಜ್ ಫ್ಯಾಮಿಲಿಯ ಸದಸ್ಯರು ಹುಲಿ ಡ್ಯಾನ್ಸ್ ಮಾಡಿದ್ದಾರೆ. ಇದನ್ನ ನೋಡಿದ ಧನರಾಜ್ ಕೂಡ ಹುಲಿ ಡ್ಯಾನ್ಸ್ ಮಾಡಿದ್ದಾರೆ. ಈ ಒಂದು ಸಂತೋಷದಲ್ಲಿಯೇ ಪತ್ನಿ ಎಂಟ್ರಿ ಸಹ ಆಗುತ್ತದೆ. ಹಾಗೆ ಬಂದ ಪತ್ನಿ ಧನರಾಜ್ಗೆ ಅಷ್ಟೇ ಪ್ರೀತಿಯಿಂದ ಹೊಡೆಯೊದನ್ನು ಪ್ರೋಮೊದಲ್ಲಿ ಕಾಣಬಹುದಾಗಿದೆ.
ಯಾರೆಲ್ಲ ಹೋಗಿದ್ದಾರೆ ?

ಧನರಾಜ್ ಆಚಾರ್ಯರವರ ತಂದೆ ರಾಘವ ಆಚಾರ್ಯ. ತಾಯಿ ಸಂದ್ಯಾ ರಾಘವ, ಪತ್ನಿ ಪ್ರಜ್ಞಾ ಆಚಾರ್ಯ ಮತ್ತು ಮಗಳು , ಕುಟುಂಬ ಸದಸ್ಯರಾದ ಜಗದೀಶ್ (ಜಗ್ಗ ಚಿಕ್ಕ ), ಅನುಸೂಯ ಜಗದೀಶ್ , ಯಶಸ್ಸು, ವಿಶಾಸ್ಸು , ಕೇಶವ ಆಚಾರ್ಯ, ಜಯಶ್ರೀ ಕೇಶವ, ವಾಸುದೇವ, ಅನಿತಾ ವಾಸುದೇವ , ದೇವಿಕಾ, ಪ್ರಿಯಾಂಕ( ಪಿಂಕಿ), ಪ್ರಸಾದ್, ಸುಷ್ಮಾ , ಸಂತೋಷ್ , ಭವ್ಯಾ ಸಂತೋಷ್ , ನಕ್ಷತ್ರ , ಪ್ರಶಾಂತ್, ಪೂಜಾ ಪ್ರಶಾಂತ್ , ಅಭಿಷೇಕ್, ಕೃತಿಕಾ ಅಭಿಷೇಕ್ , ಪ್ರಸಾದ್ ಮತ್ತಿತ್ತರರು ಬಿಗ್ ಬಾಸ್ ಮನೆಗೆ ಪುತ್ತೂರಿನಿಂದ ಹೊರಟವರು.

ಧನರಾಜ್ ತನ್ನ ಕುಟುಂಬ ಸದಸ್ಯರೊಂದಿಗೆ ಮಾಡಿದ ಟಿಕ್ ಟಾಕ್ ವಿಡಿಯೋಗಳ ಮೂಲಕ ಪ್ರಸಿದ್ದಿಗೆ ಬಂದವರು . ಅವರ ಟಿಕ್ ಟಾಕ್ ಹಾಗೂ ಯೂಟ್ಯೂಬ್ ವಿಡಿಯೋ ಗಳನ್ನು ವೀಕ್ಷಿಸಿದ ಬಹುತೇಕ ವೀಕ್ಷಕರಿಗೆ ಅವರ ಈ ಕುಟುಂಬ ಸದಸ್ಯರ ಪರಿಚಯ ಇದ್ದೆ ಇರುತ್ತದೆ ಹಾಗೂ ಅವರು ಮಾಡುವ ಕಾಮಿಡಿಗಳಿಗೆ ಮನಸೋತವರೇ ಆಗಿದ್ದಾರೆ . ಹೀಗಾಗಿ ಹತ್ತಕ್ಕಿಂತ ಹೆಚ್ಚು ಮಂದಿಗೆ ಬಿಗ್ ಬಾಸ್ ಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಾಹಿನಿಯ ಮೂಲಗಳು ತಿಳಿಸಿವೆ.
ಕುಟುಂಬ, ಸಂಬಂಧ, ನಿಷ್ಕಲ್ಮಶ ಪ್ರೀತಿಗೆ ಬಿಗ್ ಬಾಸ್ ಮನೆ ಈ ವಾರ ಸಾಕ್ಷಿಯಾಗಿದೆ. ಸುಮಾರು 2 ತಿಂಗಳ ಬಳಿಕ ಧನರಾಜ್ ಅವರು ತನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುತ್ತಿದ್ದಾರೆ. ಇದು ಅತ್ಯಂತ ಬಾವುಕ ಕ್ಷಣಗಳಿಗೂ ಸಾಕಿಯಾಗಿದೆ. ಜನಿಸಿದ ಒಂದು ತಿಂಗಳಿನಲ್ಲಿಯೇ ಮಗುವನ್ನು ಬಿಟ್ಟು ಬಿಗ್ ಬಾಸ್ ಮನೆಗೆ ಧನರಾಜ್ ತೆರಳಿದ್ದು, ಇದೀಗ ಎರಡು ತಿಂಗಳ ಬಳಿಕ ಭೇಟಿಯಾಗುತ್ತಿದ್ದು ತೊಟ್ಟಿಲಲ್ಲಿ ಮಲಗಿದ ಮಗುವನ್ನು ನೋಡಿ ಧನರಜ್ ಸಕತ್ ಎಮೋಷನಲ್ ಆಗಿದ್ದಾರೆ . ನಿಜಕ್ಕೂ ಈ ಒಂದು ಕ್ಷಣ ತುಂಬಾನೆ ಹಾರ್ಟ್ ಟಚಿಂಗ್ ಆಗಿದೆ. ಪತ್ನಿ ಕೂಡ ಬಂದು ಧನರಾಜ್ರನ್ನ ಸಿಕ್ಕಾಪಟ್ಟೆ ಪ್ರೀತಿಯಿಂದ ಹೊಡೆದಿರೋದು ಮಜವಾಗಿದೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ನಿಧನ ವಾರ್ತೆ22 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್17 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು13 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ23 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
Uncategorized22 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ19 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಮಂಗಳೂರು16 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್15 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ



















