ಮೈಸೂರು
Pratap Simha-ಸಿಎಂ ಸಿದ್ದರಾಮಯ್ಯ ಹೆಸರು ರಸ್ತೆಗಿಡುವ ವಿಚಾರ : ಕೆಲ ದಿನಗಳ ಹಿಂದೆ ಬೆಂಬಲಿಸಿದ್ದ ಪ್ರತಾಪ್ ಸಿಂಹ ಇಂದು ‘ಯೂ’ ಟರ್ನ್
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಲಿದ ಪ್ರತಾಪ್ ಸಿಂಹ ಇಂದು ಯೂ ಟರ್ನ್ ಹೊಡೆದಿದ್ದಾರೆ. ಸಿದ್ದರಾಮಯ್ಯ ಹೆಸರು ರಸ್ತೆಗಿಡುವ ವಿಚಾರವಾಗಿ ಕೆಲ ದಿನಗಳ ಹಿಂದೆ ಮಾತನಾಡಿದ ಪ್ರತಾಪ್ ಸಿಂಹ , ಸಿದ್ದರಾಮಯ್ಯನವರು ಮೈಸೂರಿನ ಸುಪುತ್ರ ಅವರು ಮೈಸೂರಿಗಾಗಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರ ಹೆಸರು ರಸ್ತೆಗಿಡುವುದು ತಪ್ಪಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವವರು ಮೂರ್ಖರು ಎಂದಿದ್ದರು.
ಮೈಸೂರು: ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಲಿದ ಪ್ರತಾಪ್ ಸಿಂಹ ಇಂದು ಯೂ ಟರ್ನ್ ಹೊಡೆದಿದ್ದಾರೆ.
ಸಿದ್ದರಾಮಯ್ಯ ಹೆಸರು ರಸ್ತೆಗಿಡುವ ವಿಚಾರವಾಗಿ ಕೆಲ ದಿನಗಳ ಹಿಂದೆ ಮಾತನಾಡಿದ ಪ್ರತಾಪ್ ಸಿಂಹ , ಸಿದ್ದರಾಮಯ್ಯನವರು ಮೈಸೂರಿನ ಸುಪುತ್ರ ಅವರು ಮೈಸೂರಿಗಾಗಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರ ಹೆಸರು ರಸ್ತೆಗಿಡುವುದು ತಪ್ಪಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವವರು ಮೂರ್ಖರು ಎಂದಿದ್ದರು.
ಆದರೆ ಸಂಸದ ಒಡೆಯರ್ ಸಹಿತ ಹಲವು ನಾಯಕರು ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವುದನ್ನು ವಿರೋಧಿಸಿದ ತಕ್ಷಣ ಪ್ರತಾಸ್ ಸಿಂಹ ಕೂಡ ವಿರೋಧಿಸಿದ್ದಾರೆ.
ಸಿದ್ದರಾಮಯ್ಯನವರೇ ಕಳಂಕಿತರು, ಅವರ ಸಂಪುಟದಲ್ಲಿರುವವರು ಕಳಂಕಿತರು. ಸಿದ್ದರಾಮಯ್ಯನವರಿಗೆ ಲಜ್ಜೆ ಇಲ್ಲ, ಸಿದ್ದರಾಮಯ್ಯನವರೇ ಪತ್ನಿಯ ಹೆಸರಲ್ಲಿ 14 ಸೈಟುಗಳನ್ನು ಪಡೆದಿದ್ದಾರೆ. ಅವರ ಮಂತ್ರಿಗಳು ಸಹ ನಮ್ಮನ್ನೇನು ಮಾಡುವುದಿಲ್ಲ ಎಂದು ಭ್ರಷ್ಟಾಚಾರ ಮಾಡ್ತಾ ಇದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ. ನಾಳೆ ಬೆಳಿಗ್ಗೆ ಚುನಾವಣೆ ನಡೆದರೂ ನೀವು ನಿರ್ನಾಮ ಆಗುತ್ತೀರಾ. ಸಿದ್ದರಾಮಯ್ಯ ಹಗರಣದಲ್ಲಿ ಸಿಲುಕಿದ್ದಾರೆ. ಹೆಂಡತಿ ಹೆಸರಿನಲ್ಲಿ ಸೈಟ್ ಪಡೆದಿದ್ದಾರೆ. ನಮ್ಮದೇನು ಅನ್ನೋ ರೀತಿ ಆಗಿದೆ. ಬೋಫೋರ್ಸ್ ಹಗರಣದಲ್ಲಿ ಪ್ರಧಾನಿ ಸಿಲುಕಿದ ಮೇಲೆ, ಗ್ರಾಮ ಪಂಚಾಯಿತಿ ಅವರು ಲೂಟಿ ಮಾಡಿದರು. ಮೊದಲು ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬೇಕು.
ಭಂಡತನದಿಂದ ಮುಂದುವರೆದರೆ ಅವರ ಸಚಿವರು ಸಹ ಭಂಡತನ ಪ್ರದರ್ಶನ ಮಾಡುತ್ತಾರೆ. ರಾಜ್ಯವನ್ನು ಲೂಟಿ ಮಾಡುತ್ತಾರೆ ಎಂದು ಹೇಳಿದರು. ಸಿಎಂಗೆ ಲಜ್ಜೆ ಇಲ್ಲ ಅಂದ ಮೇಲೆ ಅವರ ಸಚಿವರಿಗೆ ಲಜ್ಜೆ ಇರುತ್ತಾ? ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ, ಹೀಗಾಗಿ ಅವರ ಹೆಸರನ್ನು ಬೇರೆ ಎಲ್ಲೂ ಇಡುವ ಅವಶ್ಯಕತೆ ಇಲ್ಲ. ನಿಮ್ಮ ಹೆಸರಿನಲ್ಲೇ ಮೈಸೂರಿನಲ್ಲಿ ವೃತ್ತ ಇದೆ. ಹಾಸ್ಟೆಲ್ ಒಂದಕ್ಕೆ ನಿಮ್ಮ ಹೆಸರನ್ನು ಇಡಲಾಗಿದೆ. ಈಗಾಗಲೇ ಹೆಸರಿರುವ ರಸ್ತೆಗೆ ನಿಮ್ಮ ಹೆಸರಿಡುವ ಅವಶ್ಯಕತೆ ಇಲ್ಲ. ಈ ವಿಚಾರವಾಗಿ ನಮಗೆ ಸಿಎಂ ಮನೆ ಬಾಗಿಲು ತಟ್ಟುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಕಾನೂನು ಪದವೀಧರರು, ಅವರಿಗೆ ಕಾನೂನಿನ ಅರಿವು ಇರಬೇಕು. ಮೈಸೂರಿನ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗೊತ್ತಿದೆ. ಮಹಾರಾಜರ ಋಣದಲ್ಲಿ ನಾವೆಲ್ಲಾ ಇದ್ದೇವೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿದ ವಿವಿಯಲ್ಲೇ ಸಿದ್ದರಾಮಯ್ಯ ಪದವಿ ಪಡೆದಿದ್ದು. ಅವರು ಕಟ್ಟಿಸಿದ ಡ್ಯಾಂ ನೀರನ್ನೇ ಸಿದ್ದರಾಮಯ್ಯ ಕುಡಿಯುತ್ತಿರುವುದು. ಅನ್ನ, ವಿದ್ಯೆ, ಕುಡಿಯುವ ನೀರಿನ ಋಣ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized19 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ20 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized5 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















