Connect with us

ಅಪರಾಧ

Vitla-ವಿಟ್ಲ : ಈ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸಿನಿಮೀಯ ಶೈಲಿಯಲ್ಲಿ ಹಣ ದೋಚಿದ ಪ್ರಕರಣ – ಇಡೀ ಘಟನೆಯ ಸಂಪೂರ್ಣ ಡಿಟೈಲ್ ಇಲ್ಲಿದೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ED ಅಧಿಕಾರಿಗಳ ಸೋಗಿನಲ್ಲಿ ಬಂದ ತಂಡವು ವಿಟ್ಲ ಸಮೀಪದ ಬೋಳಂತೂರಿನ ಉದ್ಯಮಿಯೊಬ್ಬರ ಮನೆಯಿಂದ ಹಣ ದೋಚಿದ ಪ್ರಕರಣದಲ್ಲಿ ಮತ್ತಷ್ಟೂ ಸ್ಪೋಟಕ ಮಾಹಿತಿ ಲಭಿಸಿದೆ. ಅಕ್ಷಯ್ ಕುಮಾರ್ ನಟನೆಯ ಹಿಂದಿ ಸಿನಿಮಾ ಸ್ಪೇಷಲ್ -26 ಮಾದರಿಯಲ್ಲಿ ಈ ದರೋಡೆ ನಡೆದಿದ್ದೂ. ಕಾರಿನಲ್ಲಿ ಬಂದ 6 ಮಂದಿ ದಢೂತಿ ಕಾಯದ ವ್ಯಕ್ತಿಗಳು ಸರಿ ಸುಮಾರು ಎರಡೂವರೆ ಗಂಟೆಗಳ ಕಾಲ ತನಿಖೆಯ ನೆಪದಲ್ಲಿ ಸುಲೈಮಾನ್ ಹಾಜಿ ಅವರ ಮನೆಯ ಇಂಚಿಂಚು ಜಾಲಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ವೇಳೆ ಮನೆಯಲ್ಲಿ ಊಹೆಗೂ ನಿಲುಕದಷ್ಟು ನಗದು ಹಾಗೂ ಬಂಗಾರ ಸಿಕ್ಕಿದೆ ಎನ್ನಲಾಗಿದೆ. ಉದ್ಯಮಿಯ ಬಳಿ ಇತ್ತೀಚೆಗಷ್ಟೇ ಅಡಿಕೆ ಮಾರಿದ ಹಣ, ಬೀಡಿ ಕಾರ್ಮಿಕರಿಗೆ ನೀಡಬೇಕಾದ ಪ್ರೋತ್ಸಾಹಕ ಧನ ಮತ್ತು ವಾರದ ಸಂಬಳವಿತ್ತು. ಇದರ ಜತೆಗೆ ಅವರು ಇತ್ತೀಚೆಗೆ ಮಾರಾಟ ಮಾಡಿದ ಜಮೀನಿನ ಹಣವು ಮನೆಯಲ್ಲಿತ್ತು ಎಂದು ಹೇಳಲಾಗುತ್ತಿದ್ದು ಅಧಿಕೃತವಾಗಿ ದೃಢಪಟ್ಟಿಲ್ಲ. ಇದು ನಿಜವಾಗಿದ್ದರೇ ಖದೀಮರು ದೋಚಿದ ಹಣ ಹಲವು ಕೋಟಿಗಳನ್ನು ದಾಟಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪಕ್ಕಾ ಮಾಹಿತಿ ಹೊಂದಿದ್ದ ಪರಿಚಿತರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ.

Ad Widget

Ad Widget <> Ad Widget

ಬೆಕ್ಕಸ ಬೆರಗಾದ ಖದೀಮರು!
ಸಾಮಾಜಿಕ ಮಾಧ್ಯಮಗಳಲ್ಲಿ ದೋಚಲ್ಪಟ್ಟ ಹಣದ ಪ್ರಮಾಣ ಲಕ್ಷಗಳಲ್ಲಿ ಪ್ರಕಟವಾದರೂ ಅದರ ಹತ್ತರಿಂದ 15 ಪಟ್ಟು ಅಧಿಕ ಹಣ ನಕಲಿ ತಂಡದ ಪಾಲಾಗಿದೆ ಎಂದು ತಿಳಿದು ಬಂದಿದೆ.ಒಂದು ಮೂಲದ ಪ್ರಕಾರ , ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಕ್ಯಾಶ್ ನೋಡಿ ದುಷ್ಕರ್ಮಿಗಳು ಬೆಕ್ಕಸ ಬೆರಗಾಗಿದ್ದಾರೆ. ಹಲವು ಮೂಟೆಗಳಲ್ಲಿ ಈ ಹಣವನ್ನು ತುಂಬಿಸಿ ಅವರು ಕಾರಿನಲ್ಲಿ ಸಾಗಿಸಿದ್ದು, ಅಷ್ಟೇ ಮೌಲ್ಯದ ಚಿನ್ನಾಭರಣಗಳು ಮನೆಯಲ್ಲಿದ್ದರೂ, ಸಾಗಿಸಲು ಕಾರಿನಲ್ಲಿ ಜಾಗವಿಲ್ಲದ ಕಾರಣ ಬಿಟ್ಟು ಹೋಗಿರುವುದಾಗಿ ತಿಳಿದು ಬಂದಿದೆ.

ಸಿಸಿಟಿವಿ ಇಲ್ಲ
ಸುಲೈಮನ್ ಹಾಜಿಯವರು ಕಳೆದ ಹಲವಾರು ವರ್ಷಗಳಿಂದ ಸಿಂಗಾರಿ ಬೀಡಿ ಎಂಬ ಬೀಡಿ ತಯಾರಿಕ ಕಂಪೆನಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಇದರ ಜತೆಗೆ ಅಡಿಕೆ ಕೃಷಿಯನ್ನು ಹೊಂದಿದ್ದು, ನಾರ್ಶದ ಬಹುಪಾಲು ಜಮೀನು ಅವರ ಕುಟುಂಬಕ್ಕೆ ಸೇರಿದಾಗಿದೆ. ಇದಲ್ಲದೇ ಹೊರ ಊರಿನಲ್ಲೂ ತೋಟ, ವಾಣಿಜ್ಯ ಸಂಕೀರ್ಣ ಹೊಂದಿದ್ದಾರೆ. ಇತ್ತೀಚೆಗಷ್ಟೇ ಅವರು ಸುಮಾರು 4 ಕೋಟಿ ಮೌಲ್ಯದ ಮನೆ ಕಟ್ಟಿಸಿದ್ದರು. ಆದರೇ ಐಷರಾಮಿ ಮನೆ ಹಾಗೂ ಕೋಟ್ಯಾಂತರ ರೂಪಾಯಿ ನಗದು ಹಾಗೂ ಬಂಗಾರ ಮನೆಯಲ್ಲಿದ್ದರೂ, ಮನೆಯೊಳಗಡೆ ಯಾ ಹೊರಗಡೆ ಸಿಸಿಟಿವಿ ಆಳವಡಿಸಿಲ್ಲ ಎನ್ನುವುದು ಅಚ್ಚರಿಗೆ ಕಾರಣವಾಗಿದೆ. ಹೀಗಾಗಿ ದ ದುಷ್ಕರ್ಮಿಗಳು ಯಾವುದೇ ಅಳುಕಿಲ್ಲದೇ 150 ಕ್ಕೂ ಅಧಿಕ ನಿಮಿಷಗಳ ಕಾಲ ಮನೆಯಲ್ಲಿ ವ್ಯಯಿಸಿ ರಾಜರೋಷವಾಗಿ ಕೃತ್ಯ ಎಸಗಿ ತೆರಳಿದ್ದಾರೆ.

Ad Widget

Ad Widget

ಶ್ರೀಮಂತ ಕುಳ
ಸುಲೈಮನ್ ಹಾಜಿಯವರ ಮನೆಯೂ ವಿಟ್ಲ – ಕಲ್ಲಡ್ಕ ರಸ್ತೆಯಲ್ಲಿ ಬರುವ ಬೋಳಂತೂರು ಜಂಕ್ಷನ್ ನಿಂದ 3 ರಿಂದ 4 ಕಿಮೀ ದೂರದಲ್ಲಿದೆ. ನಾರ್ಶ ಕೋಡಪದವು ಸಂಪರ್ಕ ರಸ್ತೆಯ ಅಂಚಿನಲ್ಲಿ ಮನೆಯಿದ್ದು, ಸುತ್ತ ಅಡಿಕೆ ತೋಟವಿದೆ. 20 ಎಕ್ರೆಗೂ ಮಿಕ್ಕಿ ಜಮೀನು ಹೊಂದಿದ್ದು, ಅವರ ಮನೆ ಎದುರು ಮೂರು ಅಂಗಳವಿದೆ. ಅದರಲ್ಲಿ ಹೇರಳವಾಗಿ ಅಡಿಕೆ ಒಣಗಲು ಹಾಕಲಾಗಿದೆ. ಹಳೇ ಮನೆ ಹಾಗೂ 4 ಕೋಟಿ ಮೌಲ್ಯದ ಹೊಸಮನೆ ಅಕ್ಕ ಪಕ್ಕದಲ್ಲಿದೆ.

ನಿನ್ನೆ ಸಂಜೆ ಏನಾಯಿತು ?
ಶುಕ್ರವಾರ ಸಂಜೆ 7.30ರ ಸುಮಾರಿಗೆ ಬಿಳಿ ಬಣ್ಣದ ಕಾರೊಂದು ಮನೆಯಿಂದ ತುಸು ದೂರದಲ್ಲಿ ಅಂಗಳದಲ್ಲಿ ಬಳಿ ನಿಂತು ಮತ್ತೆ ವಾಪಸ್ಸು ಹೋಗಿದೆ. ಇದನ್ನು ಮನೆಯವರು ಗಮನಿಸಿದ್ದರೂ, ಯಾರೋ ದಾರಿ ತಪ್ಪಿ ಬಂದು ವಾಪಸು ಹೋಗಿರಬಹುದೆಂದು ಅವರು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಸುಮಾರು ಅರ್ಧ ಗಂಟೆ ಕಳೆದು , ಅಂದಾಜು 8 ಗಂಟೆ ಸುಮಾರಿಗೆ ವಾಪಸ್ಸು ಅದೇ ಕಾರಿನಲ್ಲಿ ಬಂದ ತಂಡ ಸುಲೈಮನ್ ಹಾಜಿಯವರ ಮನೆಯ ಬಾಗಿಲು ಬಡಿದಿದ್ದಾರೆ.

ನಕಲಿ ಐಡಿ ಪ್ರದರ್ಶನ
ಬಾಗಿಲು ತೆರೆದ ವೇಳೆ ಈ.ಡಿ ಅಧಿಕಾರಿಗಳೆಂದು ಹೇಳಿಕೊಂಡ ಅವರು ನಕಲಿ ಐಡಿಯನ್ನು ತೋರಿಸಿದ್ದಾರೆ. ಇವರನ್ನು ನಿಜ ಅಧಿಕಾರಿಗಳೆಂದು ನಂಬಿ ಮನೆಯವರು ಒಳಗೆ ಬಿಟ್ಟುಕೊಂಡಿದ್ದಾರೆ. ಈ ವೇಳೆ ಮನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಸುಲೈಮನ್ ಹಾಜಿ ಹಾಗೂ ಅವರ ಪುತ್ರ ಇದ್ದರೆಂದು ತಿಳಿದು ಬಂದಿದೆ.

ಮೊಬೈಲ್ ವಶಕ್ಕೆ , ಡೋರ್ ಲಾಕ್ !
ಮನೆ ಒಳ ಪ್ರವೇಶಿಸಿದವರೇ ಮನೆಯವರ ಬಳಿಯಿದ್ದ ಎಲ್ಲ ಮೊಬೈಲ್ ಫೋನ್ ಗಳನ್ನು ತಮಗೆ ನೀಡುವಂತೆ ಕೇಳಿ ಪಡೆದುಕೊಂಡು ಸ್ವಿಚ್ಚ್ ಆಫ್ ಮಾಡಿದ್ದಾರೆ. ಅಲ್ಲದೇ ಮನೆಯ ಹಿಂಭಾಗ ಹಾಗೂ ಮುಂಭಾಗದ ಡೋರ್ ಗಳನ್ನು ಕೂಡ ಲಾಕ್ ಮಾಡಿದ್ದಾರೆ. ಈ ಬಳಿಕ ವ್ಯವಹಾರದ ಮಾಹಿತಿ ಕೇಳಲು ಆರಂಭಿಸಿದ ಅವರ ಮನೆಯ ಇಂಚಿಂಚು ಜಾಲಾಡಲು ಆರಂಭಿಸಿದ್ದಾರೆ. ಅಲ್ಮೇರಾಗಳನ್ನು ತೆರೆದು ಅದರಲ್ಲಿದ್ದ ಚಿನ್ನ ಹಾಗೂ ಹಣವನ್ನು ಒಂದು ಕಡೆ ರಾಶಿ ಹಾಕಿದ್ದಾರೆ. ಮನೆಯಲ್ಲಿದ್ದ ಕಾಟ್ ಅನ್ನು ಒಡೆದು ಅದರೊಳಗಡೆ ನಗ ನಗದು ಬಚ್ಚಿಟ್ಟಿದ್ದಾರೆಯೇ ಎಂದು ಶೋಧಿಸಿರುವುದಾಗಿ ತಿಳಿದು ಬಂದಿದೆ.

ದಿಲ್ಲಿ ಹೆಡ್ ಆಪೀಸ್ ಗೆ ಕಾಲ್
ಅವರು ಹಿಂದಿ ಇಂಗ್ಲೀಷ್ ಹಾಗೂ ಕನ್ನಡ ಹೀಗೆ ವಿವಿಧ ಭಾಷೆಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗುತ್ತಿದ್ದೆ. ಎರಡು ಮೂರು ಬಾರಿ ದಿಲ್ಲಿ ಹೆಡ್ ಆಪೀಸ್ ಜತೆ ಮಾತನಾಡುವುದಾಗಿ ತಿಳಿಸಿ ಹಿಂದಿಯಲ್ಲಿ ಮಾತನಾಡುವಂತೆ ನಟಿಸಿದ್ದಾರೆ. ಅವರು ಕರೆಯಲ್ಲಿ ಮಾತನಾಡಿದಂತೆ ನಟಿಸಿರಬಹುದೇ ಹೊರತು ಟವರ್ ಲೊಕೇಷನ್ ಸಿಗುವ ಹಿನ್ನಲೆಯಲ್ಲಿ ಫೋನ್ ಕಾಲ್ ಮಾಡಿರುವ ಸಾಧ್ಯತೆ ಇಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೊರಡುವಾಗ ಮತ್ತೊಂದು ನಾಟಕ !
ಎರಡೂವರೆ ಗಂಟೆಯ ಹುಡುಕಾದ ವೇಳೆ ಮನೆಯಲ್ಲಿ ಅಪಾರ ಪ್ರಮಾಣದ ಹಣ ಮತ್ತು ಚಿನ್ನ ಸಿಕ್ಕಿದ್ದು, ಇದರಲ್ಲಿ ಕೇವಲ ನಗದನ್ನು ಮಾತ್ರ ಅವರು ದೋಚಿಕೊಂಡು ಹೋಗಿದ್ದಾರೆ. ಹಣವನ್ನು ಕೊಂಡು ಹೋಗುವ ವೇಳೆ ತನಿಖೆ ನಡೆಸಿದ ಬಳಿಕ ಅದನ್ನು ಹಿಂತಿರುಗಿಸುವುದಾಗಿ ತಿಳಿಸಿದ ತಂಡವು, ತಾವು ಬಿಸಿರೋಡಿನಲ್ಲಿ ತಂಗಿರುವುದಾಗಿ ಹೇಳಿದ್ದಾರೆ. ಅಲ್ಲಿಯವರೆಗೆ ತಮ್ಮನ್ನು ಬೇರೆ ವಾಹನದಲ್ಲಿ ಫಾಲೋ ಮಾಡಿಕೊಂಡು ಬರುವಂತೆ ಕೂಡ ತಿಳಿಸಿದ್ದಾರೆ. ಅದರಂತೆ ಸುಲೈಮನ್ ಅವರು ತಮ್ಮ ಕಾರಿನಲ್ಲಿ ಹಾಗೂ ಅವರ ಪುತ್ರ ದ್ವಿ ಚಕ್ರ ವಾಹನದಲ್ಲಿ ದುಷ್ಕರ್ಮಿಗಳ ಕಾರನ್ನು ಫಾಲೋ ಮಾಡಿಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಾತ್ರೋ ರಾತ್ರಿ ಮಾಹಿತಿ
ದಾರಿ ಮಧ್ಯೆ ದುಷ್ಕರ್ಮಿಗಳು ಶರವೇಗದಲ್ಲಿ ತಮ್ಮ ವಾಹನವನ್ನು ಓಡಿಸಿ ತಂದೆ ಮತ್ತು ಮಗನ ಕಣ್ಣುಗಳಿಂದ ತಪ್ಪಿಸಕೊಂಡು ಪರಾರಿಯಾಗಿದ್ದರೆ. ಈ ವೇಳೆ ತಾವು ಮೋಸ ಹೋದ ಅರಿವಾದ ಅವರು, ರಾಜ್ಯ ಸರಕಾರದ ಅಧೀನದ ತನಿಖಾ ಸಂಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವ ತಮ್ಮ ಸಂಬಂಧಿಕರೊಬ್ಬರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಅವರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ರಾತ್ರಿ 11 ಗಂಟೆ ಸುಮಾರಿಗೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಅಯಕಟ್ಟಿನ ಸ್ಥಳಗಳಲ್ಲಿ ನಾಕಾಬಂದಿ ನಡೆಸಿದ್ದಾರೆ .

ಬಳಕೆಯಾಗದ ಶ್ವಾನದಳ
ಬೆರಳಚ್ಚು ತಜ್ಞರು, ವಿಧಿ ವಿಜ್ಞಾನ ಇಲಾಖೆಯ ಸಿಬ್ಬಂದಿಗಳು ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿದೆ . ಆದರೇ ಶ್ವಾನದಳಕ್ಕೆ ಮನೆಯವರು ಒಳಗೆ ಕರೆದುಕೊಂಡು ಹೋಗಲು ಅನುಮತಿ ನೀಡದ ಹಿನ್ನಲೆಯಲ್ಲಿ ಅದನ್ನು ಶೋಧ ಕಾರ್ಯಚರಣೆಯಲ್ಲಿ ಬಳಸಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ.

Ad Widget
Click to comment

Leave a Reply

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!