ನಿಧನ ವಾರ್ತೆ
Sanjeev Poojary Kuremajalu-ಮುಂಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ನಿಧನ
ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ಜ.3ರಂದು ನಿಧನರಾಗಿದ್ದಾರೆ. ಜ.2ರಂದು ಸಂಜೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಕುರೆಮಜಲು ಜ.3ರಂದು ನಿಧನರಾಗಿದ್ದಾರೆ.
ಜ.2ರಂದು ಸಂಜೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಜ.3ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಸಂಜೀವ ಪೂಜಾರಿಯವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಶಿಕ್ಷಣ24 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು24 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಅಪರಾಧ24 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















