Connect with us

ಬಿಗ್ ನ್ಯೂಸ್

ಆರ್ಥಿಕ ಸ್ವಾವಲಂಬಿತನ ಬದುಕಿನ ಅಭಿವೃದ್ಧಿಗೆ ಪೂರಕವಾಗುತ್ತದೆ :ಡಾ|ನಿರ್ಮಲಾನಂದನಾಥ ಸ್ವಾಮೀಜಿ | ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ – ನೂತನ ಸಭಾಭವನವನ್ನು ಲೋಕಾರ್ಪಣೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ದೇಶಕ್ಕೆ ಶಕ್ತಿ ತುಂಬುವ ಕಾರ್ಯ ಪ್ರತಿಯೊಬ್ಬರಿಂದ ನಡೆಯಬೇಕಾಗಿದೆ. ಜನಾಂಗಳು ಉದ್ಧಾರವಾದಾಗ ದೇಶ ಪ್ರಗತಿಗೊಳ್ಳುತ್ತದೆ. ದೇಶ ಸೇವೆ ಹಾಗೂ ನಾಡನ್ನು ಕಟ್ಟು ಕಾರ್ಯಕ್ಕೆ ಒಕ್ಕಲಿಗ ಸಮುದಾಯದ ಕೊಡುಗೆ ಅಪಾರವಾಗಿದೆ. ಆರ್ಥಿಕ ಸ್ವಾವಲಂಬಿತನ ಬದುಕಿನ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

Ad Widget

Ad Widget

Ad Widget

Ad Widget

ತೆಂಕಿಲ ಗೌಡ ಸಮುದಾಯಭವನದಲ್ಲಿ ಶನಿವಾರ ಪುತ್ತೂರು ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಅಂಗವಾಗಿ ನೂತನ ಸಭಾಭವನವನ್ನು ಲೋಕಾರ್ಪಣೆಗೊಳಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

 ಸ್ವಸಹಾಯ ಯೋಜನೆಯನ್ನು ವಿಸ್ತರಣೆ ಮಾಡುವ ಕೆಲಸ ಮಾಡಬೇಕಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಿಕೆಯಿದ್ದಾಗ ಸಮುದಾಯ ಪೂರ್ಣ ಪ್ರಮಾಣದಲ್ಲಿ ಹರಡಿಕೊಳ್ಳಲು ಸಾಧ್ಯವಾಗುತ್ತದೆ. ಒಕ್ಕಲಿಗ ಸಮುದಾಯದಿಂದಲೂ ಜ್ಞಾನಿಗಳು, ವಿಜ್ಞಾನಿಗಳು ಸಾಹಿತಿಗಳು ಸಹಿತ ವಿವಿಧ ಕ್ಷೇತ್ರಗಳಿಂದ ಸಾಧಕರು ಬರಬೇಕು ಎಂದರು 

Ad Widget

Ad Widget <> Ad Widget

ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಡಾ. ಧರ್ಮಪಾಲನಾಥ ಶ್ವಾಮೀಜಿ ಆಶೀರ್ವಚನ ನೀಡಿ “ಪುತ್ತೂರಿನ ಒಕ್ಕಲಿಗ ಸಂಘಟನೆ ಸಮಾಜದ ರ‍್ವ ಸಂಘಟನೆಗಳಿಗೂ ಮಾದರಿ. ಸ್ವಸಹಾಯ ಟ್ರಸ್ಟ್ ನ ಹಿರಿಯ ಆರ‍್ಶ ದಂಪತಿಗಳ ಮನೆಗೆ ತೆರಳಿ ಅವರ ಹೃದಯವನ್ನು ತಟ್ಟುವ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.



Ad Widget

 ಬದುಕು ಅರ್ಥಹೀನವಾಗದಂತೆ ಮನುಷ್ಯ ಜೀವನಾನ್ವೇಷನೆಗೆ ಮೊದಲ ಆದ್ಯತೆ ನೀಡಬೇಕು. ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ಮಿಮತೆಯನ್ನು ಉಳಿಸಿಕೊಳ್ಳುವ ಕೆಲಸಕ್ಕೆ ಸಂಘಟನೆಗಳು ಆಸಕ್ತಿವಹಿಸಬೇಕಾಗಿದೆ. ಆಧುನಿಕ ಆವಿಷ್ಕಾರಗಳ ನಡುವೆ ಕಲ್ಮಷಗೊಳ್ಳುತ್ತಿರುವ ಮನಸ್ಸುಗಳಿಗೆ ಹಿರಿಯರ ಮಾರ್ಗದರ್ಶನ ಅತೀ ಅಗತ್ಯ. ಪುತ್ತೂರು ಒಕ್ಕಲಿಗ ಸಂಘ ಸ್ವಸಹಾಯ, ಸಹಕಾರಿ ಸಂಘಗಳ ಮೂಲಕ ಸಮಾಜಕ್ಕೆ ಮಾದರಿಯಾಗಿ ನಿಂತಿದೆ ಎಂದರು.

Ad Widget

Ad Widget

ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಘಟಕದ ರಾಜ್ಯಾಧ್ಯಕ್ಷೆ ಡಾ.ಶಾಂತ ಸುರೇಂದ್ರ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕ ನ್ಯಾಯವಾದಿ ಮೋಹನ್ ಗೌಡ ಇಡ್ಯಡ್ಕ, ಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ  ಸುರೇಶ್ ಬೈಲು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ, ಟ್ರಸ್ಟ್ ಅಧ್ಯಕ್ಷ ಡಿ ವಿ ಮನೋಹರ್ ಮಾತನಾಡಿದರು.

ಉದ್ಯಮಿ ಕುಶಾಲಪ್ಪ ಗೌಡ, ನಿವೃತ್ತ ಶಿಕ್ಷಕಿ ವಸಂತಿ, ರಾಷ್ಟçಮಟ್ಟದ ಕ್ರೀಡಾಪ್ರತಿಭೆ ಕೀರ್ತಿ ಗುಮ್ಮಟೆಗದ್ದೆ ಅವರನ್ನು ಸನ್ಮಾನಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಸ್ವಾಮೀಜಿ ಗೌರವಿಸಿದರು.

ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಕೆ ಎಸ್,  ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಗೌಡ ಮಹಿಳಾ ಸಂಘದ ಅಧ್ಯಕ್ಷ ವಾರಿಜ ಕೆ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ್, ಟ್ರಸ್ಟ್ ನ ಕಾರ್ಯದರ್ಶಿ ದಿವ್ಯಪ್ರಸಾದ್, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಕೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಸಂಜೀವ ಮಠಂದೂರು ಸ್ವಾಗತಿಸಿ, ಪ್ರಸ್ತಾವನೆಗೈದರು. ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ರವಿ ಮುಂಗ್ಲಿಮನೆ ವಂದಿಸಿದರು. ವಸಂತ ವೀರಮಂಗಲ ಮತ್ತು ಸೀತಾರಾಮ ಕೇವಳ ಕಾರ್ಯಕ್ರಮ ನಿರೂಪಿಸಿದರು. 

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on



Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.



Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಅಂತರ ರಾಜ್ಯ

Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್

Published

on



Ad Widget

Ad Widget

Ad Widget

Ad Widget

ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.



Ad Widget

ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading