ಶಿಕ್ಷಣ
Scholarships-ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಹಲವು ಸ್ಕಾಲರ್‌ಷಿಪ್; ಇಲ್ಲಿದೆ ಉಪಯುಕ್ತ ಮಾಹಿತಿ…
ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಹಲವು ಸ್ಕಾಲರ್‌ಷಿಪ್ ಸೌಲಭ್ಯಗಳಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ವಿದ್ಯಾರ್ಹತೆ ಕುರಿತ ಹಲವು ಉಪಯುಕ್ತ ಮಾಹಿತಿ…
ಕೋಟಕ್ ವಿದ್ಯಾರ್ಥಿವೇತನ:
ಕೋಟಕ್ ಎಜುಕೇಶನ್ ಫೌಂಡೇಷನ್ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದ್ದು ಈ ಸೌಲಭ್ಯ ಭಾರತದಾದ್ಯಂತದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಲಭ್ಯವಿರಲಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 75 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು ಅಥವಾ ತತ್ಸಮಾನ ಸಿಜಿಪಿಎಯನ್ನು ಗಳಿಸಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ. 6,00,000ಕ್ಕಿಂತ ಕಡಿಮೆ ಇರಬೇಕು.
ಮಾನ್ಯತೆ ಪಡೆದ ಎನ್‌ಆರ್‌ಎಫ್/ ಎನ್‌ಎಎಸಿಯಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ 2024-25 ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್‌ಎಲ್‌ಬಿ (5 ವರ್ಷಗಳು), ಬಿ.ಎಸ್‌ಸಿ ನರ್ಸಿಂಗ್, ಬಿ.ಫಾರ್ಮಸಿ, ಇಂಟಿಗ್ರೇಟೆಡ್ ಬಿಎಸ್-ಎಂಎಸ್/ಬಿಎಸ್- ರಿಸರ್ಚ್ ಇನ್ ಐಎಸ್‌ಇಆರ್, ಐಐಎಸ್‌ಸಿ (ಬೆಂಗಳೂರು) ಅಥವಾ (ಡಿಸೈನ್, ಆರ್ಕಿಟೆಕ್ಟರ್, ಇತ್ಯಾದಿ) ಇತರ ವೃತ್ತಿಪರ ಕೋರ್ಸ್‌ಗಳಿಗೆ ಮೊದಲ ವರ್ಷದ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನದ ಸದುಪಯೋಗ ಪಡೆದುಕೊಳ್ಳಬಹುದು
ಆರ್ಥಿಕ ನೆರವು: ವರ್ಷಕ್ಕೆ ರೂ. 1.5 ಲಕ್ಷ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಮಾಹಿತಿಗಾಗಿ: http://www.b4s.in/pjvi/KKGS3
ಆಮ್ರಾನ್ ಹೆಲ್ತ್‌ಕೇರ್ ವಿದ್ಯಾರ್ಥಿವೇತನ:
ಆಮ್ರಾನ್ ಹೆಲ್ತ್‌ಕೇರ್ ಇಂಡಿಯಾ ಯಾವುದೇ ಶಾಲೆಯಲ್ಲಿ 9ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಥಿನಿಯರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ 75ರಷ್ಟು ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ. 8,00,000ಕ್ಕಿಂತ ಕಡಿಮೆಯಿರಬೇಕು.
ಆರ್ಥಿಕ ನೆರವು: ರೂ. 20,000 ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸಲು ಕೊನೆ ದಿನ: 10-01-2025ಆನ್‌ಲೈನ್
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ
ಮಾಹಿತಿಗಾಗಿ: http://www.b4s.in/pjvi/OMHS2
ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಷಿಪ್:
ಟಾಟಾ ಕ್ಯಾಪಿಟಲ್ ಲಿಮಿಟೆಡ್ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಿದೆ. ಪ್ರಸ್ತುತ 11, 12ನೇ ತರಗತಿಗಳಲ್ಲಿರುವ, ಪದವಿ (ಬಿ.ಕಾಂ.,ಬಿ.ಎಸ್‌ಸಿ, ಬಿಎ ಇತ್ಯಾದಿ), ಡಿಪ್ಲೊಮಾ ಮತ್ತು ಐಟಿಐ ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಿಂದಿನ ತರಗತಿಯಲ್ಲಿ ಕನಿಷ್ಠ ಶೇ. 60 ಅಂಕಗಳನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ. 2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ರೂ. 10,000 ರಿಂದ ರೂ. 12,000ದ ವರೆಗಿನ ಮೊತ್ತ ಅಥವಾ ಕೋರ್ಸ್ ಶುಲ್ಕದ ಶೇ 80.
ಅರ್ಜಿ ಸಲ್ಲಿಸಲು ಕೊನೆ ದಿನ: 15-01-2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಮಾಹಿತಿಗಾಗಿ: http://www.b4s.in/pjvi/TCPS27
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು15 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ18 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್13 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಸ್ಥಳೀಯ20 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ13 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಬಿಗ್ ನ್ಯೂಸ್20 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು14 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ15 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















