ಬಿಗ್ ನ್ಯೂಸ್
Puttur-ಆನ್ ಲೈನ್ ನಲ್ಲಿ ಖರೀದಿಸಿ ಕಳೆದುಹೋದ ಮೊಬೈಲನ್ನು ಮಾಲಕರಿಗೆ ತಲುಪಿಸಿದ ಪುತ್ತೂರು ಮೊಬೈಲ್ ರಿಟೈಲರ್ ಅಸೋಸಿಯೇಷನ್ ..!
ಪುತ್ತೂರು ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲರೋರ್ವರು ಆನ್ ಲೈನ್ ನಲ್ಲಿ ಖರೀದಿಸಿದ ಸ್ಯಾಮ್ಸಂಗ್ ಎಸ್23 ಮೊಬೈಲ್ ಪಡೀಲ್ ದರ್ಬೆ ಮಾರ್ಗ ಮದ್ಯೆ ಕಳೆದು ಹೋಗಿತ್ತು. ಇಂದು ಬೆಳಿಗ್ಗೆ ಮಾಶಲ್ ನಶತ್ ಎಂಬ ಯುವಕನೋರ್ವರಿಗೆ ಮೊಬೈಲ್ ಮಾರ್ಗ ಮದ್ಯೆ ದೊರೆತಿದ್ದು ಅವರು ಪ್ರಾಮಾಣಿಕವಾಗಿ ಆ ಮೊಬೈಲನ್ನು ಪುತ್ತೂರು ಎಂ ಟಿ ರಸ್ತೆಯಲ್ಲಿರುವ ನ್ಯೂ ಸೆಲ್ ಸೈಟ್ ಸಂಸ್ಥೆಯ ಮಾಲಕರಾದ ಸಲ್ಮಾನ್ ಫಾರಿಸ್ ಅವರಿಗೆ ತಂದೊಪ್ಪಿಸಿದ್ದರು.
ಪುತ್ತೂರು: ಪುತ್ತೂರು ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲರೋರ್ವರು ಆನ್ ಲೈನ್ ನಲ್ಲಿ ಖರೀದಿಸಿದ ಸ್ಯಾಮ್ಸಂಗ್ ಎಸ್23 ಮೊಬೈಲ್ ಪಡೀಲ್ ದರ್ಬೆ ಮಾರ್ಗ ಮದ್ಯೆ ಕಳೆದು ಹೋಗಿತ್ತು.
ತಕ್ಷಣ ಅವರು ಪುತ್ತೂರಿನ ಮಾರ್ಕ್ ಟೆಲಿಕಾಂ ಸಂಸ್ಥೆಯ ಮಾಲಕರಾದ ಶಶಿರಾಜ್ ರೈ ಅವರಲ್ಲಿ ಈ ವಿಷಯವನ್ನ ತಿಳಿಸಿದರು.
ಶಶಿರಾಜ್ ರೈಯವರು ರಿಟೇಲರ್ ಅಸೋಸಿಯೇಶನ್ ನ ವಾಟ್ಸಾಪ್ ಗ್ರೂಪಿನಲ್ಲಿ ಈ ಬಗ್ಗೆ ವಿವರಣೆಯನ್ನು ನೀಡಿದ್ದರು.
ಇಂದು ಬೆಳಿಗ್ಗೆ ಮಾಶಲ್ ನಶತ್ ಎಂಬ ಯುವಕನೋರ್ವರಿಗೆ ಮೊಬೈಲ್ ಮಾರ್ಗ ಮದ್ಯೆ ದೊರೆತಿದ್ದು ಅವರು ಪ್ರಾಮಾಣಿಕವಾಗಿ ಆ ಮೊಬೈಲನ್ನು ಪುತ್ತೂರು ಎಂ ಟಿ ರಸ್ತೆಯಲ್ಲಿರುವ ನ್ಯೂ ಸೆಲ್ ಸೈಟ್ ಸಂಸ್ಥೆಯ ಮಾಲಕರಾದ ಸಲ್ಮಾನ್ ಫಾರಿಸ್ ಅವರಿಗೆ ತಂದೊಪ್ಪಿಸಿದ್ದರು.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯ
Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ
ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.
ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
-
ಬಿಗ್ ನ್ಯೂಸ್19 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು21 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ20 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು20 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ22 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ22 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ21 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ2 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















