ಬಿಗ್ ನ್ಯೂಸ್
Vitla-ED ಅಧಿಕಾರಿಗಳ ಸೋಗಿನಲ್ಲಿ ವಿಟ್ಲದ ಉದ್ಯಮಿಯ ದರೋಡೆ – ಮನೆಯವರ ಮೊಬೈಲ್ ಪತ್ತೆ?! ಚುರುಕುಗೊಂಡ ತನಿಖೆ – ಮಹತ್ವದ ಸುಳಿವು ಲಭ್ಯ
ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ED ಅಧಿಕಾರಿಗಳ ಸೋಗಿನಲ್ಲಿ ತಂಡವೊಂದು ನಡೆಸಿದ ದರೋಡೆ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದೆ. ಕೃತ್ಯ ನಡೆದ ಮನೆಯಲ್ಲಿ ಹಾಗೂ ಸುತ್ತಮುತ್ತ ಸಿಸಿಟಿವಿ ಅಳವಡಿಸದಿರುವುದು ಪೊಲೀಸರ ತನಿಖೆಗೆ ದೊಡ್ಡ ತೊಡಕಾಗಿ ಪರಿಣಮಿಸಿದೆ.
ವಿಟ್ಲ: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ED ಅಧಿಕಾರಿಗಳ ಸೋಗಿನಲ್ಲಿ ತಂಡವೊಂದು ನಡೆಸಿದ ದರೋಡೆ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದೆ. ಕೃತ್ಯ ನಡೆದ ಮನೆಯಲ್ಲಿ ಹಾಗೂ ಸುತ್ತಮುತ್ತ ಸಿಸಿಟಿವಿ ಅಳವಡಿಸದಿರುವುದು ಪೊಲೀಸರ ತನಿಖೆಗೆ ದೊಡ್ಡ ತೊಡಕಾಗಿ ಪರಿಣಮಿಸಿದೆ.
ಆಪ್ತರ ಕೃತ್ಯ !
ಅಪರಾಧ ಪತ್ತೆಯಲ್ಲಿ ಚಾಣಕ್ಷ್ಯತೆಯನ್ನು ಹೊಂದಿದ್ದ ಹಾಗೂ ಈ ಹಿಂದೆ ಈ ರೀತಿಯ ಪ್ರಕರಣಗಳನ್ನು ಭೇದಿಸಿ ಅನುಭವವಿರುವ ಜಿಲ್ಲೆಯ ವಿವಿಧ ಠಾಣೆಯಲ್ಲಿರುವ ಪೊಲೀಸ್ ಸಿಬ್ಬಂದಿಗಳನ್ನು ವಿಶೇಷ ತನಿಖಾ ತಂಡದಲ್ಲಿ ನಿಯೋಜಿಸಲಾಗಿದ್ದು ಅವರು ಬೇರೆ ಬೇರೆ ಆಯಾಮದಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸುಲೈಮಾನ್ ಹಾಜಿಯವರ ಆಪ್ತ ವಲಯದವರು ಈ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ತನಿಖಾ ತಂಡಕ್ಕೆ ಅನುಮಾನಗಳಿವೆ.
ಸುಲೈಮಾನ್ ಹಾಜಿಯವರ ಮನೆಯಲ್ಲಿದ್ದ ನಗದಿನ ಪ್ರಮಾಣ ಹಾಗೂ ಈಡಿ ಇಲಾಖೆಯ ಬಗ್ಗೆ ಅವರಿಗಿದ್ದ ಭೀತಿಯ ಅರಿವಿದ್ದವರೇ ಈ ಕೃತ್ಯದ ಕಿಂಗ್ ಪಿನ್ ಗಳು ಎಂದು ಹೇಳಲಾಗುತ್ತಿದೆ. ಈಗ FIR ನಲ್ಲಿ ನಮೂದಾಗಿರುವುದಕ್ಕಿಂತ ಎಷ್ಟೋ ಪಟ್ಟು ಹೆಚ್ಚು ಹಣ (ಒಂದು ಅಂದಾಜಿನ ಪ್ರಕಾರ ಕನಿಷ್ಟ 3 ರಿಂದ 5 ಕೋಟಿ) ಆ ಮನೆಯಲ್ಲಿರುವ ಬಗ್ಗೆ ಮಾಹಿತಿ ಹೊಂದಿದ್ದ ವ್ಯಕ್ತಿಯೇ ದರೋಡೆಯ ಸಂಚು ರೂಪಿಸಿದ್ದ ಎನ್ನಲಾಗುತ್ತಿದೆ. ಅಷ್ಟು ಹಣ ಮನೆಯಲ್ಲಿಟ್ಟುಕೊಳ್ಳುವುದು ನಿಯಮ ಬಾಹಿರವಾಗಿರುವುದರಿಂದ, ಇದನ್ನೇ ಬಳಸಿಕೊಂಡು ಉದ್ಯಮಿಯನ್ನು ಟ್ರ್ಯಾಪ್ ಮಾಡಲಾಗಿದೆ ಎನ್ನುವುದು ತಜ್ಞರ ಅಭಿಪ್ರಾಯ. ಕನಿಷ್ಟ 80 ಎಕ್ರೆ ಅಡಿಕೆ ತೋಟ ಹೊಂದಿರುವ ವ್ಯಕ್ತಿಯ ಮನೆಯಲ್ಲಿ ಕೇವಲ 25 ರಿಂದ 30 ಲಕ್ಷ ರೂಪಾಯಿಯಷ್ಟು ಕ್ಯಾಶ್ ಇದ್ದರೆ ಅವರು ಇಡಿ ಅಧಿಕಾರಿಗಳಿಗೆ ಭಯಬೀಳುವ ಅಗತ್ಯ ಇರಲಿಲ್ಲ ಎನ್ನುವ ವಾದವು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಹೀಗಾಗಿ ದೋಚಲ್ಪಟ್ಟ ಹಣದ ಪ್ರಮಾಣದ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಹರಿದಾಡುತ್ತಿವೆ.
ಅಂತರಾಜ್ಯ ಕ್ರಿಮಿನಲ್
ಮಾಹಿತಿದಾರ ನೇರವಾಗಿ ದರೋಡೆಯಲ್ಲಿ ಭಾಗಿಯಾಗದಿದ್ದರೂ, ಆ ವ್ಯಕ್ತಿ ದರೋಡೆಗೆ ಬಂದ ತಂಡಕ್ಕೆ ಈ ಮನೆ ಹಾಗೂ ಉದ್ಯಮಿಯಲ್ಲಿರುವ ಸಂಪತ್ತಿನ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಬಗ್ಗೆ ಪೊಲೀಸರಿಗೆ ಅನುಮಾನವಿದೆ. ಈ ಆಯಾಮದಲ್ಲಿ ತನಿಖಾ ತಂಡ ತನಿಖೆಯನ್ನು ಕೇಂದ್ರಿಕರಿಸಿದೆ ಎನ್ನಲಾಗಿದೆ. ಅಂತರಾಜ್ಯ ಕ್ರಿಮಿನಲ್ ಗಳನ್ನು ಬಳಸಿ ಈ ವ್ಯಕ್ತಿ ದರೋಡೆ ಮಾಡಿಸಿರಬಹುದು ಎಂಬ ಅನುಮಾನದಲ್ಲಿ ಸುಲೈಮಾನ್ ಹಾಜಿಯವರ ಆಪ್ತ ವಲಯದವರ ಮೊಬೈಲ್ ಫೋನ್ ಹಾಗೂ ಚಲನವಲನಗಳ ಬಗ್ಗೆ ತನಿಖಾ ತಂಡ ಮಾಹಿತಿ ಸಂಗ್ರಹಿಸುತ್ತಿದ್ದು, ಮಹತ್ವದ ಸುಳಿವು ಲಭಿಸಿದೆ ಎಂದು ಮೂಲಗಳು ತಿಳಿಸಿವೆ.
ಮೊಬೈಲ್ ಪತ್ತೆ
ದರೋಡೆ ಸಂದರ್ಭ ದುಷ್ಕರ್ಮಿಗಳು ಮನೆಯವರಿಂದ ಪಡೆದುಕೊಂಡಿದ್ದ ಐದು ಮೊಬೈಲ್ ಪೋನ್ ಗಳು ಮನೆಯ ಮಹಡಿಯಲ್ಲಿ ಪತ್ತೆಯಾಗಿದೆ. ಅದರಿಂದ ಸಿಮ್ ತೆಗೆದು, ಸಿಮ್ ಅನ್ನು ತುಂಡರಿಸಿ ಎಸೆದುಹೋಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಸಿಸಿ ಕ್ಯಾಮರಕ್ಕಾಗಿ ತಡಕಾಟ
ಇನ್ನೂ ಬೊಳಂತೂರು ಆಸುಪಾಸಿನಲ್ಲಿ ಯಾವುದೇ ರಸ್ತೆಗೂ ಸಿಸಿ ಕ್ಯಾಮರಾ ಅಳವಡಿಸಿಲ್ಲ. ಕೆಲವೊಂದು ಮನೆಗಳಲ್ಲಿ ಹಾಕಿದ ಸಿಸಿ ಕ್ಯಾಮರಗಳು ಅವರವರ ಮನೆಯಂಗಳಕ್ಕೆ ಪೋಕಸ್ ಮಾಡಲಾಗಿದೆ ಹೊರತು ರಸ್ತೆಯನ್ನು ಕೇಂದ್ರೀಕರಿಸಿಲ್ಲ. ಇದು ಕೂಡ ಕಾರಿನ ಚಲನವಲನಕ್ಕೆ ಸವಾಲಾಗಿದೆ. ಎರಡು ದಿನಗಳಿಂದ ಪೊಲೀಸರು ತೀವ್ರ ತಪಾಸಣೆಯನ್ನು ನಡೆಸುತ್ತಿದ್ದಾರೆ. ಇರುವ ಸಿಸಿ ಕ್ಯಾಮರಾಗಳಿಂದ ದೃಶ್ಯಾವಳಿ ಪಡೆದು ಹುಡುಕಾಟ ನಡೆಸುತ್ತಿದ್ದಾರೆ.
ಬಹು ಕೋಟಿ ಆಸ್ತಿಯ ಒಡೆಯ
ಉದ್ಯಮಿ ಸುಲೈಮಾನ್ ಹಾಜಿ ಅವರು ಶ್ರೀಮಂತ ಕುಳವಾಗಿದ್ದು ನೂರಾರು ಕೋಟಿ ಆಸ್ತಿಯ ಒಡೆಯ ಎಂಬ ಮಾತುಗಳು ಸ್ಥಳೀಯವಾಗಿ ಕೇಳಿ ಬರುತ್ತಿದೆ. ಇದರಲ್ಲೂ ಕೆಲವು ಬೇನಾಮಿ ಹೆಸರಿನಲ್ಲಿ ಇದೆ ಎಂದು ಗುಟ್ಟಾಗಿ ಜನರಾಡಿಕೊಳ್ಳುತ್ತಿದ್ದಾರೆ. ಬಂಟ್ವಾಳ, ಪುತ್ತೂರು ಸೇರಿ ಹೊರ ಜಿಲ್ಲೆಗಳಲ್ಲೂ ಜಮೀನು, ಕಟ್ಟಡ ಇದೆಯೆಂದು, ಕಟ್ಟಡಗಳಿಂದ ನಿರಂತರವಾಗಿ ಬಾಡಿಗೆ ಬರುತ್ತಿದೆಯೆಂದು ಜನರಾಡಿಕೊಳ್ಳುತ್ತಿದ್ದಾರೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು23 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ದಕ್ಷಿಣ ಕನ್ನಡ18 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಕಾರ್ಯಕ್ರಮಗಳು24 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ಶಿಕ್ಷಣ22 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು18 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















