Connect with us

ಬಿಗ್ ನ್ಯೂಸ್

Naxal Free Karnataka | ನಕ್ಸಲ್ ಮುಕ್ತ ಕರ್ನಾಟಕ: ಸಿಎಂ ಎದುರು ಶರಣಾಗತಿಯಾದ 6 ನಕ್ಸಲರು : ತಲಾ 3 ಲಕ್ಷ ಬಿಡುಗಡೆ : 30 ನಕ್ಸಲರು ಅಮಿತ್ ಶಾ ಮುಂದೆ ಶರಣಾದಾಗ , ಶರಣಾದ ನಕ್ಸಲರಿಗೆ 41 ಲಕ್ಷ ರೂ ಪಡ್ನವೀಸ್ ಘೋಷಿಸುವಾಗ ಸುನೀಲ್ ಕುಮಾರ್ ಯಾಕೆ ಬೆಚ್ಚಿ ಬಿದ್ದಿಲ್ಲ ..? ಆ ನೆರವು ಯಾವಾ ಆಧಾರದಲ್ಲಿ ನೀಡಿದ್ದಾರೆ ಎಂದು ಪ್ರಶ್ನಿಸುವ ಧೈರ್ಯ ಇಲ್ವೇ..? ಪರಶುರಾಮ ಮೂರ್ತಿ ಹೆಸರಲ್ಲಿ ತೆರಿಗೆ ಹಣ ನುಂಗಿದಂತೆ ಅಲ್ಲ ಎಂದು ಸುನೀಲ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು (Naxal Free Karnataka) ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Ad Widget

Ad Widget

Ad Widget

Ad Widget

ನಕ್ಸಲ್ ಪುನರ್ವಸತಿ ಯೋಜನೆಯಡಿ 6 ನಕ್ಸಲರಾದ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಮಾರೆಪ್ಪ, ವಸಂತ ಹಾಗೂ ಜಿಷಾ ಅವರಿಗೆ ತಲಾ 3 ಲಕ್ಷ ರೂಪಾಯಿ ವಿತರಿಸುವ ಆದೇಶ ಹೊರಡಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು.

Ad Widget

Ad Widget <> Ad Widget

ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.

ಶರಣಾಗಿರುವ ನಕ್ಸಲರು ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ ಎಂದರು.

Ad Widget

Ad Widget

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಯಾಕೆ ಬೆಚ್ಚಿ ಬಿದ್ದಿಲ್ಲ? : ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ..?

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಸುನೀಲ್ ಕುಮಾರ್ ಗೆ ತಿರುಗೇಟು ನೀಡಿದರು.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!