ಸ್ಥಳೀಯ
DySP Ramachandrappa-ವಿಚಾರಣೆ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ – ಬಂಧನದಲ್ಲಿರುವ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಅಂತಹುದೇ ಕೇಸ್ !
ದೂರು ನೀಡಲು ಬಂದ ಮಹಿಳೆಗೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಧುಗಿರಿ ಡಿವೈಎಸ್ಪಿ ಎ.ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ತುಮಕೂರು: ದೂರು ನೀಡಲು ಬಂದ ಮಹಿಳೆಗೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಧುಗಿರಿ ಡಿವೈಎಸ್ಪಿ ಎ.ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಬುಧವಾರದಂದು ಕೊರಟಗೆರೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ.
ವ್ಯಕ್ತಿಯೊಬ್ಬ ನಿವೇಶನ ಕೊಡಿಸುವುದಾಗಿ ತನ್ನಿಂದ ಹಣ ಪಡೆದಿದ್ದು ನಿವೇಶನ ನೀಡದೆ, ಹಣವನ್ನೂ ಮರಳಿಸದೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಮಹಿಳೆ ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿದ್ದರು.
ಮಹಿಳಾ ಆಯೋಗವು ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಈ ಸಂಬಂಧ ವಿಚಾರಣೆ ನಡೆಸುವಂತೆ ಪತ್ರ ಬರೆದಿತ್ತು. ಡಿವೈಎಸ್ಪಿ ರಾಮಚಂದ್ರಪ್ಪ ಅವರು ಪ್ರಕರಣದ ವಿಚಾರಣೆ ನೆಪದಲ್ಲಿ ನನ್ನನ್ನು ಕಚೇರಿಗೆ ಕರೆಸಿಕೊಂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ತಾನು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಬಿಗ್ ನ್ಯೂಸ್
Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.
ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್‌ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್‌ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್‌ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.
ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ
ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.
ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್‌ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.
ಹಣ ಪಾವತಿಸದಿದ್ದರೆ ಒಡವೆ ಹರಾಜು?
ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್‌ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್‌ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.
ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.
ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.
-
ಶಿಕ್ಷಣ20 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು20 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್22 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು21 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ4 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ20 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಮಂಗಳೂರು3 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















