Uncategorized
ದಕ್ಷಿಣ ಕನ್ನಡ ಮುಂದುವರಿದ ಜಿಲ್ಲೆಯಾಗುವುದಕ್ಕೆ ಇಲ್ಲಿ ಶತಮಾನಗಳ ಹಿಂದೆ ನಡೆದ ಸಹಕಾರಿ ಚಳುವಳಿ ಮೂಲ ಕಾರಣ : ನಳಿನ್ ಕುಮಾರ್ ಕಟೀಲ್
ಚಾರ್ವಾಕ ಕೃಷಿಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ

ಕಾಣಿಯೂರು : ನ 11: “ಜನ ಅಕ್ಷರಗಳನ್ನೇ ಕಾಣದಿದ್ದ ಕಾಲಘಟ್ಟದಲ್ಲಿ ಸಹಕಾರಿ ಸಂಘ ಆರಂಭವಾಯಿತು. ಸಹಕಾರಿ ರಂಗಕ್ಕೆ ದೇಶಕ್ಕೆ ಮಾದರಿ ಜಿಲ್ಲೆ ದಕ್ಷಿಣ ಕನ್ನಡ. ಇದು ಮುಂದುವರಿದ ಜಿಲ್ಲೆಯಾಗುವುದಕ್ಕೆ ಜಿಲ್ಲೆಯಲ್ಲಿ ಶತಮಾನಗಳ ಹಿಂದೆ ನಡೆದ ಸಹಕಾರಿ ಚಳುವಳಿ ಮೂಲ ಪ್ರೇರಣೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಮತ್ತು ಮೂರು ದಿನದ ಕೃಷಿ ಮೇಳದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿ ಸಂಘವು ರೈತರ ಬದುಕಿಗೆ ಅರ್ಥಿಕ ಚೈತನ್ಯವನ್ನು ಕೊಡುವ ಕಾರ್ಯವನ್ನು ಮಾಡುತ್ತಿದೆ. ಇದು ಕೃಷಿಯ ಮೂಲಕ ಬದುಕು ಸಾಗಿಸಲು ಸಾಧ್ಯ ಎಂದು ತೋರಿಸಿ ಕೊಟ್ಟಿತ್ತು. ರೈತರ ಜತೆಗೆ ಕೂಲಿ ಕಾರ್ಮಿಕರಿಗೂ ಆರ್ಥಿಕ ಚಟುವಟಿಕೆ ನಡೆಸಲು ಸಹಕರಿಸುವ ಮೂಲಕ ಈ ಬ್ಯಾಂಕ್ ಈ ಗ್ರಾಮದ ಜನರ ಬದುಕನ್ನು ಬೆಳಗಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಈ ಸಂಸ್ಥೆ ಚಾರ್ವಾಕ ಹಾಗೂ ಸುತ್ತ ಮುತ್ತಲಿನ ಗ್ರಾಮದಲ್ಲಿ ಕೃಷಿಯ ಮೂಲಕ ಬದುಕು ಸಾಗಿಸುವವರ ಆಧಾರ ಸ್ಥಂಭವಾಗಿದೆ ಎಂದರು.
ಗಣೇಶ್ ಉದನಡ್ಕ ತಂಡಕ್ಕೆ ಮೆಚ್ಚುಗೆ
ಸಂಘಕ್ಕೆ ಆರ್ಥಿಕವಾಗಿ ಹೊರೆಯಾಗದಂತೆ ಹೊರಗಿನ ದಾನಿಗಳಿಂದ ಹಣವನ್ನು ಸಂಗ್ರಹಿಸಿ ಜಾಗ ಖರೀದಿ ಸಭಾಭವನ ನಿರ್ಮಾಣ ಹಾಗೂ ಶತಮಾನೋತ್ಸವದ ಕಾರ್ಯಕ್ರಮ ಮಾಡಿದ ಗಣೇಶ್ ಉದನಡ್ಕ ನೇತ್ರತ್ವದ ತಂಡದ ಕಾರ್ಯ ಜಿಲ್ಲೆಗೆ ಮಾದರಿ. ಕೃಷಿ ಮೇಳ ಆಯೋಜಿಸುವ ಮೂಲಕ ಕೃಷಿಕರಿಗೆ ಬೇಕಾದ ಮಾಹಿತಿ ಹಾಗೂ ಉಪಕರಣಗಳನ್ನು ಒದಗಿಸುವ ಅತ್ಯಾಪೂರ್ವ ಕಾರ್ಯಕ್ರಮ ಈ ತಂಡ ಮಾಡಿದೆ. ಜಿಲ್ಲೆಯ ಮಾದರಿ ಸಹಕಾರಿ ಸಂಘವಾಗಿ ಬೆಳೆಯಲಿ ಎಂದು ಮಾಜಿ ಸಂಸದ , ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಭ ಹಾರೈಸಿದರು.

ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿ “ಪ್ರಸ್ತುತ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್ ಗಳು ಔನ್ನತ್ಯದತ್ತ ಸಾಗುತ್ತಿದ್ದು, ರಾಷ್ಟ್ರಿಕೃತ ಬ್ಯಾಂಕ್ ಗಳು ಕೆಳಮುಖದತ್ತ ಸಾಗುತ್ತಿದೆ. ಸಹಕಾರಿ ಬ್ಯಾಂಕ್ ಗಳು ರೈತನಿಗೆ ಸಂಕಷ್ಟ ಎದುರಾದಾಗ ಆತನ ಬೆನ್ನಿಗೆ ನಿಂತಿರುವುದೆ ಇದಕ್ಕೆ ಕಾರಣ. ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಪಾರದರ್ಶಕವಾಗಿ ಇದ್ದರೇ ಆಗ ರೈತರಿಗೆ ಆ ಬ್ಯಾಂಕಿನ ಮೇಲೆ ವಿಶ್ವಾಸ ಮೂಡಿದೆ. ಚಾರ್ವಕದಲ್ಲಿ ಇದು ಸಾಧ್ಯವಾಗಿದೆ ಎಂದರು.
ಕೃಷಿ ಮೇಳ ಉದ್ಘಾಟನೆ :
ಮೂರು ದಿನಗಳ ಕಾಲ ( ಜ 11, 12 ಮತ್ತು 13) ನಡೆಯುವ ಕೃಷಿ ಮೇಳವನ್ನು ಮೇದಪ್ಪ ಗೌಡ ನಾವೂರು ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು.
ಸನ್ಮಾನ: ಸಂಘದ ಮಾಜಿ ಉಪಾಧ್ಯಕ್ಷರುಗಳಾದ ಕೃಷ್ಣಪ್ಪ ಗೌಡ ದೋಳ್ಪಾಡಿ, ಎನ್ ಆನಂದ ಗೌಡ ಕಾಣಿಯೂರು, ಅಚ್ಯುತ ಕುಮಾರ್ ಕಾಣಿಯೂರು, ಕೆ ಅಣ್ಣಿ ಪೂಜಾರಿ ಕಳೆಂಜೋಡಿ, ಕೆ ಎನ್ ಪದ್ಮಯ್ಯ ಗೌಡ ಕಾಣಿಯೂರು, ಕೇಶವ ಗೌಡ ಕರಂದ್ಲಾಜೆ ಬಿ ರಾಮಣ್ಣ ಗೌಡ ಪೈಕ, ಕೆ ಅನಂತರಾಮ ಉಪಾದ್ಯಯ, ಎಂ ವೆಂಕಟರಮಣ ಗೌಡ ದೋಳ್ಪಾಡಿ ಪುಟ್ಟಣ್ಣ ಗೌಡ ಪೈಕ , ಸದಾನಂದ ರೈ,ವಿಜಯ ಕುಮಾರ್ ಸೊರಕೆ, ನರೇಂದ್ರ ಗೌಡ ಅಭಿಕಾರ್ ಅವರ ಶ್ರೀಮತಿ, ಸೀತಾರಾಮ ಗೌಡ ಖಂಡಿಗ ಹಾಗೂ ಮುರಳಿಧರ ಪುಣ್ಚತ್ತಾರು ಸಭೆಯಲ್ಲಿ ಸನ್ಮಾನಿಸಲಾಯಿತು.

ನಾಟಿ ವೈದರಿಗೆ ಸನ್ಮಾನ:
ಶಾಂತಮ್ಮ ಕೊಪ್ಪ, ಪುಷ್ಪಲತಾ ಗುಜರ್ಮೆ, ಗಿರೀಜ ಎಣ್ಮೂರು, ಪದ್ಮಾವತಿ ಕೊಲ್ಯ, ಪೂವಕ್ಕ ಎಳುವೆ, ಮೋನಕ್ಕ ಉದಲಡ್ಡ ಹಾಗೂ ದಿನೇಶ್ ಮಾಳ ಮಾಡಲಾಯಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ:
ಪುನಿತ ಮುದ್ವ , ಪ್ರಿಯಾ ಅಂಬುಲ, ಸಿಂಚನಾ ಅಂಬುಲ, ಧ್ರುವಿ ಬಾಕಿಲ, ತೃಷಾ ಕೊಡಂದೂರು, ಡಾ| ಕಿರಣ್ ಮುಕರಂಜ, ಉತ್ತಮ್ ಜಿ, ಶೀನಪ್ಪ ಪರವ, ಹೇಮಂತ್ ಮರ್ಲಾನಿ,
ಗೌರವ:
ಖೋ ಖೋ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಚಿನ್ನದ ಪದಕ ಸಹಿತ ಹಲವು ಪದಕಗಳನ್ನು ಗೆದ್ದಿರುವ ದೀಕ್ಷಾ ಕುಕ್ಕುನಡ್ಕ, ಸಾಮಾಜಿಕ , ಧಾರ್ಮಿಕ ರಾಜಕೀಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ರಾಕೇಶ್ ರೈ ಕೆಡೆಂಜಿಯವರನ್ನು ಗೌರವಿಸಲಾಯಿತು.
ನಿರ್ದೇಶಕರು ಎಸ್ ಸಿಡಿಸಿಸಿ ಬ್ಯಾಂಕ್ ಮಂಗಳೂರಿನ ಮನ್ಮಥ ಎಸ್ ಎನ್ ಹಾಗೂ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಆನಂದ ಗೌಡ ಮತ್ತು ಧರ್ಮೇಂದ್ರ ಕಟ್ಟತ್ತಾರು, ಕೃಷ್ಣ ಕುಮಾರ್ ಮಡ್ತಿಲ, ಪ್ರದೀಪ್ ಆರ್ ಗೌಡ ಅರುವಗುತ್ತು, ಧನಂಜಯ ಕೆನಾಜೆ, ಯುಪಿ ರಾಮಕೃಷ್ಣ ಗೌಡ, ಶಿವಪ್ರಸಾದ್ ಇ, ಮೇದಪ್ಪ ಗೌಡ ನಾವೂರು ಮಹೇಶ್ ಕೆ ಸವಣೂರು, ರೋಹಿತ್ ಗೌಡ ಅನಿಲ, ತಾರನಾಥ ಕಾಯಾರ್ಗ ಉಪಸ್ಥಿತರಿದ್ದರು.
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಗಣೇಶ್ ಕೆ ಎಸ್ ಉದನಡ್ಕ ಸ್ವಾಗತಿಸಿ ಸೇವಾ ಸಹಕಾರಿ ಸಂಘ ಬೆಳೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಕುಮಾರ್ ಪಿ ಧನ್ಯವಾದ ಆರ್ಪಿಸಿದರು. ವಸಂತ ಎಸ್.ಡಿ ಕಾರ್ಯಕ್ರಮ ನಿರೂಪಿಸಿದರು. ನಿನಾದ, ಧನ್ವಿತ, ಚಾರ್ವಿ ಪ್ರಾರ್ಥಿಸಿದರು.
“ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶತಮಾನವನ್ನು ಪೂರೈಸಿದೆ. ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಮಾರ್ಗದರ್ಶನದಲ್ಲಿ ಚಾರ್ವಾಕ ಭಾಗದ ಅನೇಕ ಹಿರಿಯರು ಸೇರಿಕೊಂಡು, ಉಪ್ಪಿನಂಗಡಿ ತಾಲೂಕು ಕೇಂದ್ರ ಆಗಿದ್ದ ಸಂದರ್ಭದಲ್ಲಿ ಚಾರ್ವಾಕ ಗ್ರಾಮದಲ್ಲಿ ಸಂಘ ಸ್ಥಾಪನೆ ಮಾಡಿದ್ದರು. ಇದೀಗ ಶತಮಾನೋತ್ಸವದ ಅಂಗವಾಗಿ ಸ್ಥಳೀಯ 4.30 ಸೆಂಟ್ಸ್ ಜಾಗವನ್ನು ಖರೀದಿ ಮಾಡಿಕೊಂಡು ಒಟ್ಟು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡವನ್ನು ರಚಿಸಲಾಗಿದೆ. ಶತಮಾನದ ಅಂಗವಾಗಿ ಕೃಷಿಮೇಳ ಉದ್ಘಾಟನೆ, ನೂತನ ಕಟ್ಟಡ ಉದ್ಘಾಟನೆ ಹಾಗೂ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.” – ಗಣೇಶ್ ಉದನಡ್ಕ, ಅಧ್ಯಕ್ಷರು, ಚಾರ್ವಾಕ ಪ್ರಾ.ಕೃ. ಪ.ಸ.ಸಂಘ ಚಾರ್ವಾಕ
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.















