[…]" /> […]"> ವಾಯುಸೇನಾ ಅಧಿಕಾರಿ ವರ್ಗಾವಣೆ ನೆಪದಲ್ಲಿ ಪುತ್ತೂರಿನ ರೆಸಾರ್ಟ್ ನಲ್ಲಿ ಪಾರ್ಟಿ : ವೈನ್ʼನಲ್ಲಿ ಮಧ್ಯ ಬೆರೆಸಿ ಬ್ಯಾಂಕ್ ಉದ್ಯೋಗಿಯ ರೇಪ್..! ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ : ಪ್ರಕರಣದ ದಾರಿ ತಪ್ಪಿಸಲು ನಡೆದಿತ್ತು ಭಾರಿ 'ಮಾಸ್ಟರ್ ಪ್ಲಾನರಿ..!' - Nikhara News | Kannada News Website
Connect with us

ಪುತ್ತೂರು

ವಾಯುಸೇನಾ ಅಧಿಕಾರಿ ವರ್ಗಾವಣೆ ನೆಪದಲ್ಲಿ ಪುತ್ತೂರಿನ ರೆಸಾರ್ಟ್ ನಲ್ಲಿ ಪಾರ್ಟಿ : ವೈನ್ʼನಲ್ಲಿ ಮಧ್ಯ ಬೆರೆಸಿ ಬ್ಯಾಂಕ್ ಉದ್ಯೋಗಿಯ ರೇಪ್..! ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ : ಪ್ರಕರಣದ ದಾರಿ ತಪ್ಪಿಸಲು ನಡೆದಿತ್ತು ಭಾರಿ ‘ಮಾಸ್ಟರ್ ಪ್ಲಾನರಿ..!’

Published

on

Ad Widget

Ad Widget

Ad Widget

Ad Widget

ಮಂಗಳೂರು : ಪಾರ್ಟಿಯಲ್ಲಿ ಯುವತಿಗೆ ಅಮಲು ಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಮಂಗಳೂರು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ನಿವಾಸಿ ಬ್ರಿಯಾನ್ ರಿಚರ್ಡ್ ಅಮ್ಮನ್ನ (34) ಶಿಕ್ಷೆಗೊಳಗಾದ ವ್ಯಕ್ತಿ. ಸಂತ್ರಸ್ತ ಯುವತಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು,  ಆಕೆಗ ಬ್ಯಾಂಕಿನ  ಗ್ರಾಹಕರಾಗಿದ್ದ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಜಾಯ್ಲಿನ್ ಗ್ಲಾನೆಲ್ ಎಂಬವರು ಸ್ನೇಹಿತರಾಗಿದ್ದರು.

Ad Widget

Ad Widget alt="Ad Widget"/>

Ad Widget

ಗ್ಲಾನೆಲ್ ಅವರಿಗೆ  ಅಂಡಮಾನ್ ಗೆ ವರ್ಗಾವಣೆಯಾಗಿದ್ದು, ಇದರ ನೆಪದಲ್ಲಿ 2021ರ ಫೆಬ್ರವರಿ 5ರಂದು ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೋಡಿಕಾಡು ಎಂಬಲ್ಲಿನ ಮಾಸ್ಟರ್ ಪ್ಲಾನರಿಯವರಿಗೆ ಸೇರಿದ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು.

Ad Widget

Ad Widget <> Ad Widget

ಪಾರ್ಟಿಗೆ ಯುವತಿಯನ್ನೂ ಆಹ್ವಾನಿಸಿದ್ದು, ಜಾಯ್ಲಿನ್ ಅವರ ಸ್ನೇಹಿತನ ಕಾರಿನಲ್ಲಿ ಪುತ್ತೂರಿಗೆ ತೆರಳಿದ್ದರು. ಸ್ನೇಹಿತರು ಪಾರ್ಟಿಯಲ್ಲಿ ತೊಡಗಿದ್ದಾಗ  ಜಾಯ್ಲಿನ್ ಸ್ನೇಹಿತ  ಆರೋಪಿ ಬ್ರಿಯಾನ್ ಸಂತ್ರಸ್ತೆಯನ್ನು ಪರಿಚಯ ಮಾಡಿಸಿಕೊಂಡಿದ್ದ. ಈ ವೇಳೆ ಯುವತಿಗೆ ವೈನ್ ಎಂದು ಕುಡಿಯಲು  ಪಾನೀಯ ಕೊಟ್ಟಿದ್ದ.   ಪಾರ್ಟಿ ಮುಗಿದ ಬಳಿಕ ಎಲ್ಲರೂ ಗೆಸ್ಟ್ ಹೌಸ್ ರೂಮಿಗೆ ತೆರಳಿದ್ದರು.

 ಪಾರ್ಟಿ ಆಯೋಜಿಸಿದ್ದ ಜಾಯ್ಲಿನ್ ಮತ್ತು ರೆಬೆಕಾ ಎಂಬವರು ಯುವತಿ ಇದ್ದ ರೂಮಿನಲ್ಲೇ  ಕೆಲ ಕಾಲ ಕೂತು ಮಾತುಕತೆ ನಡೆಸಿದ್ದರು. ಈ ವೇಳೆ ಯುವತಿ ನಿದ್ದೆಗೆ ಜಾರಿದ್ದರು. ಅರ್ಧ ರಾತ್ರಿಯಲ್ಲಿ ಯುವತಿ ಎಚ್ಚರಗೊಂಡಾಗ ಜಾಯ್ಲಿನ್ ಮತ್ತು ರೆಬೆಕಾ ರೂಮಿನಲ್ಲಿ ಇರಲಿಲ್ಲ. ಈಕೆಯ ರೂಮಿನಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ ಬ್ರಿಯಾನ್ ರಿಚರ್ಡ್ ಅಲ್ಲಿಗೆ ಬಂದು ಯುವತಿ ಮೇಲೆ ಬಲವಂತದಿಂದ ಅತ್ಯಾಚಾರ ನಡೆಸಿದ್ದಾನೆ. ಯುವತಿ ಮರುದಿನ ಫೆ.6ರಂದು ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಳು.

Ad Widget

Ad Widget

ಯುವತಿಗೆ ತಿಳಿಯದಂತೆ ಆರೋಪಿ ಬ್ರಿಯಾನ್, ಕುಡಿಯಲು ಕೊಟ್ಟಿದ್ದ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿದ್ದ. ಆಕೆ  ಅಮಲಿನಲ್ಲಿದ್ದಾಗ ಅತ್ಯಾಚಾರ ನಡೆಸಿದ್ದಾನೆ. ಪುತ್ತೂರು ಮಹಿಳಾ ಠಾಣೆ ನಿರೀಕ್ಷಕ ತಿಮ್ಮಪ್ಪ ನಾಯ್ಕ ದೋಷಾರೋಪ ಸಲ್ಲಿಸಿದ್ದರು.

ಸಂತ್ರಸ್ತೆ ಪರವಾಗಿ 21 ಸಾಕ್ಷಿದಾರರು ಕೋರ್ಟಿನಲ್ಲಿ ಸಾಕ್ಷಿ ಹೇಳಿದ್ದರು. ವಿಚಾರಣೆ ನಡೆಸಿದ ಕಾಂತರಾಜು ಎಸ್‌.ವಿ. ಅವರು ದಾಖಲೆಗಳನ್ನು ನ್ಯಾಯಾಧೀಶ ಆರೋಪ ಸಾಬೀತಾಗಿದ್ದರಿಂದ ತೀರ್ಪು ಪ್ರಕಟಿಸಿದ್ದು, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ.

ಪ್ರಕರಣದ ದಾರಿ ತಪ್ಪಿಸಲು ಯತ್ನ

ಇನ್ನು ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪುತ್ತೂರು ಹಾಗು ಜಿಲ್ಲೆಯಲ್ಲಿದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಯಾಗಿತ್ತು.  ಪ್ರಕರಣದ ದಾರಿ ತಪ್ಪಿಸಲು ಕೆಲವು ಪ್ರತಿಷ್ಟಿತರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಆಗ ಕೇಳಿ ಬಂದಿದ್ದವು. ಯುವತಿಗೆ ನೀಡಲಾದ ಅಮಲು ಪದಾರ್ಥ ನಿಷೇಧಿತ ಮಾದಕ ವಸ್ತು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಇದು ಆ ಗೆಸ್ಟ್‌ ಹೌಸ್‌ ಗೆ ಬಂದದ್ದು ಹೇಗೆ ಎಂಬ ಬಗ್ಗೆಯೂ ಭಾರೀ ಚರ್ಚೆ ನಡೆದಿತ್ತು. ಪ್ರಕರಣ ದಾಖಲಾದ ನಾಲ್ಕು ವರ್ಷದೊಳಗೆ ತನಿಖೆ ಹಾಗೂ ವಿಚಾರಣೆ ನಡೆದು ತೀರ್ಪು ಬಂದಿದೆ

Ad Widget
Click to comment

Leave a Reply

ದಕ್ಷಿಣ ಕನ್ನಡ

Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ

Published

on

Ad Widget

Ad Widget

Ad Widget

Ad Widget


ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಈ ಬೃಹತ್ ಜನಸೇವಾ ಕಾರ್ಯಕ್ರಮ ನ.22ರಂದು (ರವಿವಾರ) ಬೆಳಿಗ್ಗೆ 9 ಗಂಟೆಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

Ad Widget

Ad Widget

Ad Widget

Ad Widget

ಸುಮಾರು ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಿಸುವ ಬೃಹತ್ ಸಂಕಲ್ಪದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸುಮಾರು ₹4 ಕೋಟಿ ವೆಚ್ಚ ಮಾಡಲಾಗುತ್ತಿದೆ. ಉಡುಗೊರೆ ವಿತರಣೆ ಮಾತ್ರವಲ್ಲದೆ, ಬೃಹತ್ ಅನ್ನದಾನ, ದೋಸೆ ಮೇಳ ಸೇರಿದಂತೆ ಹಲವು ವಿಶೇಷ ವ್ಯವಸ್ಥೆಗಳು ಈ ಬಾರಿಯ ಜನಮನದ ಆಕರ್ಷಣೆಯಾಗಲಿವೆ. ಪುತ್ತೂರು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದಲೂ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಕೊಂಬೆಟ್ಟು ಕ್ರೀಡಾಂಗಣ ಜನಸಾಗರಕ್ಕೆ ಸಾಕ್ಷಿಯಾಗಲಿದೆ.

Ad Widget

Ad Widget alt="Ad Widget"/>

Ad Widget

14 ವರ್ಷಗಳ ಜನಸೇವೆಯ ಪಯಣ; ಜನಮನದಲ್ಲಿ ವಿಶೇಷ ಸ್ಥಾನ!

Ad Widget

Ad Widget <> Ad Widget

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಮಾಜದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ವರ್ಗದ ಜನರೊಂದಿಗೆ ಹಬ್ಬದ ಸಂತೋಷ ಹಂಚಿಕೊಳ್ಳುವ ಆಶಯದೊಂದಿಗೆ ಆರಂಭಗೊಂಡ ‘ಅಶೋಕ ಜನಮನ’ ಇಂದು ಪುತ್ತೂರಿನ ಪ್ರಮುಖ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಕಳೆದ 14 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ತನ್ನ ವ್ಯಾಪ್ತಿ ಹಾಗೂ ಜನಪ್ರಿಯತೆಯನ್ನು ವಿಸ್ತರಿಸಿಕೊಂಡಿದೆ. ರಾಜಕೀಯ, ಜಾತಿ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆ ಪಡೆದುಕೊಳ್ಳುವ ಮುಕ್ತ ಅವಕಾಶ ಇದರ ವಿಶೇಷತೆಯಾಗಿದೆ.

Ad Widget

Ad Widget

ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಉದ್ಯಮದ ಮೂಲಕ ಗಳಿಸಿದ ಸಂಪನ್ಮೂಲದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವ ಉದ್ದೇಶದಿಂದ ಈ ಸೇವಾ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಅಶೋಕ ಜನಮನ ಕೇವಲ ಉಡುಗೊರೆ ವಿತರಣಾ ಕಾರ್ಯಕ್ರಮವಾಗಿ ಉಳಿಯದೆ, ಜನರೊಂದಿಗೆ ಬೆರೆಯುವ ಮತ್ತು ಹಬ್ಬದ ಸಂತೋಷವನ್ನು ಹಂಚಿಕೊಳ್ಳುವ ಬೃಹತ್ ವೇದಿಕೆಯಾಗಿ ರೂಪುಗೊಂಡಿದೆ.

ಒಂದು ಲಕ್ಷ ಮಂದಿಗೆ ಉಡುಗೊರೆ; ಮನೆಮಂದಿಗೆಲ್ಲ ದೀಪಾವಳಿ ಕೊಡುಗೆ!
ಈ ಬಾರಿಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಬೃಹತ್ ಉಡುಗೊರೆ ವಿತರಣೆಯಾಗಿದೆ. ಸುಮಾರು ಒಂದು ಲಕ್ಷ ಮಂದಿಗೆ ಉಡುಗೊರೆ ತಲುಪಿಸುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಲಾಗಿದೆ.

ಸೀರೆ, ಬೆಡ್‌ಶೀಟ್, ಬಾತ್ ಟವೆಲ್, ತಟ್ಟೆ, ಬಟ್ಟಲು, ಗ್ಲಾಸ್ ಸೇರಿದಂತೆ ವಿವಿಧ ವಸ್ತುಗಳನ್ನು ಉಡುಗೊರೆಯಾಗಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಮಂದಿಗೆ ಉಪಯುಕ್ತವಾಗುವ ವಸ್ತುಗಳನ್ನು ನೀಡುವ ಮೂಲಕ ಪ್ರತಿಯೊಂದು ಕುಟುಂಬದಲ್ಲೂ ದೀಪಾವಳಿಯ ಸಂತೋಷ ಮೂಡಿಸುವ ಪ್ರಯತ್ನ ಇದಾಗಿದೆ.

ಉಡುಗೊರೆ ವಿತರಣೆಗೆ ಪ್ರತ್ಯೇಕ ಕೌಂಟರ್‌ಗಳು ಹಾಗೂ ವ್ಯವಸ್ಥಿತ ನಿರ್ವಹಣೆಗೆ ವಿಶೇಷ ತಂಡಗಳನ್ನು ನಿಯೋಜಿಸುವ ಮೂಲಕ ಜನದಟ್ಟಣೆಯನ್ನು ನಿಯಂತ್ರಿಸಲು ಸಿದ್ಧತೆ ಮಾಡಲಾಗಿದೆ.

ಒಂದು ಲಕ್ಷ ದೋಸೆ; 60 ಸಾವಿರಕ್ಕೂ ಅಧಿಕ ಮಂದಿಗೆ ಭರ್ಜರಿ ಅನ್ನದಾನ!
ಅಶೋಕ ಜನಮನದ ಮತ್ತೊಂದು ವಿಶೇಷ ಆಕರ್ಷಣೆ ಬೃಹತ್ ದೋಸೆ ಮೇಳ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಬೆಳಗ್ಗಿನಿಂದಲೇ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು ಒಂದು ಲಕ್ಷ ದೋಸೆಗಳನ್ನು ತಯಾರಿಸಿ ವಿತರಿಸುವ ಗುರಿ ಹೊಂದಲಾಗಿದೆ.

ಇದರೊಂದಿಗೆ ಮಧ್ಯಾಹ್ನ ಸುಮಾರು 60 ಸಾವಿರಕ್ಕೂ ಅಧಿಕ ಮಂದಿಗೆ ಅನ್ನದಾನ ಆಯೋಜಿಸಲಾಗಿದೆ. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಆಹಾರ ವಿತರಣೆ ಹಾಗೂ ಜನರ ಸಂಚಾರಕ್ಕೆ ಅಗತ್ಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿರುವುದು ವಿಶೇಷವಾಗಿದೆ.

ರಾಜಕೀಯ ನಾಯಕರ ದಂಡು; ಸಚಿವರು, ಮಾಜಿ ಸಚಿವರ ಉಪಸ್ಥಿತಿ
ಕಾರ್ಯಕ್ರಮಕ್ಕೆ ರಾಜ್ಯಮಟ್ಟದ ರಾಜಕೀಯ ನಾಯಕರು, ಸಚಿವರು, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕರ್ನಾಟಕ ಸರಕಾರದ ಆರೋಗ್ಯ ಸಚಿವ ಯು.ಟಿ. ಖಾದರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ಸೋಜಾ, ಪಿ.ವಿ. ಮೋಹನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ಜಿ.ಆರ್. ಲೋಬೊ, ಗಫೂರ್, ಲಾವಣ್ಯ ಬಲ್ಲಾಳ್, ಟಿ.ಎಂ. ಶಹೀದ್, ಶಾಲೆಟ್ ಪಿಂಟೋ, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಚಂದ್ರಹಾಸ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಎಂ.ಬಿ. ವಿಶ್ವನಾಥ ರೈ, ಪಝಲ್ ರಹೀಂ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ರಾಜಾರಾಮ್, ಕೃಷ್ಣಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ ಆಳ್ಕೆ, ಯು.ಟಿ. ತೌಸಿಫ್, ಜೋಕಿಂ ಡಿಸೋಜಾ, ಉಷಾ ಅಂಚನ್, ದಿವಾಕರ ದಾಸ್ ನೇರ್ಲಾಜೆ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಇದಲ್ಲದೆ ಸಂತೋಷ್ ಕುಮಾರ್ ಶೆಟ್ಟಿ, ಪದ್ಮರಾಜ್ ಆರ್. ಪೂಜಾರಿ, ಎಂ.ಎಸ್. ಮಹಮ್ಮದ್, ರಕ್ಷಿತ್ ಶಿವರಾಮ್, ಮಿಥುನ್ ರೈ, ಇನಾಯತ್ ಆಲಿ, ಹೇಮನಾಥ ಶೆಟ್ಟಿ ಕಾವು, ದುರ್ಗಾಪ್ರಸಾದ್ ರೈ ಕುಂಬ್ರ, ಉಮಾನಾಥ ಶೆಟ್ಟಿ, ಅಮಲ ರಾಮಚಂದ್ರ, ಮಲ್ಲಿಕಾ ಪಕ್ಕಳ, ಕೃಷ್ಣಪ್ಪ ಸುಳ್ಯ, ರಘು ಬೆಳ್ಳಿಪ್ಪಾಡಿ, ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ರಾಧಾಕೃಷ್ಣ ನಾಯಕ್ ಉಪ್ಪಿನಂಗಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಯತಿವರ್ಯರಿಂದ ಧಾರ್ಮಿಕ ಆಶೀರ್ವಚನ
ಕಾರ್ಯಕ್ರಮಕ್ಕೆ ಧಾರ್ಮಿಕ ಮೆರುಗು ನೀಡಲು ಹಿಂದೂ ಸಮಾಜದ ಯತಿವರ್ಯರು ಆಗಮಿಸಲಿದ್ದಾರೆ. ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಧಾರ್ಮಿಕ ಆಶೀರ್ವಚನ ನೀಡಲಿದ್ದಾರೆ.

ಮಳೆ ಕಾರಣದಿಂದ ಮುಂದೂಡಿಕೆಯಾಗಿದ್ದ ಕಾರ್ಯಕ್ರಮ
ನವೆಂಬರ್ 8ರಂದು ನಡೆಯಬೇಕಿದ್ದ ಅಶೋಕ ಜನಮನ ಕಾರ್ಯಕ್ರಮವನ್ನು ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನವೆಂಬರ್ 22ಕ್ಕೆ ಮುಂದೂಡಲಾಗಿತ್ತು. ಇದೀಗ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಆಯೋಜಿಸಲು ಟ್ರಸ್ಟ್ ಮುಂದಾಗಿದೆ.

ಹಬ್ಬದ ಸಂಭ್ರಮಕ್ಕೆ ಜನಮನದ ಸ್ಪರ್ಶ
ಒಂದು ಕಡೆ ಬೃಹತ್ ಉಡುಗೊರೆ ವಿತರಣೆ, ಮತ್ತೊಂದೆಡೆ ಅನ್ನದಾನ ಹಾಗೂ ದೋಸೆ ಮೇಳ, ಇನ್ನೊಂದೆಡೆ ರಾಜಕೀಯ ಮತ್ತು ಧಾರ್ಮಿಕ ಗಣ್ಯರ ಸಮಾಗಮ. ಹೀಗೆ ಹಲವು ವಿಶೇಷತೆಗಳನ್ನು ಒಳಗೊಂಡಿರುವ ಅಶೋಕ ಜನಮನ-2026 ಪುತ್ತೂರಿನಲ್ಲಿ ಮತ್ತೊಂದು ಬೃಹತ್ ಜನಸಂಗಮಕ್ಕೆ ವೇದಿಕೆಯಾಗಲಿದೆ.

ದೀಪಾವಳಿ ಎಂದರೆ ಕೇವಲ ಬೆಳಕಿನ ಹಬ್ಬವಲ್ಲ, ಸಂತೋಷವನ್ನು ಹಂಚಿಕೊಳ್ಳುವ ಹಬ್ಬವೂ ಹೌದು ಎಂಬ ಆಶಯದೊಂದಿಗೆ ರೂಪುಗೊಂಡಿರುವ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರು ಪಕ್ಷಾತೀತವಾಗಿ ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ರೈ ಎಸ್ಟೇಟ್ ಟ್ರಸ್ಟ್‌ನ ಸಂಘಟಕರು ಮನವಿ ಮಾಡಿದ್ದಾರೆ.

Ad Widget
Continue Reading

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!